ಹಾವೇರಿ: ಬೇಸಿಗೆಯ ಎರಡು ಮೂರು ತಿಂಗಳು ರಾಜ್ಯದ ನಾನಾ ಭಾಗಗಳಲ್ಲಿ ಜೀವಜಲದ ಸಮಸ್ಯೆ ಜೋರಾಗಿರುರತ್ತದೆ. ಆದರೆ ಈಗ ಬೇಸಿಗೆಯ ಮೂರು ತಿಂಗಳ ಅವಧಿಯಲ್ಲಿ ಬ್ಲಡ್ ಬ್ಯಾಂಕ್ ನಲ್ಲಿ ರಕ್ತ ಸಮಸ್ಯೆ ಹೆಚ್ಚಾಗಿದೆ. ಹಾಗಾಗಿ ಹಾವೇರಿಯ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಹಾಗೂ ಅಧಿಕಾರಿಗಳು ರಕ್ತದಾನ ಶಿಬಿರವನ್ನು ಆಯೋಜನೆ ಮಾಡಿದ್ದಾರೆ.
ಹಾವೇರಿ ತಾಲೂಕು ಆರೋಗ್ಯ ಇಲಾಖೆಯ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಪ್ರಯೋಗಶಾಲೆಯ ತಂತ್ರಜ್ಞಾನರ ಆಶ್ರಯದಲ್ಲಿ ರಕ್ತದಾನ ಶಿಬಿರ ಆಯೋಜನೆ ಮಾಡಿದ್ದರು. ಕಾರ್ಯಕ್ರಮಕ್ಕೆ ಜಿಲ್ಲಾವೈದ್ಯಾಧಿಕಾರಿ ಡಾ.ರಾಘವೇಂದ್ರ ಚಾಲನೆ ನೀಡಿದ್ದರು. ಸದ್ಯ ಶಾಲಾ ಕಾಲೇಜುಗಳು ರಜೆ ಇವೆ. ಬೇರೆ ಅವಧಿಯಲ್ಲಿ ರಕ್ತದಾನ ಶಿಬಿರ ಆಯೋಜನೆ ಮಾಡಲಾಗುತ್ತಿತ್ತು.
Advertisement
Advertisement
ಶಾಲಾ-ಕಾಲೇಜು ಆರಂಭದ ದಿನದಲ್ಲಿ ರಕ್ತದಾನ ಶಿಬಿರ ಮಾಡುವ ಮೂಲಕ ಬ್ಲಡ್ ಬ್ಯಾಂಕ್‍ಗೆ ರಕ್ತವನ್ನು ಸಂಗ್ರಹಿಸುವ ಕಾರ್ಯ ಮಾಡಿತ್ತು. ಆದರೆ ಬೇಸಿಗೆಯಲ್ಲಿ ನೀರಿಗೆ ಹೇಗೆ ಬರ ಬಂದಿದೆ. ಹಾಗೆ ರಕ್ತದಾನಿಗಳ ಸಂಖ್ಯೆ ಬೇಸಿಗೆಯಲ್ಲಿ ಕಡಿಮೆ ಆಗಿದೆ. ಹಾಗಾಗಿ ಜಿಲ್ಲೆಯ ಬ್ಲಡ್ ಬ್ಯಾಂಕ್ ಸಿಬ್ಬಂದಿ ಹಾಗೂ ವಿವಿಧ ಸಂಘ ಸಂಸ್ಥೆಯ ಸದ್ಯಸರು ಸೇರಿದಂತೆ ಸಾರ್ವಜನಿಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದ್ದರು.
Advertisement
Advertisement
ಕಳೆದ ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ಜಿಲ್ಲಾಸ್ಪತ್ರೆಯ ಬ್ಲಡ್ ಬ್ಯಾಂಕ್ ನಲ್ಲಿ ರಕ್ತದ ಸಮಸ್ಯೆ ಹೆಚ್ಚಾಗಿದೆ. ಇದನ್ನು ಸರಿ ಮಾಡಲು ಬಡರೋಗಿಗಳಿಗೆ ಹಾಗೂ ಗರ್ಭಿಣಿ ಮಹಿಳೆಯರಿಗೆ ಅನುಕೂಲಕರ ಆಗಲಿ ಎನ್ನುವ ಉದ್ದೇಶದಿಂದ 108 ಆಸ್ಪತ್ರೆಯ ಸಿಬ್ಬಂದಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದ್ದಾರೆ. ಇದರಿಂದ ಎಲ್ಲರೂ ನಿಯಮಿತವಾಗಿ ರಕ್ತದಾನ ಮಾಡಿ. ಇನ್ನೊಂದು ಜೀವಕ್ಕೆ ಸಹಾಯ ಮಾಡಿ ಎಂದು ರಕ್ತದಾನ ಮಾಡಿದ ಸಿಬ್ಬಂದಿ ಹೇಳಿದ್ದಾರೆ.