Bengaluru CityLatestLeading NewsMain Post

ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು – ಬಸ್ ಚಾಲಕನಿಗೆ ಸಾರ್ವಜನಿಕರಿಂದ ಥಳಿತ

ಬೆಂಗಳೂರು: ಬಿಎಂಟಿಸಿ ಬಸ್ (BMTC Bus) ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ (Bengaluru) ಕಾಮಾಕ್ಷಿಪಾಳ್ಯದ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಘಟನೆ ನಡೆದಿದೆ.

ಮುಂದೆ ಹೋಗುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದೆ. ನೆಲಕ್ಕೆ ಬಿದ್ದ ಯುವಕನ ತಲೆಗೆ ಗಂಭೀರ ಗಾಯವಾಗಿ ರಕ್ತಸ್ರಾವವಾಗಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಚಿಕ್ಕಮಗಳೂರು, ಉಡುಪಿಯಲ್ಲಿ ಡೇಂಜರ್ ಸೇತುವೆ – ನಿರ್ವಹಣೆ ಇಲ್ಲದೇ ಬೀಳುವ ಸ್ಥಿತಿ

ಘಟನೆಯಿಂದ ಆಕ್ರೋಶಗೊಂಡ ಸಾರ್ವಜನಿಕರು ಅಪಘಾತಕ್ಕೆ ಕಾರಣವಾದ ಬಸ್ ಚಾಲಕನಿಗೆ ಥಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕಾಮಾಕ್ಷಿಪಳ್ಯ ಠಾಣೆ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗೆ ಕೆ.ಸಿ.ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ದೊಡ್ಡಗಣೇಶ ದೇಗುಲದಲ್ಲಿ ಚಪ್ಪಲಿ ಸ್ಟ್ಯಾಂಡ್‍ಗೂ ಮೀಸಲಾತಿ!

Live Tv

Leave a Reply

Your email address will not be published. Required fields are marked *

Back to top button