ಬೆಂಗಳೂರು: ನಮ್ಮ ಮೆಟ್ರೋಗೆ (Namma Metro) ಹೈಟೆಕ್ ಟಚ್ ಸಿಗ್ತಿದೆ. ಮೆಟ್ರೋ ನಿಲ್ದಾಣದ ಒಳಗೆ ಮಾಲ್, ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಬಿಎಂಆರ್‌ಸಿಎಲ್ (BMRCL) ಪ್ಲ್ಯಾನ್ ಮಾಡಿದೆ. ಆದಾಯ ಸಂಗ್ರಹಣೆ ಭಾಗವಾಗಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‍ನಲ್ಲಿ (Majestic) ಇನ್ನೂ 4 ಮಹಡಿಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ.
Advertisement
ಬೆಂಗಳೂರಿನ (Bengaluru) ಮೆಜೆಸ್ಟಿಕ್ ಸದಾ ಜನದಟ್ಟಣೆಯಿಂದ ಕೂಡಿರುವ ಪ್ರದೇಶ. ಪ್ರತಿನಿತ್ಯ ಲಕ್ಷಾಂತರ ಜನರು ಈ ಪ್ರದೇಶಕ್ಕೆ ಭೇಟಿ ನೀಡುತ್ತಾರೆ. ನಮ್ಮ ಮೆಟ್ರೋ ಹೊರತುಪಡಿಸಿ ಕೆಎಸ್‍ಆರ್‌ಟಿಸಿ (KSRTC) ಮತ್ತು ಬಿಎಂಟಿಸಿ (BMTC) ಬಸ್ ನಿಲ್ದಾಣ, ರೈಲು ನಿಲ್ದಾಣ ಸಹ ಇದೇ ಪ್ರದೇಶದಲ್ಲಿದೆ. ಇಲ್ಲಿ ವಾಣಿಜ್ಯ ಚಟುವಟಿಕೆ ಆರಂಭಿಸಿದರೆ ಅನುಕೂಲವಾಗಲಿದೆ ಎಂಬುದು ಬಿಎಂಆರ್‌ಸಿಎಲ್ ಲೆಕ್ಕಾಚಾರ. ಈ ಕಾರಣಕ್ಕಾಗಿಯೇ ಮೆಟ್ರೋ ನಿಲ್ದಾಣದಲ್ಲಿ ನಾಲ್ಕು ಮಹಡಿಗಳನ್ನು ನಿರ್ಮಾಣ ಮಾಡಿ ಶಾಪಿಂಗ್ ಮಾಲ್, ಥಿಯೇಟರ್, ಕಚೇರಿಗಳಿಗೆ ಬಾಡಿಗೆ ನೀಡಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ. ಇದನ್ನೂ ಓದಿ: ರಾಜಕೀಯ ಎದುರಾಳಿಗಳಿಗೆ ಸಿದ್ದರಾಮಯ್ಯ ಪ್ರತ್ಯಾಸ್ತ್ರ- ಕ್ಷೇತ್ರ ಘೋಷಣೆ ಮುಂದೂಡಿಕೆಗೆ ಮಾಸ್ಟರ್‌ಪ್ಲಾನ್
Advertisement
Advertisement
ಮೆಜಸ್ಟಿಕ್ ಮೆಟ್ರೋ ನಿಲ್ದಾಣವನ್ನು ಭವಿಷ್ಯದ ವಾಣಿಜ್ಯ ಚಟುವಟಿಕೆಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಣ ಮಾಡಲಾಗಿದೆ. ನೆಲದಡಿಯಲ್ಲಿಯೇ ಹೊಸದಾಗಿ ನಾಲ್ಕು ಮಹಡಿ ನಿರ್ಮಾಣ ಮಾಡಿ, ವಾಣಿಜ್ಯ ಚಟುವಟಿಕೆಗಳನ್ನು ಆರಂಭಿಸಲಾಗುತ್ತದೆ. ಬಿಎಂಆರ್‌ಸಿಎಲ್ ನೆಲದಡಿಯಲ್ಲಿ ನಿರ್ಮಾಣ ಮಾಡಿರುವ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ 7 ಎಕರೆ ಪ್ರದೇಶದಲ್ಲಿದೆ. ಜೊತೆಗೆ ನೇರಳೆ ಮಾರ್ಗವನ್ನು ಬೈಯಪ್ಪನಹಳ್ಳಿಯಿಂದ ವೈಟ್‍ಫೀಲ್ಡ್ ತನಕ ವಿಸ್ತರಣೆ ಮಾಡಲಾಗುತ್ತಿದೆ. ಇದನ್ನೂ ಓದಿ: ದಲಿತರು ಬಿಜೆಪಿ ಜೊತೆಗಲ್ಲ, ನನ್ನ ಹೃದಯದಲ್ಲಿದ್ದಾರೆ: ಸಿ.ಟಿ.ರವಿ
Advertisement
ಮೆಜೆಸ್ಟಿಕ್ ಮೆಟ್ರೋ ನಿಲ್ದಾಣವನ್ನು ಭವಿಷ್ಯದ ವಾಣಿಜ್ಯ ಚಟುವಟಿಕೆಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಣ ಮಾಡಲಾಗಿದೆ. ನೆಲದಡಿಯಲ್ಲಿಯೇ ಹೊಸದಾಗಿ ನಾಲ್ಕು ಮಹಡಿ ನಿರ್ಮಾಣ ಮಾಡಿ, ವಾಣಿಜ್ಯ ಚಟುವಟಿಕೆಗಳನ್ನು ಆರಂಭಿಸಲಾಗುತ್ತದೆ. ಬಿಎಂಆರ್‌ಸಿಎಲ್ ನೆಲದಡಿಯಲ್ಲಿ ನಿರ್ಮಾಣ ಮಾಡಿರುವ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ 7 ಎಕರೆ ಪ್ರದೇಶದಲ್ಲಿದೆ. ಜೊತೆಗೆ ನೇರಳೆ ಮಾರ್ಗವನ್ನು ಬೈಯಪ್ಪನಹಳ್ಳಿಯಿಂದ ವೈಟ್‍ಫೀಲ್ಡ್ ತನಕ ವಿಸ್ತರಣೆ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಯಾಣಿಕರು ಮೆಜೆಸ್ಟಿಕ್ ನಿಲ್ದಾಣಕ್ಕೆ ಭೇಟಿ ನೀಡುವ ನಿರೀಕ್ಷೆ ಇದೆ. ಬರುವಂತಹ ಪ್ರಯಾಣಿಕರಿಗೆ ಈ ಯೋಜನೆ ಉಪಯೋಗವಾಗುವ ನಿಟ್ಟಿನಲ್ಲಿ ಈ ಪ್ಲ್ಯಾನ್ ಮಾಡಲಾಗಿದ್ದು, ನಗರದ ಎರಡು ನಿಲ್ದಾಣಗಳಲ್ಲಿ ಮೊದಲ ಹಂತದಲ್ಲಿ ಈ ಯೋಜನೆಗೆ ಮಾಡಲಿದ್ದು, ಇನ್ನೆರೆಡು ತಿಂಗಳಲ್ಲಿ ಕೆಲಸ ಆರಂಭಿಸುವ ತಯಾರಿ ನಡೆದಿದೆ ಎಂದು ಅಂಜುಂ ಪರ್ವೇಜ್, ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರು ಮಾಹಿತಿ ಹಂಚಿಕೊಂಡಿದ್ದಾರೆ.