Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿಂದಲೇ ಐಪಿಎಲ್‌ ಎತ್ತಂಗಡಿ- ಪುಣೆಯಲ್ಲಿ ಆರ್‌ಸಿಬಿ ಮ್ಯಾಚ್‌!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | ಬೆಂಗಳೂರಿಂದಲೇ ಐಪಿಎಲ್‌ ಎತ್ತಂಗಡಿ- ಪುಣೆಯಲ್ಲಿ ಆರ್‌ಸಿಬಿ ಮ್ಯಾಚ್‌!

Sports

ಬೆಂಗಳೂರಿಂದಲೇ ಐಪಿಎಲ್‌ ಎತ್ತಂಗಡಿ- ಪುಣೆಯಲ್ಲಿ ಆರ್‌ಸಿಬಿ ಮ್ಯಾಚ್‌!

Public TV
Last updated: November 12, 2025 2:48 pm
Public TV
Share
3 Min Read
RCB Champions
SHARE

ಮುಂಬೈ: 17 ವರ್ಷಗಳ ವನವಾಸದ ನಂತರ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಚಾಂಪಿಯನ್‌ ಕಿರೀಟ ಮುಡಿಗೇರಿಸಿಕೊಂಡಿತು. ಆದರೆ ಟ್ರೋಫಿ ಗೆದ್ದ ಖುಷಿ ಒಂದು ದಿನ ಕಳೆಯುವ ಮುನ್ನವೇ ಮಣ್ಣುಪಾಲಾಯಿತು. ಈ ದುಃಖದಿಂದ ಅಭಿಮಾನಿಗಳು (RCB Fans) ಹೊರಬರುತ್ತಿರುವಾಗಲೇ ಮತ್ತೊಂದು ಶಾಕ್‌ ಎದುರಾಗಿದೆ.

ಹೌದು. ಮುಂಬರುವ 2026ರ ಐಪಿಎಲ್ (IPL 2026) ಆವೃತ್ತಿಯಲ್ಲಿ RCB ತಂಡದ ಯಾವುದೇ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯುವುದಿಲ್ಲ ಎನ್ನಲಾಗುತ್ತಿದೆ. ಆರ್‌ಸಿಬಿಯ ತವರು ಮೈದಾನ ಕರ್ನಾಟಕದಿಂದಲೇ ಎತ್ತಂಗಡಿ ಆಗುವ ಎಲ್ಲಾ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: IPL 2026 | ಡಿಸೆಂಬರ್‌ನಲ್ಲಿ ಭಾರತದಲ್ಲೇ ಮಿನಿ ಹರಾಜು – ರಿಟೇನ್‌ ಪಟ್ಟಿ ಬಿಡುಗಡೆಗೆ ನ.15 ಡೆಡ್‌ಲೈನ್‌

rcb stampede

ಸಾಮಾನ್ಯವಾಗಿ ಚಾಂಪಿಯನ್‌ ಆಗಿ ಹೊರಹೊಮ್ಮಿದ ಫ್ರಾಂಚೈಸಿಗಳ ತವರು ಕ್ರೀಡಾಂಗಣದಲ್ಲಿ ಮರು ವರ್ಷದ ಐಪಿಎಲ್‌ ಟೂರ್ನಿ ಉದ್ಘಾಟನೆ ನಡೆಯುತ್ತದೆ. ಹಾಗೆಯೇ 19ನೇ ಆವೃತ್ತಿಯ ಐಪಿಎಲ್‌ ಟೂರ್ನಿ ಬೆಂಗಳೂರಿನಲ್ಲಿ (Bengaluru) ನಡೆಯಬೇಕಿತ್ತು. ಆದ್ರೆ ಚಿನ್ನಸ್ವಾಮಿ ಕ್ರೀಡಾಂಗಣದಿಂದಲೇ ಟೂರ್ನಿ ಎತ್ತಂಗಡಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಈ ಹಿಂದೆಯೂ ಹಲವು ಕಾರಣಗಳಿಗಾಗಿ ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ಥಾನ್ ರಾಯಲ್ಸ್ ತಮ್ಮ ತವರು ಮೈದಾನವನ್ನ ಬದಲಾಯಿಸಿಕೊಂಡಿದ್ದವು. 2009 ರಲ್ಲಿ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಭದ್ರತಾ ಕಾರಣಗಳಿಗಾಗಿ ಇಡೀ ಟೂರ್ನಿಯನ್ನು ದಕ್ಷಿಣ ಆಫ್ರಿಕಾಗೆ ಸ್ಥಳಾಂತರಿಸಲಾಗಿತ್ತು. 2022ರಲ್ಲಿ ಕೋವಿಡ್ ಕಾರಣಗಳಿಗಾಗಿ ಟೂರ್ನಿ ದುಬೈಗೆ ಶಿಫ್ಟ್‌ಆಗಿತ್ತು. ಆಗ ಆರ್‌ಸಿಬಿ ಸೇರಿದಂತೆ ಎಲ್ಲಾ ತಂಡಗಳೂ ತಮ್ಮ ತವರು ಕ್ರೀಡಾಂಗಣವನ್ನ ತೊರೆದಿದ್ದವು. ಆದರೆ ಕಳೆದ ಬಾರಿಯ ಕಾಲ್ತುಳಿತ ದುರಂತ ಪ್ರಕರಣ ಈಗ ಆರ್‌ಸಿಬಿ ತವರು ನೆಲವನ್ನ ತೊರೆಯುವಂತೆ ಮಾಡಿದೆ. ಇದನ್ನೂ ಓದಿ: ದೆಹಲಿ ಸ್ಫೋಟದ ಬಾಧಿತರಿಗೆ ನಮ್ಮ ಪ್ರಾರ್ಥನೆ: ಆರ್‌ಸಿಬಿ

