ಬೆಂಗಳೂರು: ಪೀಣ್ಯದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿರುವ ಆರೆಂಜ್ ಲೈನ್‌ನ ನಮ್ಮ ಮೆಟ್ರೋ (Namma Metro) ರೈಲು ನಿಲ್ದಾಣವನ್ನು ಹೊರ ವರ್ತುಲ ರಸ್ತೆ ಗೊರಗುಂಟೆಪಾಳ್ಯ ಸಿಗ್ನಲ್ ಬಳಿಗೆ ಸ್ಥಳಾಂತರಿಸುವ ಬಗ್ಗೆ ಬಿಎಂಆರ್‌ಸಿಎಲ್ (BMRCL) ಚಿಂತನೆ ನಡೆಸಿದೆ.
ನಮ್ಮ ಮೆಟ್ರೋ ಯೋಜನೆಯ 3ನೇ ಹಂತದಲ್ಲಿ ನಿರ್ಮಾಣವಾಗಲಿರುವ ಜೆಪಿ ನಗರ, 4ನೇ ಹಂತದ ಕೆಂಪಾಪುರವರೆಗಿನ 32.15 ಕಿ.ಮೀ ಆರೆಂಜ್ ಲೈನ್ ಅನ್ನು 300 ಮೀ.ಗಳಷ್ಟು ಕಡಿಮೆ ಮಾಡುವ ಉದ್ದೇಶದಿಂದ ಈ ಚಿಂತನೆಗೆ ಮುಂದಾಗಿದೆ. ಹೊಸ ನಿಲ್ದಾಣವು ಪೀಣ್ಯ ಮತ್ತು ಗೊರಗುಂಟೆಪಾಳ್ಯದಲ್ಲಿ ಅಸ್ತಿತ್ವದಲ್ಲಿರುವ ಮೆಟ್ರೋ ನಿಲ್ದಾಣಗಳಿಗೆ ಎರಡು ಪ್ರತ್ಯೇಕ ಪಾದಚಾರಿ ಮೇಲ್ಸೇತುವೆಗಳ ಮೂಲಕ ಸಂಪರ್ಕ ಕಲ್ಪಿಸಲಿದೆ.ಇದನ್ನೂ ಓದಿ: Delhi Election 2025 Results | ಮಾಜಿ ಸಿಎಂ ಕೇಜ್ರಿವಾಲ್‌ಗೆ ಸೋಲು
ಇತ್ತೀಚೆಗಷ್ಟೇ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಮೆಟ್ರೋ ನಿರ್ಮಾಣ ಸ್ಥಳಗಳಿಗೆ ಗುರುವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಬಿಎಂಆರ್‌ಸಿಎಲ್ ಅಧಿಕಾರಿಗಳು ಡಿಸಿಎಂ ಅವರ ಬಳಿ ಈ ಪ್ರಸ್ತಾವನೆಯನ್ನು ಮಂಡಿಸಿದ್ದಾರೆ.
3 ಹಂತದ ವಿಸ್ತೃತ ಯೋಜನಾ ವರದಿಯನ್ನು ರಾಜ್ಯ ಸರ್ಕಾರ ಈಗಾಗಲೇ ಅನುಮೋದಿಸಿದೆ. 3ನೇ ಹಂತವು ಎರಡು ಕಾರಿಡಾರ್‌ಗಳನ್ನು ಒಳಗೊಂಡಿದೆ. ಅವುಗಳೆಂದರೆ, ಆರೆಂಜ್ ಲೈನ್ ಮತ್ತು 12.5 ಕಿ.ಮೀ ಹೊಸಹಳ್ಳಿಯಿಂದ ಕಡಬಗೆರೆವರೆಗಿನ ಎರಡನೇ ಕಾರಿಡಾರ್‌ನ್ನು ಒಳಗೊಂಡಿದೆ.
ಜೆಪಿ ನಗರ, ಮೈಸೂರು ರಸ್ತೆ, ಸುಮನಹಳ್ಳಿ ಮತ್ತು ಪೀಣ್ಯದಲ್ಲಿ ಇಂಟರ್‌ಚೇಂಜ್ ನಿಲ್ದಾಣಗಳನ್ನು ಯೋಜಿಸಲಾಗಿತ್ತು. ಆದರೆ ಪೀಣ್ಯ ಇಂಟರ್‌ಚೇಂಜ್‌ಗೆ ಸಂಬಂಧಿಸಿದಂತೆ ಮರುಪರಿಶೀಲನೆ ನಡೆಯುತ್ತಿದೆ. ಕಾರಣ ಪೀಣ್ಯದಲ್ಲಿ ಇಂಟರ್ ಚೇಂಜ್ ನಿರ್ಮಾಣಕ್ಕೆ ಅತಿ ಹೆಚ್ಚು ಎತ್ತರಿಸಬೇಕಾದ ಅಗತ್ಯವಿದೆ. ಹೀಗಾಗಿ ದೂರ ಕಡಿಮೆ ಮಾಡುವ ಉದ್ದೇಶದಿಂದ ಗೊರಗುಂಟೆಪಾಳ್ಯಕ್ಕೆ ಸ್ಥಳಾಂತರಿಸಲು ಬಿಎಂಆರ್‌ಸಿಎಲ್ ಚಿಂತನೆ ನಡೆಸುತ್ತಿದೆ.ಇದನ್ನೂ ಓದಿ: ಕೇಜ್ರಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ: ಜಗದೀಶ್ ಶೆಟ್ಟರ್