Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿರಿಯ ಆಟಗಾರನಿಗೆ ಖಾಲಿ ಚೆಕ್ ನೀಡಿ ಮಾನವೀಯತೆ ಮೆರೆದ ಕೃನಾಲ್ ಪಾಂಡ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಹಿರಿಯ ಆಟಗಾರನಿಗೆ ಖಾಲಿ ಚೆಕ್ ನೀಡಿ ಮಾನವೀಯತೆ ಮೆರೆದ ಕೃನಾಲ್ ಪಾಂಡ್ಯ

Cricket

ಹಿರಿಯ ಆಟಗಾರನಿಗೆ ಖಾಲಿ ಚೆಕ್ ನೀಡಿ ಮಾನವೀಯತೆ ಮೆರೆದ ಕೃನಾಲ್ ಪಾಂಡ್ಯ

Public TV
Last updated: January 22, 2019 12:06 pm
Public TV
Share
2 Min Read
krunal pandya
SHARE

ವಡೋದರಾ: ವೆಂಟಿಲೇಟರ್ ನಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ಟೀಂ ಇಂಡಿಯಾದ ಮಾಜಿ ಆಟಗಾರ ಜೇಕಬ್ ಮಾರ್ಟಿನ್ ನೆರವಿಗೆ ಹಾರ್ದಿಕ್ ಪಾಂಡ್ಯ ಸಹೋದರ ಕೃನಾಲ್ ಪಾಂಡ್ಯ ಧಾವಿಸಿದ್ದಾರೆ.

ಡಿಸೆಂಬರ್ 28 ರಂದು ನಡೆದ ರಸ್ತೆ ಅಪಘಾತದಿಂದಾಗಿ ಶ್ವಾಸಕೋಶ ಮತ್ತು ಲಿವರ್ ಗೆ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜೇಕಬ್ ಮಾರ್ಟಿನ್ ಆರ್ಥಿಕ ಸಮಸ್ಯೆಗೆ ಸಿಲುಕಿದ್ದಾರೆ.

ಈಗಾಗಲೇ ಬಿಸಿಸಿಐ 5 ಲಕ್ಷ ರೂ. ನೀಡಿದ್ದರೆ ಬರೋಡಾ ಕ್ರಿಕೆಟ್ ಸಂಸ್ಥೆ 3 ಲಕ್ಷ ರೂ. ನೀಡಿದೆ. ಸೌರವ್ ಗಂಗೂಲಿ ಸೇರಿದಂತೆ ಹಲವು ಕ್ರಿಕೆಟಿಗರು ಮಾರ್ಟಿನ್ ಅವರಿಗೆ ಸಹಾಯ ಮಾಡಿದ್ದಾರೆ. ಈಗ ಕೃನಾಲ್ ಪಾಂಡ್ಯ ಸಹ ಸಹಾಯ ಹಸ್ತ ಚಾಚಿದ್ದಾರೆ.

jacob martin

ಈ ಸಂಬಂಧ ಖಾಲಿ ಚೆಕ್ ನೀಡಿದ ಕೃನಾಲ್, ಎಷ್ಟು ಹಣ ಬೇಕಾದರೂ ಬರೆದುಕೊಳ್ಳಿ, ಆದರೆ ಯಾವುದೇ ಕಾರಣಕ್ಕೂ 1 ಲಕ್ಷ ರೂ. ಗಿಂತ ಕಡಿಮೆ ಮೊತ್ತವನ್ನು ಈ ಚೆಕ್ ನಲ್ಲಿ ಬರೆಯಬೇಡಿ ಎಂದು ಹೇಳಿದ್ದಾರೆ.

ಆರಂಭದಲ್ಲಿ ಮಾಜಿ ಆಟಗಾರ ಮತ್ತು ಹಾಲಿ ಬರೋಡಾ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿ ಆಗಿರುವ ಸಂಜಯ್ ಪಟೇಲ್ ಸಹಾಯಹಸ್ತ ಚಾಚಿದ್ದು ಈಗ ಗಂಗೂಲಿ, ರವಿಶಾಸ್ತ್ರಿ ಸೇರಿದಂತೆ ಹಲವು ಮಂದಿ ಆರ್ಥಿಕ ಸಹಾಯ ಮಾಡಿದ್ದಾರೆ.