Vidhasoudha RCB Honour

ಪುಣೆಯಲ್ಲಿ ಪಂದ್ಯ:
ವರದಿಗಳ ಪ್ರಕಾರ, ಆರ್‌ಸಿಬಿ ತನ್ನ ಎಲ್ಲಾ ತವರು ಪಂದ್ಯಗಳನ್ನ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ (MCA) ಕ್ರೀಡಾಂಗಣದಲ್ಲಿ ಆಡುವ ಸಾಧ್ಯತೆಯಿದೆ. ಈ ಕುರಿತು MCA ಕಾರ್ಯದರ್ಶಿ ಕಮಲೇಶ್ ಪೈ ಮಾತನಾಡಿ, ಪುಣೆಯಲ್ಲಿ RCB ಪಂದ್ಯಗಳನ್ನ ಆಯೋಜಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಇದು ಇನ್ನೂ ಖಚಿತವಾಗಿಲ್ಲ. ಬೆಂಗಳೂರಿನಲ್ಲಿ ನಡೆದ ದುರಂತದ ಕಾರಣದಿಂದಾಗಿ ಅಲ್ಲಿ ಪಂದ್ಯಗಳನ್ನು ಆಯೋಜಿಸಲು ಸಮಸ್ಯೆ ಎದುರಾಗಿದೆ. ಆದ್ದರಿಂದ ಅವರು ಬೇರೆ ಕ್ರೀಡಾಂಗಣ ಹುಡುಕುತ್ತಿದ್ದಾರೆ. ನಮ್ಮ ಕ್ರೀಡಾಂಗಣವನ್ನು ಒದಗಿಸಲು ನಾವು ಮುಂದೆ ಬಂದಿದ್ದೇವೆ. ಪ್ರಾಥಮಿಕ ಚರ್ಚೆಗಳು ನಡೆದಿವೆ. ಕೆಲವು ತಾಂತ್ರಿಕ ವಿಷಯಗಳನ್ನು ಪರಿಹರಿಸಬೇಕಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಪುಣೆ ಆರ್‌ಸಿಬಿಯ ಪಂದ್ಯಗಳನ್ನು ಆಯೋಜಿಸಲಿದೆ ಎಂದು ತಿಳಿಸಿದ್ದಾರೆ.

Chinnaswamy Stampede 1

ಪುಣೆಗೆ ಶಿಫ್ಟ್‌ ಯಾಕೆ?
ಪ್ರಸಕ್ತ ವರ್ಷದ ಜೂನ್‌ 4ರಂದು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಕ ಸಂಭವಿಸಿದ ಕಾಲ್ತುಳಿತ ದುರಂತವೇ ಟೂರ್ನಿ ಸ್ಥಳಾಂತರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಜೂನ್‌ 3ರ ರಾತ್ರಿ ಐಪಿಎಲ್‌ ಟ್ರೋಫಿ ಗೆದ್ದು 17 ವರ್ಷಗಳ ವನವಾಸಕ್ಕೆ ಅಂತ್ಯ ಹಾಡಿತ್ತು. ಮರುದಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದ ದುರಂತ ನಡೆದು 11 ಜನ ಅಭಿಮಾನಿಗಳು ಪ್ರಾಣ ಕಳೆದುಕೊಂಡರು. ಈ ಘಟನೆಯಿಂದ ಸುರಕ್ಷತೆ ಬಗ್ಗೆ ಕಳವಳ ಹೆಚ್ಚಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣವನ್ನು ದೊಡ್ಡ ಪ್ರಮಾಣದ ಕಾರ್ಯಕ್ರಮಗಳಿಗೆ ಸೂಕ್ತವಲ್ಲ ಮತ್ತು ಅಸುರಕ್ಷಿತ ಎಂದು ಕರ್ನಾಟಕ ಸರ್ಕಾರ ನೇಮಿಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಸಮಿತಿ ಹೇಳಿತ್ತು. ಇದನ್ನೂ ಓದಿ: ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗರು!

