ಸಿಎಂ ಮಾಡೋದು ಗೊತ್ತು, ಇಳಿಸೋದು ಗೊತ್ತು – ಬಿ.ಕೆ ಹರಿಪ್ರಸಾದ್ ಹೀಗಂದಿದ್ಯಾಕೆ?

Public TV
2 Min Read
BK Hariprasad 2

ಬೆಂಗಳೂರು: ನನಗೆ ಸಿಎಂ ಆಯ್ಕೆ ಮಾಡೋದು, ಕೆಳಗೆ ಇಳಿಸೋದು ಬಹಳ ಚೆನ್ನಾಗಿ ಗೊತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ (BK Hariprasad) ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದಲ್ಲಿ ರಾಜಕೀಯವಾಗಿ ಈ ಸಮುದಾಯದವರು ಮುಂದೆ ಬರುತ್ತಿಲ್ಲ. ಏನೇ ಪ್ರಯತ್ನ ಮಾಡಿದ್ರು ಆಗುತ್ತಿಲ್ಲ. ಅವಕಾಶ ವಂಚಿರಾಗುತ್ತಿರುವುದು ನೋಡಿದರೆ ಯಾರದ್ದೊ ಷಡ್ಯಂತ್ರಕ್ಕೆ ಬಲಿಯಾಗುತ್ತಿದ್ದೇವೆ ಅನಿಸುತ್ತದೆ. ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಕ್ಕೆ ಸೇರಿದವರು. ಎಲ್ಲರು ಒಟ್ಟಿಗೆ ಸೇರಬೇಕು ಎಂದು ನಾವು 2013 ರಲ್ಲಿ ಬೆಂಬಲ ಕೊಟ್ಟಿದ್ದೆವು. ಬೆಂಬಲ ಕೊಟ್ಟ ಬಳಿಕ ನಾವು ಯಾರ ಬಳಿಯೂ ಕೈ ಚಾಚುವುದಿಲ್ಲ. ಹಿಂದುಳಿದ ವರ್ಗಕ್ಕೆ ಯಾವ ರೀತಿ ಅನುಕೂಲ ಮಾಡಬೇಕು ಅಂತಾ ಯೋಚನೆ ಮಾಡ್ತೀವಿ. ಸ್ವಾರ್ಥಕ್ಕೆ ಯಾವುದು ಕೇಳಲ್ಲ ಎಂದು ಹೇಳಿದ್ದಾರೆ.

BK Hariprasad 1

ಉಡುಪಿ ಜಿಲ್ಲೆಯ ಕಾರ್ಕಳ ಕೋಟಿ ಚನ್ನಯ್ಯ ಪಾರ್ಕ್‌ಗೆ 5 ಕೋಟಿ ಕೊಡಿ ಎಂದು ಕೇಳಿದ್ದೆವು. ಕೊಡುತ್ತೇವೆ ಎಂದು ಹೇಳಿದ ಸಿದ್ದರಾಮಯ್ಯ (Siddaramaiah) ಅವರು ಅನುದಾನ ಕೊಟ್ಟಿಲ್ಲ. ನನಗೆ ಅವರು ರಾಜಕೀಯವಾಗಿ ಏನು ಸಹಾಯ ಮಾಡಲು ಆಗಲ್ಲ. ನಾನೇ ಅವರಿಗೆ ಸಹಾಯ ಮಾಡುತ್ತೇನೆ. ಮಂಗಳೂರು ವಿವಿಯಲ್ಲಿ (Mangaluru University) ಗುರುಪೀಠ ಸ್ಥಾಪನೆಗೆ ನಾನು ಸಂಸದನಾಗಿದ್ದಾಗ ಹಣ ಕೊಟ್ಟಿದ್ದೆ. ಈಗ ಕಟ್ಟಡ ಅರ್ಧಕ್ಕೆ ನಿಂತಿದ್ದರೂ ಹಣ ಕೊಟ್ಟಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಿಎಸ್‍ಐ ಹಗರಣ ನ್ಯಾಯಾಂಗ ತನಿಖೆ ಕಾಂಗ್ರೆಸ್‍ನ ದ್ವೇಷದ ರಾಜಕಾರಣ: ಬೊಮ್ಮಾಯಿ