ಮಾರ್ಟಿನ್ ಕುಟುಂಬ ಈಗ ಕಷ್ಟದಲ್ಲಿದ್ದು, ಎಷ್ಟು ಹಣ ಬೇಕೆಂದು ಕೇಳುವ ಪರಿಸ್ಥಿತಿಯಲ್ಲಿ ಅವರಿಲ್ಲ. ಹೀಗಾಗಿ ಅವರ ಕಷ್ಟಕ್ಕೆ ಕ್ರಿಕೆಟ್ ಸದಸ್ಯರು ಸಹಾಯ ಮಾಡುತ್ತಿದ್ದಾರೆ ಎಂದು ಸಂಜಯ್ ಪಟೇಲ್ ತಿಳಿಸಿದರು.

krunal pandya 5

1972 ಮೇ 11 ರಂದು ಗುಜರಾತಿನ ಬರೋಡಾದಲ್ಲಿ ಜನಿಸಿದ ಬಲಗೈ ಬ್ಯಾಟ್ಸ್ ಮನ್ ಜೇಕಬ್ ಮಾರ್ಟಿನ್ 1999ರಲ್ಲಿ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯದ ವೇಳೆ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದರು. ಒಟ್ಟು 10 ಏಕದಿನ ಪಂದ್ಯಗಳನ್ನು ಆಡಿದ್ದು, 22.57 ಸರಾಸರಿಯಲ್ಲಿ ಒಟ್ಟು 158 ರನ್ ಗಳಿಸಿದ್ದಾರೆ. ಗಂಗೂಲಿ ನಾಯಕತ್ವದಲ್ಲಿ 5 ಪಂದ್ಯ ಸಚಿನ್ ನಾಯಕತ್ವದಲ್ಲಿ ಮಾರ್ಟಿನ್ 5 ಪಂದ್ಯಗಳನ್ನು ಆಡಿದ್ದರು.

2011ರಲ್ಲಿ ಮಾನವ ಕಳ್ಳ ಸಾಗಾಣೆ ಆರೋಪದಡಿಯಲ್ಲಿ ದೆಹಲಿ ಪೊಲೀಸರು ಜೇಕಬ್ ಅವರನ್ನು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಬರೋಡದ ವಿವಿಧ ವಯೋಮಿತಿ ತಂಡಗಳಿಗೆ ತರಬೇತಿ ನೀಡುತ್ತಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Blank ChequecricketFor Ex-CricketerJacob MartinKrunal PandyaPublic TVಆಟಗಾರಕೃನಾಲ್ ಪಾಂಡ್ಯಕ್ರಿಕೆಟ್ಖಾಲಿ ಚೆಕ್ಜೇಕಬ್ ಮಾರ್ಟಿನ್ಟೀಂ ಇಂಡಿಯಾ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

byadarahalli Crime
Bengaluru City

ಅವಾಯ್ಡ್ ಮಾಡಿದ್ದಕ್ಕೆ ಬೆಂಕಿಯಿಟ್ಟು ಕೊಲೆ – ಹಂತಕಿಯ ಪ್ಲ್ಯಾನ್‌ ಕೇಳಿ ಪೊಲೀಸರೇ ಶಾಕ್

Public TV
By Public TV
2 minutes ago
Mantralaya Hundi Counting 1 1
Districts

ಬಿರು ಬೇಸಿಗೆಯಲ್ಲೂ ಮಂತ್ರಾಲಯಕ್ಕೆ ಭಕ್ತರ ದಂಡು – 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ

Public TV
By Public TV
49 minutes ago
Trump announces three week extension of Israel Lebanon ceasefire
Latest

ಇಸ್ರೇಲ್-ಲೆಬನಾನ್ ಕದನ ವಿರಾಮ 3 ವಾರಗಳವರೆಗೆ ವಿಸ್ತರಣೆ: ಟ್ರಂಪ್‌ ಸಂಧಾನ ಯಶಸ್ವಿ

Public TV
By Public TV
1 hour ago
Bidar Farmers Death
Bidar

ಸಿಡಿಲು ಬಡಿದು ಬೀದರ್‌ನ ಇಬ್ಬರು ಯುವ ರೈತರು ಸಾವು

Public TV
By Public TV
1 hour ago
Weather 1
Bagalkot

ರಾಜ್ಯದಲ್ಲಿ ಏ.29ರವರೆಗೆ, ಬೆಂಗ್ಳೂರಲ್ಲಿ ಮೇ 5ರವರೆಗೆ ಮಳೆ ಮುನ್ಸೂಚನೆ

Public TV
By Public TV
1 hour ago
Chikkamagaluru marriage
Chikkamagaluru

ಕಾಫಿನಾಡಲ್ಲೊಂದು ಅಪರೂಪದ ಮದ್ವೆ – ATMನಿಂದ ಲವ್ ಶುರು, ಈಗ ಜಾತಿ ಸಂಕೋಲೆ ಮೀರಿ ಕೈಹಿಡಿದ ಜೋಡಿ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?