ಮಂಗಳೂರು: ಸುರತ್ಕಲ್‍ನಲ್ಲಿ ಹತ್ಯೆಯಾದ ರಕ್ತದಾನಿ ಫಾಝಿಲ್ ಸ್ಮರಣಾರ್ಥ ಬ್ಲಡ್ ಹೆಲ್ಪ್‌ಲೈನ್ ಕರ್ನಾಟಕ ಸಂಸ್ಥೆ ರಕ್ತದಾನ ಶಿಬಿರವನ್ನು ಆಯೋಜಿಸಿತ್ತು.
Advertisement
ಹಲವಾರು ಜೀವಕ್ಕೆ ರಕ್ತವನ್ನು ಪೂರೈಸುವಂತಹ ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ ಬ್ಲಡ್ ಹೆಲ್ಪ್‌ಲೈನ್ ಕರ್ನಾಟಕ ಸಂಸ್ಥೆಯ ಸದಸ್ಯರಾದ ಮರ್ಹೂಂ ಫಾಝಿಲ್ ಮಂಗಳಪೇಟೆರವರ ಸ್ಮರಣಾರ್ಥ ದಕ್ಷಿಣ ಕನ್ನಡ ಜಿಲ್ಲೆಯ ಉಳಾಯಿಬೆಟ್ಟು, ಅಮ್ಮುಂಜೆ, ಉಳ್ಳಾಲ ಮತ್ತು ಪುತ್ತೂರಿನಲ್ಲಿ ರಕ್ತದಾನ ಶಿಬಿರ ಹಮ್ಮಿಕೊಂಡಿತ್ತು. ಇದನ್ನೂ ಓದಿ: ಯುಪಿಯಲ್ಲಿ ಮತ್ತೆ ಜೆಸಿಬಿ ಘರ್ಜನೆ – ಬಿಜೆಪಿ ನಾಯಕನ ಅಕ್ರಮ ಕಟ್ಟಡ ನೆಲಸಮ
Advertisement
Advertisement
ಕರಾವಳಿಯ ಕೋಮು ವೈಷಮ್ಯಕ್ಕೆ ಬಲಿಯಾಗಿದ್ದ ಅಮಾಯಕ ಫಾಝಿಲ್ ಅವರು ಬದುಕಿದ್ದಾಗ 14 ಬಾರಿ ರಕ್ತದಾನ ಮಾಡಿದ್ದರು. ಮಂಗಳಪೇಟೆಯ 23 ವರ್ಷ ವಯಸ್ಸಿನ ಫಾಝಿಲ್, ಬ್ಲಡ್ ಹೆಲ್ಪ್‌ಲೈನ್ ಕರ್ನಾಟಕ ಸಂಸ್ಥೆಯ ಸದಸ್ಯರಾಗಿದ್ದರು. ಇದೀಗ ಬ್ಲಡ್ ಹೆಲ್ಪ್‌ಲೈನ್ ಸಂಸ್ಥೆಯ 6ನೇ ವಾರ್ಷಿಕೋತ್ಸವದಲ್ಲಿ ಶಹೀದ್ ಫಾಝಿಲ್ ಸ್ಮರಣಾರ್ಥ ಫಾಝಿಲ್‍ಗಾಗಿ ನೂರಾರು ಮಂದಿಯಿಂದ ರಕ್ತದಾನ ಮಾಡಿದ್ದಾರೆ. ಇದನ್ನೂ ಓದಿ: 500ಮೀ. ದೂರದವರೆಗೆ ಕಾರನ್ನು ಎಳೆದೊಯ್ದ ಟ್ರಕ್- ಸಮಾಜವಾದಿ ಮುಖಂಡನಿದ್ದ ಕಾರು ಜಖಂ