– ಕರ್ನಾಟಕದ 6 ಆಟಗಾರರಿಗೆ ನಗದು ಪುರಸ್ಕಾರ ಘೋಷಿಸಿದ ಗೆಹ್ಲೋಟ್
– ಆಟಗಾರರೊಂದಿಗೆ ಸಿಎಂ ಸ್ವಾರಸ್ಯಕರ ಚರ್ಚೆ
ಬೆಂಗಳೂರು: ಐಬಿಎಸ್‌ಎ ವಿಶ್ವ ಕ್ರಿಕೆಟ್ ಪಂದ್ಯಾವಳಿಗಳಲ್ಲಿ (Cricket for Blind) ಪಾಲ್ಗೊಂಡು ಚಿನ್ನದ ಪದಕ ಗೆದ್ದಿರುವ ಭಾರತದ ಮಹಿಳಾ ಅಂಧ ಕ್ರಿಕೆಟ್ ತಂಡ ಹಾಗೂ ರಜತ ಪದಕ ಗೆದ್ದಿರುವ ಪುರುಷರ ಕ್ರಿಕೆಟ್ ತಂಡದ ಕರ್ನಾಟಕದ ಆಟಗಾರರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawar Chand Gehlot) ಅವರು ಅಭಿನಂದಿಸಿದ್ದಾರೆ.
ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಚಿನ್ನದ ಪದಕ ಗೆದ್ದಿರುವ ಭಾರತದ ಮಹಿಳಾ ಅಂಧ ಕ್ರಿಕೆಟ್ ತಂಡಲ್ಲಿರುವ ಕರ್ನಾಟಕದ ಮೂವರು ಆಟಗಾರರನ್ನು ಹಾಗೂ ರಜತ ಪದಕ ಗೆದ್ದಿರುವ ಪುರುಷರ ಕ್ರಿಕೆಟ್ ತಂಡದ ಕರ್ನಾಟಕದ ಮೂವರು ಆಟಗಾರರನ್ನು ಅಭಿನಂದಿಸಿದರು.
Advertisement
Advertisement
ವಿಶ್ವಮಟ್ಟದಲ್ಲಿ ಭಾರತದ ಗೌರವ ಹೆಚ್ಚಿಸಿದ ಭಾರತದ ಅಂಧರ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದ ರಾಜ್ಯಪಾಲರು, ಈ ಗೌರವ ಹೆಚ್ಚಿಸುವಲ್ಲಿ ಕರ್ನಾಟಕದ ಆಟಗಾರರು ಪಾಲುದಾರರಾಗಿರುವುದು ಹೆಮ್ಮೆಯ ಸಂಗತಿ ಎಂದಿದ್ದಾರೆ.
Advertisement
ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಕರ್ನಾಟಕದ ವರ್ಷಾ ಯು. ಹಾಗೂ ತಂಡದ ಆಟಗಾರರಾದ, ದೀಪಿಕಾ, ಗಂಗವ್ವ ಅವರಿಗೆ ತಲಾ 51,000 ರೂ. ಮತ್ತು ಪುರುಷರ ತಂಡದ ಪ್ರಕಾಶ್ ಜೆ., ಸುನೀಲ್ ಕುಮಾರ್, ಬಸಪ್ಪ ಒಡ್ಡಗೋಲ್ ಆಟಗಾರರಿಗೆ ತಲಾ 41,000 ರೂ. ನಗದು ಪ್ರೋತ್ಸಾಹವನ್ನು ನೀಡಲಾಗುವುದು ಎಂದು ರಾಜ್ಯಪಾಲರು ಘೋಷಿಸಿದರು.
Advertisement
ಈ ಸಂದರ್ಭದಲ್ಲಿ ಕ್ರಿಕೆಟ್ ಅಸೋಸಿಯೇಷನ್ ಫಾರ್ ಬ್ಲೈಂಡ್ ಇಂಡಿಯಾದ ಆಜೀವ ಅಧ್ಯಕ್ಷ ಮಹಾಂತೇಶ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಆಟಗಾರರೊಂದಿಗೆ ಸಿದ್ದರಾಮಯ್ಯ ಸಂವಾದ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಕರ್ನಾಟಕದ ವರ್ಷಾ ಯು. ಹಾಗೂ ತಂಡದ ಆಟಗಾರರಾದ, ದೀಪಿಕಾ, ಗಂಗವ್ವ ಮತ್ತು ಪುರುಷರ ತಂಡದ ಪ್ರಕಾಶ್ ಜೆ, ಸುನೀಲ್ ಕುಮಾರ್, ಬಸಪ್ಪ ಒಡ್ಡಗೋಲ್ ಅವರನ್ನು ಅಭಿನಂದಿಸಿದರು.
ಕರ್ನಾಟಕ ರಾಜ್ಯ ಒಲಂಪಿಕ್ ಸಂಸ್ಥೆ ಅಧ್ಯಕ್ಷರೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳೂ ಆದ ಗೋವಿಂದ ರಾಜು ಅವರ ನೇತೃತ್ವದಲ್ಲಿ ಪದಕ ವಿಜೇತ ಆಟಗಾರರ ತಂಡ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟಿತು. ಗೋವಿಂದರಾಜು ಅವರ ಜತೆ ಪ್ರತ್ಯೇಕವಾಗಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಂಡು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು. ಇದನ್ನೂ ಓದಿ: CWRC, CWMA, ಸುಪ್ರೀಂ ಕೋರ್ಟ್ ಮುಂದೆ ವಾಸ್ತವಾಂಶ ಇಟ್ಟರೂ ನ್ಯಾಯ ಸಿಗ್ತಿಲ್ಲ: ಸಿಎಂ
ಕ್ರಿಕೆಟ್‌ಗೆ ಹೇಗೆ ತರಬೇತಿ ಪಡೆಯುತ್ತೀರಿ, ಬಾಲನ್ನು ಹೇಗೆ ಗುರುತಿಸುತ್ತೀರಿ, ಎಷ್ಟು ಪಂದ್ಯಗಳನ್ನು ಆಡಿದ್ದೀರಿ ಎನ್ನುವುದೂ ಸೇರಿದಂತೆ ಹಲವು ಕುತೂಹಲಕಾರಿ ಪ್ರಶ್ನೆಗಳ ಮೂಲಕ ಆಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲ ಕಾಲ ಸಂವಾದ ನಡೆಸಿದರು.
ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ನಸೀರ್ ಅಹಮದ್, ಕ್ರಿಕೆಟ್ ಅಸೋಸಿಯೇಷನ್ ಫಾರ್ ಬ್ಲೈಂಡ್ ಇಂಡಿಯಾದ ಆಜೀವ ಅಧ್ಯಕ್ಷ ಮಹಾಂತೇಶ್, ಕ್ಯಾಬಿ ಅಧ್ಯಕ್ಷ ಬೂಸಾಗೌಡ ಸಮರ್ಥನಮ್ ಟ್ರಸ್ಟ್ನ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಹರಿಸಿ – ಕರ್ನಾಟಕಕ್ಕೆ ಕಾವೇರಿ ಪ್ರಾಧಿಕಾರ ಸೂಚನೆ
Web Stories