ಹಿಂದುಳಿದ ವರ್ಗ ಎಂದರೆ ಒಂದು ಜಾತಿ ಮಾತ್ರವಲ್ಲ. ಜಾತಿ ಬೇರೆ, ವರ್ಗ ಬೇರೆ, ನಾವು ವರ್ಗದಲ್ಲಿ ಬರುತ್ತೇವೆ. ವರ್ಗದಲ್ಲಿ ಬರುವ ಎಲ್ಲರಿಗೂ ಸಮಾನ ಸ್ಥಾನಮಾನ ಸಿಗಬೇಕು. 11 ಕ್ಷೇತ್ರಗಳಲ್ಲಿ ಈಡಿಗ, ಬಿಲ್ಲವ, ದೀವರು ನಿರ್ಣಾಯಕವಾಗಿದ್ದೇವೆ. ನಾನು ಸಹ ಎಲೆಕ್ಷನ್ ಕಮಿಟಿಯಲ್ಲಿ ಇದ್ದೆ. ನಾಲ್ಕು ಜನ ಟಿಕೆಟ್ ವಂಚಿತರಾದರು. 2 ಬಿಲ್ಲವ, 1 ಈಡಿಗ, 1 ದೀವರು ವಂಚಿತರಾದರು. ಮಂಗಳೂರು ಉತ್ತರ ಮತ್ತು ದಕ್ಷಿಣದಲ್ಲಿ ಅಲ್ಪಸಂಖ್ಯಾತರಿಗೆ ಕೊಟ್ಟಿದ್ದಾರೆ. ನಾವು ಅಲ್ಪಸಂಖ್ಯಾತರ ವಿರೋಧಿಗಳಲ್ಲ. ಆದ್ರೆ ನೀವು ಮುಂದೆ ಬರಬೇಕಾದರೆ ಅಲ್ಪಸಂಖ್ಯಾತರ ವಿರುದ್ಧ ಧ್ವನಿ ಎತ್ತಬಾರದು ಅಂತಾ ಅಲ್ಪಸಂಖ್ಯಾತರನ್ನ ಮುಂದಿಟ್ಟುಕೊಂಡು ನಮಗೆ ಟಿಕೆಟ್ ವಂಚಿತರನ್ನಾಗಿ ಮಾಡುತ್ತಾರೆ. ಲಿಂಗಾಯತರು, ಒಕ್ಕಲಿಗರು, ಬ್ರಾಹ್ಮಣರು, ಕುರುಬರು ಸಿಎಂ ಸ್ಥಾನಕ್ಕೆ ಹೋರಾಟ ಮಾಡ್ತಾರೆ. ಅವರು ಅಧಿಕಾರಕ್ಕೆ ಬರಬೇಕಾದರೆ ಅವರ ಸ್ಥಾನಗಳನ್ನು ಬಿಟ್ಟುಕೊಡಲಿ ಎಂದು ಕುಟುಕಿದ್ದಾರೆ.

ಬಿಕೆ ಹರಿಪ್ರಸಾದ್ ಹೇಳಿಕೆ ಬಗ್ಗೆ ಸಿಎಂ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಡಿಸಿಎಂ ನಂಗೆ ಗೊತ್ತಿಲ್ಲ ಎಂದು ಜಾರಿಕೊಂಡಿದ್ದಾರೆ. ಆದ್ರೆ, ಸಚಿವ ಜಮೀರ್ ಮಾತ್ರ ಗರಂ ಆಗಿದ್ದಾರೆ. ಬಿಜೆಪಿಗರ ಪೈಕಿ ಕೆಲವರು ಗೊತ್ತಿಲ್ಲ ಅಂದ್ರೆ, ಇನ್ನೂ ಕೆಲವರು ಬಿಕೆ ಹರಿಪ್ರಸಾದ್ ಮಾತುಗಳನ್ನ ಸಮರ್ಥಿಸಿ ಸಿಎಂಗೆ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ – ಬೆಲೆ ಏರಿಕೆ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

Web Stories

Share This Article