ಬೆಂಗಳೂರು: ಬಿಎಂಟಿಸಿ (BMTC) ಎಲೆಕ್ಟ್ರಿಕಲ್ ಬಸ್ ಬ್ರೇಕ್ ಫೇಲ್ ಆಗಿ ಬೀಡಾ ಅಂಗಡಿ ಹಾಗೂ ಡಾಬಾ ಗೋಡೆಗೆ ಡಿಕ್ಕಿಯಾದ (Accident) ಘಟನೆ ನಾಗದೇವನಹಳ್ಳಿ ರಸ್ತೆಯಲ್ಲಿ ನಡೆದಿದೆ.
ಬೆಳಗ್ಗೆ 6:27ರ ಸುಮಾರಿಗೆ ಬಸ್ ಶಿರ್ಕೆ ಸರ್ಕಲ್‌ನಿಂದ ನಾಗರಭಾವಿ ಕಡೆ ಹೊರಟಿತ್ತು. ಈ ಸಮಯದಲ್ಲಿ ಬಸ್ ಅಪಘಾತ ನಡೆದಿದೆ. ಅಪಘಾತದ ವೇಳೆ ರಸ್ತೆಯಲ್ಲಿ ಯಾರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಅವಘಡದಿಂದ ಬಸ್‌ನಲ್ಲಿದ್ದ ಮೂವರು ಪ್ರಯಾಣಿಕರು ಕೆಲ ಸಮಯ ಆತಂಕಕ್ಕೆ ಒಳಗಾಗಿದ್ದರು.
Advertisement
Advertisement
ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ಎದೆ ನಡುಗಿಸುವಂತಿದೆ.