ಚಿಕ್ಕಮಗಳೂರು: ತರಿಕೆರೆ ತಾಲೂಕಿನ ಲಕ್ಕವಳ್ಳಿ (Lakkavalli) ಮೂಲದ ಮಹಿಳೆಗೆ ಆಕೆಯ ಮಗಳ ಅಶ್ಲೀಲ ಫೋಟೋ ಕಳಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು (Chikkamagaluru) ಮೂಲದ ಯೋಗೀಶ್ ಬಂಧಿತ ಆರೋಪಿ. ಈತ 25 ವರ್ಷದ ಯುವತಿಯ ಅಶ್ಲೀಲ ಫೋಟೋವನ್ನು ಆಕೆಯ ತಾಯಿಗೆ ಕಳಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ಅಲ್ಲದೇ ಹಣ ಕೊಡದಿದ್ರೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ. ಇದನ್ನೂ ಓದಿ: ಅಪ್ರಾಪ್ತೆಗೆ ಬ್ಲ್ಯಾಕ್‌ಮೇಲ್ ಮಾಡಿ ಸಾಮೂಹಿಕ ಅತ್ಯಾಚಾರ ಆರೋಪ – ಐವರ ಬಂಧನ
ರಾತ್ರಿ ವೇಳೆ ಫೋನ್ ಮಾಡಿ ಹಣ ಕೊಡುವಂತೆ ಆರೋಪಿ ಪೀಡಿಸುತ್ತಿದ್ದ ಎಂದು ತಿಳಿದು ಬಂದಿದೆ. ನೊಂದ ಮಹಿಳೆ ಚಿಕ್ಕಮಗಳೂರು ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಗೃಹಿಣಿ ಅನುಮಾನಾಸ್ಪದ ಸಾವು – ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆ
