ಬೆಂಗಳೂರು: ಶಿವಮೊಗ್ಗದಲ್ಲಿ ಯುವಕನ ಕೊಲೆ ಮಾಡಿಸಿರುವುದೇ ಕೆ.ಎಸ್ ಈಶ್ವರಪ್ಪ. ತನ್ನ ಕುರ್ಚಿ ಉಳಿಸಿಕೊಳ್ಳಲು ಈ ಕೊಲೆ ಮಾಡಿಸಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ.
ಪರಿಷತ್ ನಲ್ಲಿ ಇಂದು ಮಾತನಾಡಿದ ಅವರು, ಶಿವಮೊಗ್ಗ ಕೊಲೆ ಪ್ರಕರಣ ಸಂಬಂಧ ಮಾತನಾಡುತ್ತಾ ಪರೋಕ್ಷವಾಗಿ ಈಶ್ವರಪ್ಪನವರೇ ಈ ಕೊಲೆ ಮಾಡಿಸಿದ್ದಾರೆ ಎಂದು ಆರೋಪಿಸಿದರು. ತಮ್ಮ ಸ್ಥಾನ ಉಳಿಸಿಕೊಳ್ಳಲು ಈಶ್ವರಪ್ಪ ಕೊಲೆ ಮಾಡಿಸಿದ್ದಾರೆ. ಈ ಬಗ್ಗೆ ಸಿಬಿಐ ತನಿಖೆ ಅಥವಾ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಮಾಡಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದರು. ಇದನ್ನೂ ಓದಿ: ಕೋಮು ಬಣ್ಣ ಕಟ್ಟಿ ಯಾರನ್ನೋ ಖಳನಾಯಕ ಮಾಡುವುದು ಈಶ್ವರಪ್ಪ, ಬಿಜೆಪಿಗೆ ಹೊಸದಲ್ಲ: ಬಿ.ಕೆ ಹರಿಪ್ರಸಾದ್
ನಿನ್ನೆ ಶಿವಮೊಗ್ಗದಲ್ಲಿ ನಿನ್ನೆ ಒಂದು ಘಟನೆ ಆಗಿದೆ. ಕೊಲೆ ಆದ ಯುವಕನ ತಾಯಿ, ತನ್ನ ಮಗ ಎರಡು ವರ್ಷಗಳಿಂದ ಭಜರಂಗದಳದಲ್ಲಿ ಇಲ್ಲ ಅಂತ ಹೇಳಿದ್ದಾರೆ. ಇತ್ತ ಈಶ್ವರಪ್ಪ ಇದು ಮುಸ್ಲಿಂ ಗೂಂಡಾಗಳಿಂದ ಕೊಲೆ ಆಗಿದೆ ಅಂತಾರೆ. ಗೃಹ ಸಚಿವರು ಇದ್ದಾಗ ಇವರು ಹೇಳಿಕೆ ಕೊಟ್ಟಿದ್ದಾರೆ. ಹೀಗಾಗಿ ಈ ಕೊಲೆಯನ್ನು ಈಶ್ವರಪ್ಪನೇ ಮಾಡಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹರ್ಷ ಮೃತದೇಹ ಮೆರವಣಿಗೆ ವೇಳೆ ಕೇಸರಿ ಧ್ವಜ ಹಿಡಿದು ಕಲ್ಲು ತೂರಾಟ
ಈಶ್ವರಪ್ಪ ಪರೋಕ್ಷವಾಗಿ ಈ ಕೊಲೆ ಮಾಡಿಸಿದ್ದಾರೆ. ಪೊಲೀಸರ ತನಿಖೆ ಮುನ್ನ ಈಶ್ವರಪ್ಪ ಹೇಳಿಕೆ ಕೊಟ್ಟಿದ್ದಾರೆ ಎಂದು ಹೇಳುತ್ತಾ ಪೆರೆಸ್ ಮೆಸ್ತಾ ವಿಷಯವನ್ನು ಹರಿಪ್ರಸಾದ್ ಪ್ರಸ್ತಾಪ ಮಾಡಿದರು. ಈ ವೇಳೆ ಸದನದಲ್ಲಿ ಮಾತಿನ ಚಕಮಕಿ ನಡೆದಿದ್ದು, ಹರಿಪ್ರಸಾದ್ ವಿರುದ್ಧ ಬಿಜೆಪಿ ಸದಸ್ಯರು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಈಶ್ವರಪ್ಪನವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ: ಪ್ರಹ್ಲಾದ್ ಜೋಶಿ