– ಬೆಚ್ಚಿಬಿದ್ದ ಸಿಬ್ಬಂದಿ, ವಿದ್ಯಾರ್ಥಿಗಳು
ಚಿತ್ರದುರ್ಗ: ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ವಾಮಾಚಾರ (Black Magic) ನಡೆಸಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಚಳ್ಳಕೆರೆ ತಾಲೂಕಿನ ತಿಮ್ಮಪ್ಪನಹಳ್ಳಿಯಲ್ಲಿ ಬೆಳಕಿಗೆ ಬಂದಿದೆ.
ಶನಿವಾರ ಬೆಳಗ್ಗೆ ತರಗತಿಗೆ ಧಾವಿಸಿದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ, ಶಾಲೆಯ ಮುಖ್ಯ ಶಿಕ್ಷಕರ ಕೊಠಡಿ ಮುಂಭಾಗದಲ್ಲಿದ್ದ ತಲೆ ಬುರುಡೆ, ನಿಂಬೆ ಹಣ್ಣು, ಎಲೆ ಅಡಿಕೆ, ಕುಂಕುಮ ಕಂಡು ಬೆಚ್ಚಿಬಿದ್ದಿದ್ದಾರೆ.
ಈ ಕೃತ್ಯವನ್ನು ಯಾರು ಮಾಡಿದ್ದಾರೆಂದು ತಿಳಿದುಬಂದಿಲ್ಲ. ಆದರೆ ವಾಮಾಚಾರ ಕಂಡು ಶಾಲಾ ಮಕ್ಕಳು, ಶಿಕ್ಷಕರು ಹಾಗೂ ಪೋಷಕರಲ್ಲಿ ಮಾತ್ರ ಆತಂಕ ಮನೆಮಾಡಿದೆ. ಹೀಗಾಗಿ ಈ ಕೃತ್ಯ ಎಸಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಭುಗಿಲೆದ್ದ ಆಕ್ರೋಶದ ನಡುವೆಯೂ ತಮಿಳುನಾಡಿಗೆ ನೀರು; KRS ನೀರಿನ ಮಟ್ಟ 96 ಅಡಿಗೆ ಕುಸಿತ
ಕೃತ್ಯ ನಡೆದ ಸ್ಥಳಕ್ಕೆ ತಳಕು ಠಾಣೆಯ ಪಿಎಸ್‌ಐ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಶಾಲೆಗೆ ಆಗಮಿಸುವ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಬೆದರಿಸಲು ವಾಮಾಚಾರ ನಡೆಸಿರುವ ಸಾಧ್ಯತೆ ಇದೆ ಎಂದು ಶಂಕಿಸಿದ್ದಾರೆ. ಸದ್ಯ ಶಾಲಾ ಆವರಣದಲ್ಲಿ ಪತ್ತೆಯಾದ ತಲೆಬುರುಡೆ ಹಾಗೂ ಇತರ ವಸ್ತುಗಳನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಇದನ್ನೂ ಓದಿ: ಮೈತ್ರಿ ಅಧಿಕೃತಗೊಂಡರೂ ಸೀಟು ಹಂಚಿಕೆ ಕಗ್ಗಂಟು – ದೋಸ್ತಿಗಳ ಲೆಕ್ಕಾಚಾರ ಏನು?
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]