ಜೈಪುರ: ರಾಜಸ್ಥಾನದ ಝಲ್ರಾಪಟನ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮಾಜಿ ಸಿಎಂ ವಸುಂಧರಾ ರಾಜೆ (Vasundhara Raje Scindia) ಅವರು, 53,193 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
#WATCH | On party’s lead in Rajasthan, BJP leader Vasundhara Raje Scindia says, “This victory is of the mantra of ‘Sabka saath, sabka vishwas and sabka prayaas’ given by PM Modi. It is the victory of the guarantee given by the PM. It is also the victory of the strategy given by… pic.twitter.com/RtkxfgJnQu
— ANI (@ANI) December 3, 2023
Advertisement
ಕಾಂಗ್ರೆಸ್ ಅಭ್ಯರ್ಥಿ ರಾಮ್ ಲಾಲ್ ಚೌಹಾಣ್ ವಿರುದ್ಧ ವಸುಂಧರಾ 51,000ಕ್ಕೂ ಹೆಚ್ಚು ಮತಗಳ (Votes) ಅಂತರದಿಂದ ಗೆಲುವು ಸಾಧಿಸಿದ್ದಾರೆ. 25ನೇ ಸುತ್ತಿನ ನಂತರ ಒಟ್ಟು 1,38,831 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಬಾಕಿಯಿದೆ. ಇದನ್ನೂ ಓದಿ: UPಗೆ ಯೋಗಿ ಆದಿತ್ಯನಾಥ್, ರಾಜಸ್ಥಾನಕ್ಕೆ ಬಾಲಕನಾಥ್ – ಸಿಎಂ ರೇಸ್‌ನಲ್ಲಿ ಮತ್ತೊಬ್ಬರು ಯೋಗಿ
Advertisement
Advertisement
ತಮ್ಮ ಈ ಗೆಲುವಿನಿಂದ ಝಲ್ರಾಪಟನ್ ಕ್ಷೇತ್ರವೂ ಬಿಜೆಪಿಯ ಭದ್ರಕೋಟೆ ಎಂಬುದನ್ನು ಸಾಬೀತು ಮಾಡಿದ್ದಾರೆ. 2003ರಿಂದ ಝಲ್ರಾಪಟನ್ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ವಸುಂಧರಾ ಅವರು ಸತತ ಗೆಲುವಿನ ಓಟ ಮುಂದುವರಿಸಿದ್ದಾರೆ. ಈ ಬಾರಿ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂಬ ಮಾತುಗಳು ಬೆಂಬಲಿಗರಿಂದ ಕೇಳಿಬರುತ್ತಿದೆ.
Advertisement
ಈ ಕುರಿತು ಮಾತನಾಡಿರುವ ವಸುಂಧರಾ ರಾಜೇ ಸಿಂಧಿಯಾ ಅವರು, ಇದು ಪ್ರಧಾನಿ ಮೋದಿ ಅವರ ಸಬ್ಕಾ ಸಾಥ್, ಸಬ್ಕಾ ವಿಶ್ವಾಸ್, ಸಬ್ಕಾ ಪ್ರಯಾಸ್ʼ ಮಂತ್ರ ತಂದ ಗೆಲುವು. ಇದು ಮೋದಿ ಗ್ಯಾರಂಟಿಯ (Modi Guarantee) ಗೆಲುವು, ಅಮಿತ್ ಶಾ (Amit Shah) ಕಾರ್ಯತಂತ್ರದ ಗೆಲುವು, ನಡ್ಡಾ ಜೀ ಅವರ ಸಮರ್ಥ ನಾಯಕತ್ವಕ್ಕೆ ಸಿಕ್ಕ ಗೆಲುವು, ಮುಖ್ಯವಾಗಿ ನಮ್ಮ ಪಕ್ಷದ ಕಾರ್ಯಕರ್ತರ ಗೆಲುವು ಎಂದು ಹೇಳಿದ್ದಾರೆ.
ರಾಜಸ್ಥಾನವು ಒಟ್ಟು 199 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಬಹುಮತಕ್ಕೆ 100 ಸ್ಥಾನಗಳ ಅಗತ್ಯವಿದೆ. ಭಾನುವಾರ ಮಧ್ಯಾಹ್ನ 3 ಗಂಟೆ ನಂತರ ಫಲಿತಾಂಶದಲ್ಲಿ ಬಿಜೆಪಿ 115 ಸ್ಥಾನಗಳೊಂದಿಗೆ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 69, ಇತರೆ 15 ಸ್ಥಾನಗಳಲ್ಲಿವೆ. ಇದನ್ನೂ ಓದಿ: ಕೆಸಿಆರ್, ಕೆಟಿಆರ್‌ಗೆ ತೆಲಂಗಾಣ ಜನರೇ ಉತ್ತರ ಕೊಟ್ಟಿದ್ದಾರೆ: ‘ಕೈ’ ಮುನ್ನಡೆಗೆ ಡಿಕೆಶಿ ಪ್ರತಿಕ್ರಿಯೆ