ಹುಬ್ಬಳ್ಳಿ: ಕಾಂಗ್ರೆಸ್ ಟಿಪ್ಪು ಸುಲ್ತಾನ್ (Tipu Sultan) ಪಾರ್ಟಿ ಅಲ್ಲ. ನಾವು ಬ್ರಿಟಿಷರ ವಿರುದ್ದ ಹೋರಾಟ ಮಾಡಿದವರ ಪರ ಇರುವವರು. ಬ್ರಿಟಿಷರ ಬೂಟು ನೆಕ್ಕುತ್ತಿದ್ದವರು ನಮಗೆ ಹೇಳಿಕೊಡಬೇಕಿಲ್ಲ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ (BK Hariprasad) ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಟಿಪ್ಪು ಸುಲ್ತಾನ್ ಪರ ಎಂಬ ಬಿಜೆಪಿ ನಾಯಕರ (BJP Leaders) ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದವರಲ್ಲಿ ಬಿಜೆಪಿ ತಮ್ಮ ಪಕ್ಷದ ಒಬ್ಬರ ಹೆಸರು ಹೇಳಲಿ, ಖಂಡಿತ ಸಿಗೋದಿಲ್ಲ. ನಾವು ಬ್ರಿಟಿಷರ ವಿರುದ್ದ ಹೋರಾಟ ಮಾಡಿದವರ ಪರ ಇದ್ದೇವೆ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಹೊಸವರ್ಷ ಆಚರಣೆ – ಮಹಿಳೆಯರ ರಕ್ಷಣೆಗೆ ಮುಂದಿನ ವಾರದಲ್ಲಿ ಗೈಡ್‌ಲೈನ್ಸ್: ಬೆಂಗ್ಳೂರು ಪೊಲೀಸ್
- Advertisement
ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಅವರಿಂದ ಏನೂ ನೀರಿಕ್ಷೆ ಮಾಡಲು ಸಾಧ್ಯವಿಲ್ಲ. ಹಿಜಬ್ ಮತ್ತು ಬುರ್ಕಾ ನಡುವೆ ಸಾಕಷ್ಟು ವ್ಯತ್ಯಾಸ ಇದೆ. ಹಿಜಬ್ ಅನ್ನೋದು ತಲೆ ಮತ್ತೆ ಎದೆ ಭಾಗ ಮುಚ್ಚಿಕೊಳ್ಳೊಕೆ ಇರೋದು. ಈಗಾಗಲೇ ಕೆಲವು ಶಾಲಾ ಕಾಲೇಜುಗಳಲ್ಲಿ ಇದೆ. ಬುರ್ಕಾ ಅನ್ನೋದು ಸಂಪೂರ್ಣ ದೇಹ ಮುಚ್ಚಿಕೊಳ್ಳೋದು. ಶಾಲಾ ಕಾಂಪೌಂಡ್‌ವರೆಗೂ ಬುರ್ಕಾ ಆ ನಂತರ ಹಿಜಬ್ ಇರಬೇಕು ಅನ್ನೋದು ನನ್ನ ಕಲ್ಪನೆ ಎಂದು ಹೇಳಿದ್ದಾರೆ.
- Advertisement
ಬಿಜೆಪಿಯವರು ಸಮಾನತೆಯ ಬಗ್ಗೆ ಮಾತನಾಡ್ತಾರೆ. ಅಹಾರ, ಉಡುಪು ಎಲ್ಲರ ವೈಯಕ್ತಿಕ ಹಕ್ಕು. ಬಿಜೆಪಿಗೆ ರೈತರು, ಮಹಿಳೆಯರ ಶೋಷಣೆ ಬಗ್ಗೆ ಕಾಳಜಿ ಇಲ್ಲ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಕುಸ್ತಿ ಬಿಟ್ಟರೂ ಚಿಂತೆ ಶುರುವಾಗಿದೆ, ಕಿರಿಯರಿಗೆ ಏನು ಹೇಳ್ಬೇಕು ತಿಳಿಯುತ್ತಿಲ್ಲ: ಸಾಕ್ಷಿ ಮಲಿಕ್ ಭಾವುಕ
ಕಾಂಗ್ರೆಸ್ ಪಕ್ಷ ಸಂವಿಧಾನ ರಕ್ಷಣೆ ಮಾಡ್ತಿದೆ. ನಮ್ಮದು ಜ್ಯಾತ್ಯತೀತ ರಾಷ್ಟ್ರ. ಎಲ್ಲ ಜಾತಿ ಧರ್ಮಗಳನ್ನು ಕಾಪಾಡಬೇಕು. ಕಾಂಗ್ರೆಸ್ ತುಷ್ಟೀಕರಣ ಮಾಡುತ್ತಿಲ್ಲ. ಬಹುಸಂಖ್ಯಾತರನ್ನ ತುಷ್ಟೀಕರಣ ಮಾಡ್ತಿರೋದು ಬಿಜೆಪಿ, ಹಿಂಸೆ ಸುಳ್ಳನ್ನೇ ಪ್ರಚಾರ ಮಾಡ್ತಿರೋದು ಬಿಜೆಪಿ, ಅಲ್ಪ ಸಂಖ್ಯಾತರು, ಮೀಸಲಾತಿ ವಿಚಾರದಲ್ಲಿ ವಿರೋಧ ಮಾಡ್ತಿರೋದು ಬಿಜೆಪಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ ಲೋಕಸಭಾ ಚುನಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ನಾನು ಲೋಕಸಭಾ ಚುನಾವಣಾ ಆಕಾಂಕ್ಷಿ, ಅದರ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತೆ. ಕಾಯಕ ಸಮಾಜದ ಪರ ಹೋರಾಟ ನಮ್ಮೆಲ್ಲರ ಇಚ್ಛೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಸಮಸ್ಯೆ ಬಗೆಹರಿಬೇಕು. ಪ್ರಧಾನಿ ಹುದ್ದೆಗೆ ಮಲ್ಲಿಕಾರ್ಜುನ ಖರ್ಗೆ ಹೆಸರು ಬಂದಿರೋದು ಸೂಕ್ತ. ರಾಜಕಾರಣದಲ್ಲಿ ಯಾರನ್ನೂ ತುಳಿಯೋಕೆ ಆಗಲ್ಲ. ತುಳಿತೀನಿ ಅಂದಿದ್ರೆ ಅವರು ಭ್ರಮನಿರಸನದಲ್ಲಿ ಇರ್ತಾರೆ ಎಂದು ಸ್ವಪಕ್ಷೀರಿಗೆ ಟಾಂಗ್ ಕೊಟ್ಟಿದ್ದಾರೆ.