– ಮೆಟ್ರೋ ದರ ಏರಿಕೆ ವಿರುದ್ಧ ಜನಾಕ್ರೋಶ
ಬೆಂಗಳೂರು: ಬಿಎಂಆರ್‌ಸಿಎಲ್ (BMRCL) ಬೆಂಗಳೂರಿಗರಿಗೆ ಮತ್ತೆ ದರ ಏರಿಕೆ ಶಾಕ್ ಕೊಡೋಕೆ ಮುಂದಾಗಿದೆ. ಮೊನ್ನೆ ಮೊನ್ನೆ ತಾನೆ ದರ ಏರಿಕೆ ಮಾಡಿ ಸದ್ದು ಮಾಡಿದ್ದ ನಮ್ಮ ಮೆಟ್ರೋ ಇದೀಗ ಮತ್ತೊಮ್ಮೆ ದರ ಏರಿಕೆಗೆ ಸಿದ್ಧವಾಗುತ್ತಿದೆ. ಇದಕ್ಕೆ ಸಾವರ್ಜನಿಕರು ಆಕ್ರೋಶ ವ್ಯಕ್ತಪಡಿಸಿಸುತ್ತಿದ್ದಾರೆ. ಈ ಬಗ್ಗೆ ಸಂಸದ ತೇಜಸ್ವಿ ಸೂರ್ಯ (Tejasvi Surya) ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ.
ನಮ್ಮ ಮೆಟ್ರೋ ದೇಶದಲ್ಲೇ ದುಬಾರಿ ಮೆಟ್ರೋ ಎಂಬ ಹಣೆಪಟ್ಟಿ ಹೊಂದಿದೆ. ಪದೇ ಪದೇ ಮೆಟ್ರೋ ಪ್ರಯಾಣ ದರ ಹೆಚ್ಚಳದಿಂದ ಪ್ರಯಾಣಿಕರಿಗೆ ಮತ್ತಷ್ಟು ಹೊರೆ ಆಗಲಿದೆ. ನಮ್ಮ ಮೆಟ್ರೋ ಟಿಕೆಟ್ ದರ ಫೆಬ್ರವರಿಯಿಂದ ಮತ್ತಷ್ಟು ಏರಿಕೆಯಾಗುವ ಕುರಿತು ಚರ್ಚೆ ನಡೆಯುತ್ತಿದ್ದು, ಈ ನಿರ್ಧಾರಕ್ಕೆ ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಗೋಮಾಳ ಒತ್ತುವರಿ ತೆರವು

ಮೆಟ್ರೋ ಟಿಕೆಟ್ ದರವನ್ನು ಪ್ರತಿವರ್ಷ ಗರಿಷ್ಠ ಶೇ.5ರಷ್ಟು ಹೆಚ್ಚಿಸಲು ಫೇರ್ ಫಿಕ್ಸೇಶನ್ ಕಮಿಟಿ ಶಿಫಾರಸು ಮಾಡಿರುವ ಕಾರಣ, ದಿನನಿತ್ಯದ ಪ್ರಯಾಣಕ್ಕೆ ಮೆಟ್ರೋ ರೈಲು ಅವಲಂಬಿಸಿರುವವರಿಗೆ ಮತ್ತಷ್ಟು ಹೊರೆಯಾಗುವ ಸಾಧ್ಯತೆ ಇದೆ. ಇತ್ತೀಚೆಗಷ್ಟೇ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ದರಗಳನ್ನು ಭಾರಿ ಪ್ರಮಾಣದಲ್ಲಿ ಪರಿಷ್ಕರಿಸಿತ್ತು. ಕೆಲ ಮಾರ್ಗಗಳಲ್ಲಿ ಶೇ.71ರಷ್ಟು ದರ ಹೆಚ್ಚಿಸಿ ಸ್ವಲ್ಪ ದಿನವಷ್ಟೇ ಕಳೆಯುತ್ತಿದೆ. ಈ ಹೊತ್ತಲ್ಲಿ ಬಿಎಂಆರ್‌ಸಿಎಲ್ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಶಾಕ್ ಕೊಡುತ್ತಾ ಎನ್ನವ ಪ್ರಶ್ನೆಯೀಗ ಉದ್ಭವಿಸಿದೆ. ಪ್ರತಿವರ್ಷ ನಮ್ಮ ಮೆಟ್ರೋ ರೈಲುಗಳ ಟಿಕೆಟ್ ದರ ಪರಿಷ್ಕರಣೆಗೆ ಪ್ರಯಾಣಿಕರಿಂದ ತಿವ್ರ ಆಕ್ಷೇಪ ವ್ಯಕ್ತವಾಗಿದೆ. ಇದನ್ನೂ ಓದಿ: ಭಾರತದ Gen Z ಬಿಜೆಪಿ ಮೇಲೆ ನಂಬಿಕೆ ಇಟ್ಟಿದೆ: ಪ್ರಧಾನಿ ಮೋದಿ
