ಸೈಬರ್‌ ಪೊಲೀಸರ ಸೋಗಿನಲ್ಲಿ ಬ್ಲ್ಯಾಕ್‌ಮೇಲ್‌ – ಖರ್ತನಾಕ್‌ ಲೇಡಿ ಸೇರಿ 7 ಲಕ್ಷ ಸುಲಿಗೆ ಮಾಡಿದ್ದ ಐವರು ಅರೆಸ್ಟ್‌

Public TV
2 Min Read
Cyber Crime

ಮಡಿಕೇರಿ: ಸೈಬರ್ ಪೊಲೀಸರೆಂದು (Cyber Police) ಹೇಳಿಕೊಂಡು ವ್ಯಕ್ತಿಯೊಬ್ಬರಿಗೆ ಬ್ಲ್ಯಾಕ್ ಮೇಲ್ ಮಾಡಿ ಅಂದಾಜು 7 ಲಕ್ಷ ವಸೂಲಿ ಮಾಡಿರುವ ನಕಲಿ ಪೊಲೀಸ್‌ ಗ್ಯಾಂಗ್‌ವೊಂದನ್ನ ಬಂಧಿಸುವಲ್ಲಿ ಕುಶಾಲನಗರ ಟೌನ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಡಿಕೇರಿ (Madikeri) ತಾಲ್ಲೂಕು ಹಾಲೇರಿ ಗ್ರಾಮದ ಇಬ್ರಾಹಿಂ ಬಾದುಷಾ (25), ಮೇಲುಕೋಟೆ ಬಳಿಘಟ್ಟ ಗ್ರಾಮದ ರಾಘವೇಂದ್ರ ಬಿ.ಎಂ. (19), ಕುಶಾಲನಗರ ಆದರ್ಶ ದ್ರಾವಿಡ ಕಾಲೋನಿಯ ಚರಣ್ ಸಿ.ಕೆ. (19) ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಬಂಧಿತರಾಗಿದ್ದಾರೆ. ಇದನ್ನೂ ಓದಿ: ಇರಾನ್‌ ಮೇಲೆ ಅಮೆರಿಕ ದಾಳಿ ಸಂಪೂರ್ಣ ಯಶಸ್ವಿಯಾಗಿಲ್ಲ – ಟ್ರಂಪ್ ಮುಜುಗರಕ್ಕೆ ಕಾರಣವಾದ ಗುಪ್ತಚರ ವರದಿ

CRIME

ಏನಿದು ಬ್ಲ್ಯಾಕ್ ಮೇಲ್?
ಕುಶಾಲನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಪಟ್ಟಣ ನಿವಾಸಿಯಾದ ಪರಶಿವಮೂರ್ತಿ ಎಂಬುವವರು 2024ನೇ ಅಕ್ಟೊಬರ್ ತಿಂಗಳಿನಲ್ಲಿ ಫೇಸ್‌ಬುಕ್‌ನಲ್ಲಿ ವ್ಯಕ್ತಿಯೊಬ್ಬರಿಗೆ ಮೆಸೇಜ್‌ ಮಾಡಿದ್ದಾರೆ. ಬಳಿಕ ಅಪರಿಚಿತ ವ್ಯಕ್ತಿ ಪರಶಿವಮೂರ್ತಿ ಅವರ ಮೊಬೈಲ್‌ಗೆ ಕರೆ ಮಾಡಿ ತಾನು ಪಿರಿಯಾಪಟ್ಟಣ ಸೈಬರ್ ಪೊಲೀಸ್ ಎಂದು ಪರಿಚಯಿಸಿಕೊಂಡು, ನೀವು ಹುಡುಗಿಯರಿಗೆ ಸಾಮಾಜಿಕ ಜಾಲತಾಣದಲ್ಲಿ ಮೆಸೇಜ್ / ಕಾಮೆಂಟ್ ಮಾಡಿ ಟಾರ್ಚರ್ ನೀಡಿರುವ ಕುರಿತು ದೂರು ದಾಖಲಾಗಿದೆ. ನೀವು ಹಣ ನೀಡಿದ್ರೆ ಸರಿ ಮಾಡುತ್ತೇನೆ. ಇಲ್ಲವಾದಲ್ಲಿ ಮನೆಯ ಬಳಿ ಬಂದು ನಿನ್ನನ್ನು ಕರೆದುಕೊಂಡು ಹೋಗಿ ಜೈಲಿಗೆ ಹಾಕುತ್ತೇನೆ ಹಾಗೂ ಅಕ್ಕಪಕ್ಕದವರ ಮನೆಯ ಮುಂದೆ ನಿನ್ನ ಮಾನ ಮರ್ಯಾದೆ ಹೋಗುವಂತೆ ಮಾಡುತ್ತೇನೆ ಎಂದು ಬ್ಲ್ಯಾಕ್ ಮೇಲ್ ಮಾಡಿದ್ದ. ಇದನ್ನೂ ಓದಿ: ಹಿಮಾಚಲದಲ್ಲಿ ಮೇಘಸ್ಫೋಟ; ರಣಪ್ರವಾಹಕ್ಕೆ ಇಬ್ಬರು ಬಲಿ, 15-20 ಕಾರ್ಮಿಕರು ಕೊಚ್ಚಿ ಹೋಗಿರುವ ಶಂಕೆ