RCB Win 05

ಈ ಹಿಂದೆ ಮಹಿಳಾ ವಿಶ್ವಕಪ್‌ ಪಂದ್ಯಗಳನ್ನು ಬೆಂಗಳೂರಿನಲ್ಲಿ ಆಯೋಜಿಸಲು ಬಿಸಿಸಿಐ ನಿರ್ಧಾರ ತೆಗೆದುಕೊಂಡಿತ್ತು. ನಂತರ ಪಂದ್ಯಗಳನ್ನು ಮುಂಬೈಗೆ ಶಿಫ್ಟ್ ಮಾಡಲಾಗಿತ್ತು. ಅಷ್ಟೇ ಅಲ್ಲದೇ ಬೆಂಗಳೂರು ಪೊಲೀಸರು ಚಿನ್ನಸ್ವಾಮಿಯಲ್ಲಿ ಮೈದಾನದಲ್ಲಿ ಆಡಿಸಲು 17 ಷರತ್ತುಗಳನ್ನು ಸಹ ವಿಧಿಸಿದ್ದರು. ಒಂದು ವೇಳೆ ಬೆಂಗಳೂರಿನಲ್ಲಿ ಆಡಿಸಿ ಮತ್ತೆ ಸಮಸ್ಯೆಯಾದರೆ ಮತ್ತೊಂದು ಕಪ್ಪು ಚುಕ್ಕೆ ಬರದೇ ಇರಲು ತನ್ನ ಎಲ್ಲಾ ಪಂದ್ಯಗಳನ್ನು ಪುಣೆಯಲ್ಲಿ ಆಡಲು ಆರ್‌ಸಿಬಿ ಆಡಳಿತ ಮಂಡಳಿ ಮುಂದಾಗಿದೆ ಎನ್ನಲಾಗುತ್ತಿದೆ.

ಪುಣೆಯಲ್ಲಿ ತನ್ನ ಪಂದ್ಯಗಳನ್ನು ಶಿಫ್ಟ್‌ ಮಾಡುವ ಬಗ್ಗೆ ಇಲ್ಲಿಯವರೆಗೆ ಆರ್‌ಸಿಬಿ ಅಧಿಕೃತವಾಗಿ ಎಲ್ಲಿಯೂ ಹೇಳಿಕೆ ನೀಡಿಲ್ಲ. ಇದನ್ನೂ ಓದಿ: ಜಯ್‌ ಶಾ ಮಧ್ಯಪ್ರವೇಶದಿಂದ ಪ್ರತೀಕಾ ರಾವಲ್‌ಗೆ ಸಿಕ್ತು ಚಿನ್ನದ ಪದಕ

TAGGED:bengaluruchinnaswamy stadiumChinnaswamy StampedeIPL 2026rcbRCB Fansvirat kohliಆರ್‍ಸಿಬಿಐಪಿಎಲ್‌ 2026ಕಾಲ್ತುಳಿತ ದುರಂತಚಿನ್ನಸ್ವಾಮಿ ಕ್ರೀಡಾಂಗಣಬೆಂಗಳೂರು
Share This Article
Facebook Whatsapp Whatsapp Telegram

Cinema news

Asha Bhosle and Narendra Modi
ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದವರು ಆಶಾ ಭೋಸ್ಲೆ: ಮೋದಿ ಕಂಬನಿ
Bollywood Cinema Latest Main Post National
Asha Bhosle
ಹೃದಯ ಸ್ತಂಭನದಿಂದ ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ
Bollywood Cinema Latest Main Post National
Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood

You Might Also Like

Pumpwell Accident
Dakshina Kannada

ಮಂಗಳೂರಿನ ಪಂಪ್‌ವೆಲ್‌ನಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು

Public TV
By Public TV
2 minutes ago
Ruturaj Gaikwad 2
Cricket

ಗೆದ್ದರೂ ಖುಷಿಯಿಲ್ಲ – ಸಿಎಸ್‌ಕೆ ನಾಯಕ ರುತುರಾಜ್‌ಗೆ 12 ಲಕ್ಷ ದಂಡ

Public TV
By Public TV
10 minutes ago
PEENYA 2
Bengaluru City

ಗಮನಿಸಿ, ತುಮಕೂರು ರೋಡ್‌ ಫ್ಲೈಓವರ್‌ ಬಂದ್‌ ಇಲ್ಲ

Public TV
By Public TV
15 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 12-04-2026

Public TV
By Public TV
24 minutes ago
WEATHER 1 e1679398614299
Districts

ರಾಜ್ಯದ ಹವಾಮಾನ ವರದಿ 11-04-2026

Public TV
By Public TV
25 minutes ago
abdul jabbar d.k.shivakumar
Bengaluru City

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

Public TV
By Public TV
38 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?