ಬ್ಲ್ಯಾಕ್ ಮೇಲ್ ಮಾಡಿದ ಯುವ ನಟಿಯ ಬಂಧನ

Public TV
1 Min Read
Mousumi Naik 1

ಲ್ಲದ ಕಾರಣಗಳಿಂದಾಗಿ ಇತ್ತೀಚೆಗೆ ನಟಿಯರು ಸುದ್ದಿ ಆಗುತ್ತಿದ್ದಾರೆ. ಜೊತೆಗೆ ಜೈಲು ಸೇರುತ್ತಿದ್ದಾರೆ. ಈ ಪಟ್ಟಿಗೆ ಹೊಸ ಸೇರ್ಪಡೆ ಒರಿಯಾ ನಟಿ ಮೌಶುಮಿ ನಾಯಕ್ (Moushumi Naik). ಲೇಖಕಿಯೊಬ್ಬರಿಗೆ ಬ್ಲ್ಯಾಕ್ ಮೇಲ್ (Black mail) ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ನಟಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕ ಪ್ರತಿಷ್ಠೆಗೆ ಧಕ್ಕೆ ತಂದಿದ್ದನ್ನು ಸ್ವತಃ ನಟಿ ಒಪ್ಪಿಕೊಂಡಿರುವುದಾಗಿಯೂ ಪೊಲೀಸರು ತಿಳಿಸಿದ್ದಾರೆ.

Mousumi Naik 2

ಒರಿಯಾ ಸಿನಿಮಾ ರಂಗದಲ್ಲಿ ಅತ್ಯಂತ ಜನಪ್ರಿಯ ನಟಿ ಮೌಶುಮಿ ನಾಯಕ್, ದುಡ್ಡಿನ ವಿಚಾರದಲ್ಲಿ ಲೇಖಕಿ ಬನಸ್ಮಿತಾ (Banasmita) ಅವರ ಮಾನಹಾನಿ ಮಾಡಿದ್ದರಂತೆ. ಜೊತೆಗೆ ಲೇಖಕಿ ಪತಿಯ ವಿರುದ್ಧ ಚಂದಕಾ ಪೊಲೀಸ್ ಠಾಣೆಯಲ್ಲಿ ಸುಳ್ಳು ದೂರು ಕೂಡ ನೀಡಿದ್ದರಂತೆ. ಆನಂತರ ಲೇಖಕಿ ಹಾಗೂ ನಟಿ ರಾಜಿ ಮಾಡಿಕೊಂಡಿದ್ದಾರೆ. ಇದಾದ ನಂತರವೂ ನಿರಂತರವಾಗಿ ನಟಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಲೇಖಕಿ ದೂರು ನೀಡಿದ್ದರು.

ಲೇಖಕಿ ನೀಡಿದ ದೂರಿನ ಆಧಾರದಲ್ಲಿ ಭುವನೇಶ್ವರದ ಇನ್ಫೋಸಿಟಿ ಪೊಲೀಸರು ನಟಿಯನ್ನು ಬಂಧಿಸಿದ್ದಾರೆ. ಸೆಕ್ಸನ್ 385, 294, 506 ಹಾಗೂ 507ರ ಅಡಿಯಲ್ಲಿ ನಟಿಯ ಬಂಧಿಸಲಾಗಿದೆ ಎಂದು ಡಿಸಿಪಿ ಕಚೇರಿಯು ತಿಳಿಸಿದೆ.

Share This Article