ಬೆಂಗಳೂರು: ಬಿಎಂಟಿಸಿ ಬಸ್ ಅಪಘಾತಕ್ಕೆ (BMTC Bus Accident) ವಿಶೇಷ ಚೇತನ ಬಲಿಯಾಗಿರುವ ಘಟನೆ ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ನಡೆದಿದೆ.
ಯಶವಂತಪುರದಿಂದ ಬಸ್ ಮೆಜೆಸ್ಟಿಕ್‌ಗೆ ಬರುತ್ತಿದ್ದ ವೇಳೆ ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದ (Majestic Bus Stop) ಎಂಟ್ರಿ ಗೇಟ್ ಬಳಿ ಅವಘಡ ಸಂಭವಿಸಿದೆ. ಘಟನೆಗೆ ಅತಿವೇಗದ ಚಾಲನೆಯೇ ಕಾರಣ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಲಬುರಗಿಯಲ್ಲಿ ದಶಕದ ಬಳಿಕ ಸಚಿವ ಸಂಪುಟ ಸಭೆ- 11,770 ಕೋಟಿ ರೂ. ಅನುದಾನಕ್ಕೆ ಸಂಪುಟ ಅಸ್ತು
ಘಟನೆಗೆ ಕಾರಣವಾದ ಬಿಎಂಟಿಸಿ ಚಾಲಕ ಗೋಪಾಲಯ್ಯನನ್ನ ಉಪ್ಪಾರಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಸದಸ್ಯರ ಮೇಲೆ ದಾಳಿ, ಸಾವಿರಾರು ಪೇಜರ್ ಸ್ಫೋಟ – 8 ಸಾವು, 2 ಸಾವಿರಕ್ಕೂ ಹೆಚ್ಚು ಮಂದಿ ಗಂಭೀರ ಗಾಯ