ಮೈಸೂರು: ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಯದುವೀರ್ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ (Yaduveer Krishnadatta Chamaraja Wadiyar) ಮೈಸೂರು (Mysuru) ಲೋಕಸಭಾ ಕ್ಷೇತ್ರದಲ್ಲಿ ಗೆದ್ದು ಬೀಗಿದ್ದಾರೆ. ಇದರಿಂದ ತವರಲ್ಲೇ ಸಿಎಂಗೆ ಮುಖಭಂಗವಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ (M.Lakshmana) ವಿರುದ್ಧ ಯದುವೀರ್ 1.30 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಮೈಸೂರು ರಾಜ ವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ನಂತರ ಯದುವೀರ್ ಪಾರ್ಲಿಮೆಂಟ್ ಪ್ರವೇಶಿಸಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಗೆದ್ದು ಬೀಗಿದ ಹೆಚ್.ಡಿ ಕುಮಾರಸ್ವಾಮಿ
ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಕ್ಷೇತ್ರ ಪ್ರತಿಷ್ಠೆಯ ಕಣವಾಗಿತ್ತು. ಆರಂಭದಲ್ಲಿ ಪುತ್ರ ಯತೀಂದ್ರ ಅವರನ್ನೇ ಕಣಕ್ಕಿಳಿಸುವಂತೆ ಕಾರ್ಯಕರ್ತರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದರು. ಆದರೆ ಪುತ್ರ ಭವಿಷ್ಯದ ದೃಷ್ಟಿಯಿಂದ ಕಣಕ್ಕಿಳಿಸಲು ನಿರಾಕರಿಸಿದರು. ಒಕ್ಕಲಿಗ ಸಮುದಾಯದ ಲಕ್ಷ್ಣಣ್ ಅವರನ್ನೇ ಹುರಿಯಾಳಾಗಿಸಿದರು. ಮೈಸೂರು ಜನತೆ ಮಹಾರಾಜರ ಕೈಹಿಡಿದಿದ್ದಾರೆ.
ಎರಡು ಬಾರಿ ಸಂಸದರಾಗಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಬದಲಿಗೆ ರಾಜವಂಶಸ್ಥ ಯದುವೀರ್ ಅವರನ್ನು ಕಣಕ್ಕಿಳಿಸಿತ್ತು. ಬಿಜೆಪಿ ನಾಯಕರು ಉತ್ಸಾಹದಿಂದಲೇ ಯದುವೀರ್ ಪರ ಕ್ಷೇತ್ರದಾದ್ಯಂತ ಓಡಾಡಿ ಪ್ರಚಾರ ನಡೆಸಿದ್ದರು. ಇದನ್ನೂ ಓದಿ: ಅಂಜಲಿ ನಿಂಬಾಳ್ಕರ್ ವಿರುದ್ಧ ಕಾಗೇರಿಗೆ ಗೆಲುವು- ಉತ್ತರ ಕನ್ನಡದಲ್ಲಿ ಸಂಭ್ರಮಾಚರಣೆ