ಹೀಗೆ ಪರಶಿವಮೂರ್ತಿ ಅವರ ಮೊಬೈಲ್‌ಗೆ ಹಲವು ಬಾರಿ ಕರೆ ಮಾಡಿ ಹೆದರಿಸಿ ಹಂತಹಂತವಾಗಿ ಸುಮಾರು 7 ಲಕ್ಷ ರೂ. ಪಡೆದಿದ್ದ. ಇದರಿಂದ ರೋಸಿಹೋಗಿದ್ದ ಪರಶಿವಮೂರ್ತಿ 2025ರ ಜನವರಿ 11ರಂದು ದೂರು ನೀಡಿದ್ದರು. ಈ ಸಂಬಂಧ ಕುಶಾಲನಗರ ಟೌನ್ ಪೊಲೀಸ್ ಠಾಣೆಯಲ್ಲಿ ಕಲಂ 318(2), 319(1), 308(2)ರ ಬಿಎನ್‌ಎಸ್‌ ಆಕ್ಟ್‌ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಇದನ್ನೂ ಓದಿ: ಕೋಮುಲ್ ಚುನಾವಣೆಯಲ್ಲಿ ಹಣದ ಹೊಳೆ – ಒಂದೊಂದು ಮತಕ್ಕೆ 5 ರಿಂದ 7 ಲಕ್ಷ ಸಂದಾಯ

ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಲು ಸೋಮವಾರಪೇಟೆ ಉಪವಿಭಾಗ ಡಿಎಸ್ಪಿ ಚಂದ್ರಶೇಖರ್, ಕುಶಾಲನಗರ ವೃತ್ತ ನಿರೀಕ್ಷಕರಾದ ಬಿ.ಜಿ ಪ್ರಕಾಶ್, ಸಬ್ ಇನ್ಸ್ ಪೆಕ್ಟರ್ ಗೀತಾ ಹಾಗೂ ಸಿಬ್ಬಂದಿಯನ್ನೊಳಗೊಂಡ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಈ ತಂಡ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಜೂನ್‌ 24ರಂದು ಐವರನ್ನು ಬಂಧಿಸಿದೆ. ಇದನ್ನೂ ಓದಿ: ಅವಧಿಗೂ ಮುನ್ನ ಅರ್ಧದಷ್ಟು ಭರ್ತಿಯಾದ ಟಿಬಿ ಡ್ಯಾಂ – ಜು.1ಕ್ಕೆ ಕಾಲುವೆಗೆ ನೀರು ಬಿಡುಗಡೆ ಸಾಧ್ಯತೆ

Share This Article