ವಿವಾಹಿತೆಗೆ ಪ್ರಿಯಕರನಿಂದ ಬ್ಲ್ಯಾಕ್‌ಮೇಲ್ – ಮೊಬೈಲ್‌ನಲ್ಲಿ ವೀಡಿಯೋ ಆನ್ ಮಾಡಿ ಮಹಿಳೆ ನೇಣಿಗೆ ಶರಣು

Public TV
1 Min Read
vijayapura

ವಿಜಯಪುರ: ವಿವಾಹಿತ ಮಹಿಳೆ (Woman) ಪ್ರಿಯಕರನ ಬ್ಲ್ಯಾಕ್‌ಮೇಲ್‌ಗೆ (Blackmail) ಬೇಸತ್ತು ಮೊಬೈಲಿನಲ್ಲಿ ವೀಡಿಯೊ (Video) ಆನ್ ಮಾಡಿ ನೇಣಿಗೆ ಶರಣಾಗಿರುವ ಭಯಾನಕ ಘಟನೆ ವಿಜಯಪುರದ (Vijayapura) ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದಿದೆ.

ಸುಹಾನಾ ಸೋನಾರ್ (21) ಆತ್ಮಹತ್ಯೆಗೆ ಶರಣಾದ ವಿವಾಹಿತ ಮಹಿಳೆ. ಆಕೆಗೆ ಪ್ರಿಯಕರ ಅಲ್ತಾಫ್ ಸುಲೈಮಾನ್ ಗಂಡನನ್ನು ಬಿಟ್ಟು ನನ್ನೊಂದಿಗೆ ಬಾ, ಇಲ್ಲವೆಂದರೆ ನನ್ನೊಂದಿಗಿರುವ ಫೋಟೋವನ್ನು ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಹೇಳಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ. ಇದರಿಂದ ಮರ್ಯಾದೆಗೆ ಹೆದರಿ ಸುಹಾನಾ ಆತ್ಮಹತ್ಯೆ ಮಾಡಕೊಂಡಿದ್ದಾಳೆ.

 

police jeep

ಉಪ್ಪಲದಿನ್ನಿ ಗ್ರಾಮದ ಅಲ್ತಾಫ್ ಸುಲೈಮಾನ್ 1 ವರ್ಷದ ಹಿಂದೆ ಸುಹಾನಾಳೊಂದಿಗೆ ಸಲುಗೆ ಬೆಳೆಸಿ ಪ್ರೀತಿಸುತ್ತಿದ್ದ. ಈ ವಿಷಯ ಸುಹಾನಾ ಪೋಷಕರಿಗೆ ಗೊತ್ತಾಗಿ ಹಿರಿಯರ ಸಮ್ಮುಖದಲ್ಲಿ ಅಲ್ತಾಫ್‌ಗೆ ತಾಕೀತು ಮಾಡಿದ್ದರು. ಬಳಿಕ ಸುಹಾನಾಗೆ ಪೋಷಕರು ಹೊಕ್ಕುಂಡಿ ಗ್ರಾಮದ ಷರೀಫ್ ಸೋನಾರ್ ಜೊತೆಗೆ ಇತ್ತೀಚೆಗೆ ಮದುವೆ ಮಾಡಿಕೊಟ್ಟಿದ್ದರು.

ಪ್ರಿಯಕರನ ಬ್ಲ್ಯಾಕ್‌ಮೇಲ್‌ನೊಂದಿಗೆ ಸುಹಾನಾಳಿಗೆ ಇನ್ನೂ ಕೆಲವರು ಕಿರುಕುಳ ನೀಡಿರುವುದಾಗಿ ವೀಡಿಯೋದಲ್ಲಿ ಉಲ್ಲೇಖಿಸಿದ್ದಾಳೆ. ಇನ್ನೂಸ್ ಪಾರ್ಥನಲ್ಲಿ ಹಾಗೂ ದಸ್ತಗಿರಸಾಬ ಮುಳವಾಡ ಜೊತೆಗೆ ತನ್ನ ತಂದೆ ಅಸ್ಲಂ ಮುಲ್ಲಾಗೆ ರಾಜಕೀಯ ದ್ವೇಷವಿತ್ತು. ದಸ್ತಗಿರಸಾಬ ಮುಳವಾಡ ಮಗಳ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದಿದ್ದಕ್ಕೆ ಅಸ್ಲಂ ಮುಲ್ಲಾ ಕಾರಣವೆಂದು ಸಿಟ್ಟಿತ್ತು. ಇದಕ್ಕೆ ಸಂಬಂಧಿಸಿದಂತೆ ಸುಹಾನಾಳಿಗೆ ಮೂವರು ಸೇರಿ ಬೆನ್ನುಹತ್ತಿ ಕಿರುಕುಳ ಕೊಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಇದನ್ನೂ ಓದಿ: ವಿಮಾನದಲ್ಲಿ ಬಾಟಲಿ ಹಿಡಿದು ಬಡಿದಾಟ; ಫ್ಲೈಟ್‌ ತುರ್ತು ಭೂಸ್ಪರ್ಶ – ಇಬ್ಬರು ಮಹಿಳೆಯರು ಸೇರಿ ನಾಲ್ವರು ಅರೆಸ್ಟ್

ಸುಹಾನಾ ಏಪ್ರಿಲ್ 15 ರಂದು ಆತ್ಮಹತ್ಯೆಗೆ ಕಾರಣ ತಿಳಿಸಿ ಮೊಬೈಲ್ ವೀಡಿಯೋ ಆನ್ ಮಾಡಿ ನೇಣಿಗೆ ಶರಣಾಗಿದ್ದಾಳೆ. ಈ ಬಗ್ಗೆ ತಂದೆ ಅಸ್ಲಂ ಮುಲ್ಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರ‍್ಯಾಪಿಡೋ ಬೈಕ್‌ ಸವಾರನಿಂದ ಲೈಂಗಿಕ ಕಿರುಕುಳ – ಬೇಸತ್ತ ಯುವತಿ ಬೈಕ್‌ನಿಂದ ಜಂಪ್‌

Share This Article