ಬೆಂಗಳೂರು: ದೆಹಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದು ಕರ್ನಾಟಕ ಬಿಜೆಪಿಗೆ ಶಕ್ತಿ ತುಂಬಿದಂತಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ದೆಹಲಿ ಚುನಾವಣಾ ಫಲಿತಾಂಶವು ಮುಂದಿನ ಕರ್ನಾಟಕ, ತೆಲಂಗಾಣದ ಚುನಾವಣೆಗೆ ದಾರಿದೀಪವಾಗಲಿದೆ. ಇದು ದೇಶಕ್ಕೆ ಸಿಕ್ಕಿರುವ ಗೆಲುವು. ಡಿಕೆಶಿ ಗ್ಯಾರಂಟಿ ದೆಹಲಿಯಲ್ಲಿ ಠುಸ್ ಪಟಾಕಿ ಆಗಿದೆ ಎಂದು ವ್ಯಂಗ್ಯವಾಡಿದರು.ಇದನ್ನೂ ಓದಿ: ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣಗೆ ಮದುವೆ ಆಮಂತ್ರಣ ನೀಡಿದ ಡಾಲಿ
Advertisement
Advertisement
ಕರ್ನಾಟಕದಲ್ಲಿ 5 ಗ್ಯಾರಂಟಿ ಕೊಟ್ಟು ಅಭಿವೃದ್ಧಿ ಇಲ್ಲವಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇದೇ ಕೇಜ್ರಿವಾಲ್ 25 ಉಚಿತಗಳನ್ನು ನೀಡಿದ್ದರು. ಅವರ ಸ್ಥಿತಿ ಏನಾಗಿದೆ? ಎಂದು ಪ್ರಶ್ನಿಸಿದರು. ಇದು ದೇಶಕ್ಕೆ ದಿಕ್ಸೂಚಿ ಎಂದು ತಿಳಿಸಿದರು.
Advertisement
ಇದೇ ವೇಳೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಅವರು ಮಾತನಾಡಿ, ಅರವಿಂದ್ ಕೇಜ್ರಿವಾಲ್ ಅವರ ದೆಹಲಿ ಸರ್ಕಾರ ಭ್ರಷ್ಟಾಚಾರಕ್ಕೆ ಬಲಿಯಾಗಿದೆ. ಬಿಜೆಪಿ ಇಡೀ ದೇಶದಲ್ಲಿ ಭ್ರಷ್ಟಾಚಾರದ ವಿಚಾರದಲ್ಲಿ ಒಂದೇ ಒಂದು ಆಪಾದನೆಯನ್ನೂ ಹೊತ್ತಿಲ್ಲ. ಕರ್ನಾಟಕದಲ್ಲಿ ನಮ್ಮ ವಿರುದ್ಧ ಶೇ.40 ಕಮೀಷನ್, ಪೇ ಸಿಎಂ ಮತ್ತಿತರ ಆರೋಪ ಮಾಡಿ ಚುನಾವಣಾ ತಂತ್ರ ಹೆಣೆದಿದ್ದ ಕಾಂಗ್ರೆಸ್ಸಿನದು ದೆಹಲಿಯಲ್ಲಿ ಶೂನ್ಯ ಸಂಪಾದನೆಯಾಗಿದೆ. ಈಗ ಅವರು ಖಾತೆ ತೆರೆದಿಲ್ಲ. ಆದರೆ ಕ್ಯಾತೆ ತೆಗೆಯುವುದನ್ನು ಬಿಡುವುದಿಲ್ಲ ಎಂದು ತಿಳಿಸಿದರು.
Advertisement
ಇನ್ನೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ (CT Ravi) ಅವರು ಮಾತನಾಡಿ, ಕೇಜ್ರಿವಾಲ್ ಪ್ರಾಮಾಣಿಕ ಅಲ್ಲ. ಭ್ರಷ್ಟ ಎಂಬುದು ಜನರಿಗೆ ಮನವರಿಕೆ ಆಗಿದೆ. ಸುಳ್ಳಿನ ಮುಖವಾಡ ಕಳಚಿಬಿದ್ದಿದೆ. ಕೇವಲ ನಕಾರಾತ್ಮಕ ಪ್ರಚಾರದಿಂದ ಚುನಾವಣೆ ಗೆಲ್ಲಲು ಅಸಾಧ್ಯ ಎಂದು ಕಾಂಗ್ರೆಸ್ ಅವಲೋಕನ ಮಾಡಿಕೊಳ್ಳಬೇಕಿದೆ. ಅಂಬೇಡ್ಕರರ ಸಂವಿಧಾನ, ಜನತೆಯ ಸಂವಿಧಾನ ಗೆದ್ದಿದೆ ಎಂದು ವಿಶ್ಲೇಷಿಸಿದರು.ಇದನ್ನೂ ಓದಿ: ದೆಹಲಿ ಚುನಾವಣೆಯಲ್ಲಿ ಸೋತ AAPಯನ್ನು ಕೌರವರಿಗೆ ಹೋಲಿಸಿದ ಸ್ವಾತಿ ಮಲಿವಾಲ್