- 45 ಪ್ರಯಾಣಿಕರು ಗ್ರೇಟ್ ಎಸ್ಕೇಪ್
ಬೆಂಗಳೂರು: ಚಲಿಸುತ್ತಿರುವಾಗಲೇ ಬಿಎಂಟಿಸಿ ಚಾಲಕನಿಗೆ (BMTC Bus Driver) ಹೃದಯಾಘಾತ ಕಾಣಿಸಿಕೊಂಡಿದ್ದು, ಸಂಚಾರ ಪೊಲೀಸರ ಸಮಯ ಪ್ರಜ್ಞೆಯಿಂದ ಜೀವ ಉಳಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಶಾಂತಿನಗರದ ಜೋಡಿ ರಸ್ತೆ ಬಳಿ ಘಟನೆ ನಡೆದಿದೆ. KA51AJ6905 ಬಸ್ ಚಾಲನೆ ಮಾಡುತ್ತಿದ್ದ ವೇಳೆ ಚಾಲಕ ವೀರೇಶ್‌ಗೆ ಏಕಾಏಕಿ ಹೃದಯಾಘಾತ (Heart Attack) ಸಂಭವಿಸಿದೆ. ನಡುರಸ್ತೆಯಲ್ಲೇ ಬಸ್ ಸ್ಲೋ ಆಗಿದ್ದನ್ನ ಕಂಡು ಸಮೀಪದಲ್ಲಿದ್ದ ಟ್ರಾಫಿಕ್ ಪೊಲೀಸರು ಓಡೋಡಿ ಬಂದಿದ್ದಾರೆ.
- Advertisement3
ಹಲಸೂರು ಟ್ರಾಫಿಕ್ ಪೊಲೀಸ್ (Halasur Traffic Police) ಆರ್. ರಘುಕುಮಾರ್ ಬಸ್ ಬಳಿ ನೋಡಿದಾಗ, ಚಾಲಕ ಎದೆ ಬಿಗಿ ಹಿಡಿದುಕೊಂಡು ಒಂದು ಕಡೆಗೆ ಚಾಲಕ ವಾಲಿದ್ದನ್ನು ನೋಡಿದ್ದಾರೆ. ಬಳಿಕ ಹ್ಯಾಂಡ್ ಬ್ರೇಕ್ ಹಾಕಿ ಬಸ್ ನಿಲ್ಲಿಸಿ, ಚಾಲಕನ್ನು ಕೆಳಗಿಳಿಸಿದ್ದಾರೆ. ನಂತರ ಅಂಬುಲೆನ್ಸ್‌ಗೂ ಕಾಯದೇ ಅಶೋಕ ನಗರ ಟ್ರಾಫಿಕ್ ಸಿಬ್ಬಂದಿ ಪ್ರಸನ್ನಕುಮಾರ್ ಸಹಾಯದಿಂದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟ್ರಾಫಿಕ್ ಪೊಲೀಸರ ಸಮಯಪ್ರಜ್ಞೆಯಿಂದ 45 ಪ್ರಯಾಣಿಕರು ಬಚಾವ್ ಆಗಿದ್ದಾರೆ. ಇದನ್ನೂ ಓದಿ: ತಿರುಪತಿ ಲಡ್ಡು ಪ್ರಸಾದದಲ್ಲಿ ಮೀನಿನ ಎಣ್ಣೆ ಬೆರೆಸಿರುವುದು ಸ್ಪಷ್ಟವಾಗಿದೆ: ರಾಮಜನ್ಮಭೂಮಿ ಪ್ರಧಾನ ಅರ್ಚಕ
- Advertisement
ಟ್ರಾಫಿಕ್ ಪೊಲೀಸರ ಸಮಯಪ್ರಜ್ಞೆಗೆ ಸಾರ್ವಜನಿಕರು ಭೇಷ್ ಎಂದಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ ಭಾರತ ಮೂಲದ ಧ್ರುವಿ ಪಟೇಲ್‌ಗೆ ಮಿಸ್ ಇಂಡಿಯಾ ವರ್ಲ್ಡ್‌ವೈಡ್ ಕಿರೀಟ!