ಪ್ರತಿವರ್ಷ ಫೆಬ್ರವರಿಯಲ್ಲಿ 5% ಸ್ವಯಂಚಾಲಿತ ದರ ಏರಿಕೆ ಮಾಡಲು ಬಿಎಂಆರ್‌ಸಿಎಲ್ ಸಿದ್ಧತೆ ಮಾಡಿಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಮೆಟ್ರೋಗೆ ದರ ನಿಗದಿ ಸಮಿತಿಯನ್ನು ಪುನರ್ ರಚಿಸಬೇಕು ಹಾಗೂ ಅಧಿಕಾರಿಗಳ ತಪ್ಪು ಲೆಕ್ಕ ಸರಿಪಡಿಸುವವರೆಗೆ ವಾರ್ಷಿಕ ದರ ಏರಿಕೆಯನ್ನು ತಡೆಹಿಡಿಯಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದ್ದಾರೆ. ದರ ಏರಿಕೆ ಮಾಡಿದ್ರೇ ಪ್ರತಿ ಮೆಟ್ರೋ ಸ್ಟೇಷನ್ ಮುಂದೆ ಪ್ರತಿಭಟನೆ ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಸುಂದರ ಹುಡುಗಿಯನ್ನ ನೋಡಿ ಸೆಳೆತಕ್ಕೊಳಗಾಗಿ ರೇಪ್ ಮಾಡ್ತಾರೆ – ಕಾಂಗ್ರೆಸ್ ಶಾಸಕ ವಿವಾದ
ಈ ಬಗ್ಗೆ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ ಬಿಎಂಆರ್‌ಸಿಎಲ್ ಮತ್ತೆ ಖಜಾನೆ ಭರ್ತಿಗೆ ಫೆಬ್ರವರಿಗೆ 5% ದರ ಏರಿಕೆ ಮಾಡಲು ಮುಂದಾಗಿದೆ. ಈ ಮೂಲಕ ಜನರ ಜೇಬಿಗೆ ಕತ್ತರಿ ಹಾಕೋಕೆ ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಮೆಟ್ರೋಗೆ ದರ ನಿಗದಿ ಸಮಿತಿಯನ್ನು ಪುನರ್ ರಚಿಸಬೇಕು. ಬೆಂಗಳೂರು ಮೆಟ್ರೋ ದೇಶದಲ್ಲಿ ದುಬಾರಿ ಮೆಟ್ರೋ ಆಗಿದೆ. ಸಾಮಾನ್ಯ ಜನ ಮೆಟ್ರೋ ಬಳಸದ ರೀತಿ ಆಗಿದೆ ಎಂದಿದ್ದಾರೆ. ಜೊತೆಗೆ ಸಿಎಂ, ಡಿಸಿಎಂ ರಾಜ್ಯದ ಜನತೆ ಪರ ನಿಲ್ಲಬೇಕು. ಬೆಂಗಳೂರು ಮೆಟ್ರೋಗೆ ದರ ನಿಗದಿ ಸಮಿತಿ ಮಾಡುವಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಿ ಎಂದಿದ್ದಾರೆ. ಇದನ್ನೂ ಓದಿ: ಸಿಎಂ ಬದಲಾವಣೆ ವಿಚಾರದಲ್ಲಿ ಮೂಗು ತೂರಿಸಲ್ಲ: ಹೆಚ್‌ಸಿ ಬಾಲಕೃಷ್ಣ
ಇನ್ನು ಸೇವ್ ಬೆಂಗಳೂರು ಕಮಿಟಿ ಹಾಗೂ ಬೆಂಗಳೂರು ಮೆಟ್ರೋ ಪ್ರಯಾಣಿಕರ ವೇದಿಕೆ ಬಿಎಂಆರ್‌ಸಿಎಲ್ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿದ್ದು, ಯಾವುದೇ ಕಾರಣಕ್ಕೂ ಮುಂದಿನ ತಿಂಗಳಿಂದ ದರ ಏರಿಕೆ ಮಾಡಬಾರದು ಎಂದು ಒತ್ತಾಯಿಸಿದೆ. ಪದೇಪದೇ ದರ ಏರಿಕೆ ಪ್ರಯಾಣಿಕರ ಮೇಲೆ ಭಾರೀ ಹೊರೆ ಆಗುತ್ತಿದೆ ಎಂದು ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪೌರಾಯುಕ್ತೆಗೆ ಧಮ್ಕಿ ಕೇಸ್; ನಿರೀಕ್ಷಣಾ ಜಾಮೀನಿಗೆ ರಾಜೀವ್ ಗೌಡ ಅರ್ಜಿ ಸಲ್ಲಿಕೆ

