ಬೆಂಗಳೂರು: ಎನ್‍ಇಪಿ ಮುಖಾಂತರ ಹಾವಿನಪುರದವರು ಪಠ್ಯ ಪರಿಷ್ಕರಣೆ ಮಾಡಿದ್ದಾರೆ ಎಂದು ಮೇಲ್ಮನೆ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಕಿಡಿಕಾರಿದರು.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಾಡಿನ ಹಿರಿಯ ಸಾಹಿತಿಗಳು, ಚಿಂತಕರು, ಪ್ರಗತಿಪರರು, ಸ್ವಾಮೀಜಿಗಳು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದಾರೆ. ದಾರ್ಶನಿಕರು, ಹೋರಾಟಗಾರರ ಪಠ್ಯ ಕೈಬಿಟ್ಟಿದ್ದಾರೆ. ಸಾಣೆಹಳ್ಳಿ ಶ್ರೀಗಳು, ಆದಿ ಚುಂಚನಗಿರಿ ಶ್ರೀಗಳು ವಿರೋಧ ವ್ಯಕ್ಯಪಡಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
Advertisement
Advertisement
ಕುವೆಂಪು, ಬಸವಣ್ಣನವರ ಪಾಠ ಕೈಬಿಟ್ಟಿದ್ದು ಸರಿಯಲ್ಲ. ಕೂಡಲೇ ಪಾಠಗಳಲ್ಲಿ ಸೇರಿಸುವಂತೆ ಒತ್ತಾಯಿಸಿದ್ದಾರೆ. ಆರ್‌ಎಸ್‍ಎಸ್ ಅಣತಿಯಂತೆ ಸರ್ಕಾರ ನಡೆದುಕೊಳ್ಳುತ್ತಿದೆ. ನಾಗಪುರ, ಹಾವಿನಪುರದ ಒತ್ತಡಕ್ಕೆ ಸರ್ಕಾರ ಮಣಿದಿದೆ. ಸರ್ಕಾರ ಹಿಡನ್ ಅಜೆಂಡಾ ಜಾರಿಗೆ ತರ್ತಿದೆ. ಇದಕ್ಕೆ ನಮ್ಮದು ತೀವ್ರ ವಿರೋಧವಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪಠ್ಯ ಪುಸ್ತಕಗಳ ಮರು ಪರಿಷ್ಕರಣೆ ಮಾಡುವಂತೆ ಸಿಎಂಗೆ ರಮೇಶ್ ಕುಮಾರ್ ಪತ್ರ
Advertisement
Advertisement
ಕಾಂಗ್ರೆಸ್ ಅಭ್ಯರ್ಥಿ ಹಾಕಿದ್ದಕ್ಕೆ ಜೆಡಿಎಸ್ ಬೇಸರ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಜಾತ್ಯಾತೀತ ತತ್ವದ ಮೇಲೆ ಅಭ್ಯರ್ಥಿ ಹಾಕಿರಲಿಲ್ಲ. ದೇವೇಗೌಡರ ಹಿರಿತನಕ್ಕೆ ಗೌರವ ಕೊಟ್ಟು ಅವರ ವಿರುದ್ಧ ನಾವು ಇಳಿಸಿರಲಿಲ್ಲ. ಜಾತ್ಯಾತೀತ ತತ್ವದಲ್ಲಿ ಜೆಡಿಎಸ್‍ಗೆ ನಂಬಿಕೆ ಇದ್ದರೆ ಮತ ಹಾಕಲಿ ಎಂದು ಜೆಡಿಎಸ್‍ಗೆ ಪರೋಕ್ಷ ಸವಾಲೆಸೆದರು. ಇದನ್ನೂ ಓದಿ: ನಾನು ಕುವೆಂಪು ನಾಡಗೀತೆಯನ್ನು ಅಪಮಾನ ಮಾಡಿಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