– 35 ರಿಂದ 45 ಪುರೋಹಿತರು, ಕುಟುಂಬದವರಿಂದ ರಕ್ತದಾನ
ಶಿವಮೊಗ್ಗ: ಕೊರೊನಾ ಲಾಕ್‍ಡೌನ್‍ನಿಂದ ಜನರು ತುಂಬಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಮಧ್ಯೆ ರೋಗಿಗಳಿಗೆ ರಕ್ತದಾನ ಮಾಡುವವರ ಕೊರತೆ ಸಹ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕೇವಲ ಪ್ರಾರ್ಥನೆ, ಆರಾಧನೆ, ಪೂಜೆ ಪುನಸ್ಕಾರಕ್ಕೆ ಸೀಮಿತವಾಗಿದ್ದ ಪುರೋಹಿತರು ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಲಾಕ್‍ಡೌನ್ ಸಂದರ್ಭದಲ್ಲಿ ಎಲ್ಲಾ ರಕ್ತನಿಧಿ ಕೇಂದ್ರಗಳಲ್ಲಿ ರಕ್ತದ ಶೇಖರಣೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಇರುವ ರೋಗಿಗಳಿಗೆ ರಕ್ತ ಪೂರೈಕೆ ಮಾಡಲು ಕಷ್ಟವಾಗುತ್ತಿದೆ. ಕೊರೊನಾ ಸಮಸ್ಯೆ ಹೊರತುಪಡಿಸಿ, ಇತರೆ ರೋಗಿಗಳಿಗೆ ರಕ್ತದ ತುರ್ತು ಅವಶ್ಯಕತೆ ಎದ್ದು ಕಾಣುತ್ತಿದ್ದು, ಈ ಕಷ್ಟವನ್ನು ಮನಗಂಡ ಪುರೋಹಿತ ಯುವ ಪರಿಷತ್ ಸದಸ್ಯರು ರಕ್ತದಾನ ಮಾಡಿದ್ದಾರೆ.
Advertisement
Advertisement
ಶಿವಮೊಗ್ಗದ ರೋಟರಿ ರಕ್ತನಿಧಿ ಕೇಂದ್ರದಲ್ಲಿ ಸುಮಾರು 35 ರಿಂದ 45 ಪುರೋಹಿತರು ಹಾಗೂ ಅವರ ಕುಟುಂಬ ವರ್ಗದವರು ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.
Advertisement
ದಿನೇ ದಿನೇ ಕೊರೊನಾ ದೇಶದಲ್ಲಿ ವ್ಯಾಪಿಸುತ್ತಿದೆ. ಇದರಿಂದ ರಕ್ತದಾನ ಮಾಡಲು ಯಾರೂ ಕೂಡ ಮುಂದೆ ಬರುತ್ತಿಲ್ಲ. ಆದರೆ ಅಗತ್ಯವಿರುವ ರೋಗಿಗಳಿಗೆ ಸರಿಯಾದ ಸಮಯಕ್ಕೆ ರಕ್ತ ಸಿಗದೆ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಎಲ್ಲರೂ ರಕ್ತದಾನ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.