ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ವಿರುದ್ಧ ಧರ್ಮ ನಿಂದನೆ ಪ್ರಕರಣ ದಾಖಲಾಗಿದ್ದು, ಅವರನ್ನು ಶೀಘ್ರವೇ ಬಂಧಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.
ಕಳೆದ ಗುರುವಾರ ಸೌದಿ ಅರೇಬಿಯಾದ ಮದೀನಾಗೆ ಭೇಟಿ ನೀಡಿದ್ದ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ವಿರುದ್ಧ ಯಾತ್ರಾರ್ಥಿಗಳು ಘೋಷಣೆ ಕೂಗಿದ್ದರು. ಇದಾದ ಬಳಿಕ ಪಾಕಿಸ್ತಾನ ತೆಹ್ರೀಕ್-ಎ-ಇನ್ಸಾಫ್ ಮುಖ್ಯಸ್ಥ ಇಮ್ರಾನ್ ಖಾನ್ ಹಾಗೂ ಅವರ ಬೆಂಬಲಿಗರ ವಿರುದ್ಧ ಧರ್ಮನಿಂದನೆಯ ಪ್ರಕರಣವನ್ನು ದಾಖಲಿಸಲಾಗಿದೆ. ಇದನ್ನೂ ಓದಿ: ರಷ್ಯಾ ಮುತ್ತಿಗೆ – ಮರಿಯುಪೋಲ್‌ನಿಂದ ನೂರಾರು ಜನರ ಸ್ಥಳಾಂತರ
Advertisement
Advertisement
ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಹಾಗೂ ಅವರ ನಿಯೋಗದ ವಿರುದ್ಧ ಗೂಂಡಾಗಿರಿ ಹಾಗೂ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಇಮ್ರಾನ್ ಖಾನ್ ಅವರನ್ನು ಬಂಧಿಸಲಾಗುವುದು ಎಂದು ಸಚಿವ ರಾಣಾ ಸನಾವುಲ್ಲಾ ತಿಳಿಸಿರುವುದಾಗಿ ವರದಿಯಾಗಿದೆ.
Advertisement
ಪ್ರಕರಣ ಏನು?
ಶೆಹಬಾಜ್ ಷರೀಫ್ ಹಾಗೂ ಅವರ ನಿಯೋಗದ ಇತರ ಸದಸ್ಯರು ಮದೀನಾದ ಪ್ರವಾದಿ ಮಸೀದಿಗೆ ಭೇಟಿ ನೀಡಿದ ಸಂದರ್ಭ ಇಮ್ರಾನ್ ಖಾನ್ ಬೆಂಬಲಿಗರು ಷರೀಫ್ ವಿರುದ್ಧ ಚೋರ್(ಕಳ್ಳ) ಹಾಗೂ ಗದ್ದರ್(ದೇಶದ್ರೋಹಿ) ಎಂದು ಘೋಷಣೆ ಕೂಗಿದ್ದರು. ಇದನ್ನೂ ಓದಿ: ಭಾರತೀಯನಿಗೆ ಒಲಿಯಿತು ಸಿಐಎಯ ಮೊದಲ ಮುಖ್ಯ ತಂತ್ರಜ್ಞಾನ ಅಧಿಕಾರಿ ಪಟ್ಟ
Advertisement
Blasphemy case registered against PTI chairman Imran Khan , former int minister Sheikh Rashid, IK’s chief of staff Shahbaz Gill and others in Faisalabad over Masjid e Nabawi, Madina incident pic.twitter.com/7Lgs2lT6nq
— Shahid Abbasi (@ShahidAbbasiPak) April 30, 2022
ಪಾಕಿಸ್ತಾನಿ ಯಾತ್ರಾರ್ಥಿಗಳು ನಿಯೋಗದ ವಿರುದ್ಧ ನಿಂದನೀಯ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದ್ದು, ಘೋಷಣೆ ಕೂಗಿದ ಐವರು ಪಾಕಿಸ್ತಾನಿಗಳನ್ನು ಬಂಧಿಸಲಾಗಿದೆ ಎಂದು ಮದೀನಾ ಪೊಲೀಸರು ತಿಳಿಸಿದ್ದಾರೆ. ಆದರೆ ಇಮ್ರಾನ್ ಖಾನ್ ಈ ರೀತಿ ಪವಿತ್ರ ಸ್ಥಳದಲ್ಲಿ ಘೋಷಣೆ ಕೂಗುವಂತೆ ಯಾರಿಗೂ ಪ್ರಚೋದನೆ ನೀಡಿಲ್ಲ ಹಾಗೂ ಆ ರೀತಿ ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ ಎಂದಿದ್ದಾರೆ.