ಬೆಂಗಳೂರು: ಬಿಎಂಟಿಸಿ ಸಂಚಾರದಲ್ಲಿ ಇಂದು ಯಾವುದೇ ರೀತಿಯ ವ್ಯತ್ಯಯ ಇಲ್ಲ. ಎಂದಿನಂತೆ ಬಿಎಂಟಿಸಿ ಬಸ್‍ಗಳು ಬೆಳಗ್ಗೆಯಿಂದಲೇ ರಸ್ತೆಗಿಳಿದಿವೆ.
ಬಿಎಂಟಿಸಿ ನೌಕರರು ನಮ್ಮನ್ನ ಸರ್ಕಾರಿ ನೌಕರರನ್ನಾಗಿ ಸರ್ಕಾರ ಪರಿಗಣಿಸಿಬೇಕೆಂದು ಒತ್ತಾಯಿಸಿ ಫ್ರೀಡಂ ಪಾರ್ಕ್ ನಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಬಿಎಂಟಿಸಿ ಚಾಲಕರು ಹಾಗೂ ನಿರ್ವಾಹಕರು ಪ್ರತಿಭಟನೆಯಲ್ಲಿ ಭಾಗವಹಿಸಿದರೆ ಬಿಎಂಟಿಸಿ ಸಂಚಾರದಲ್ಲಿ ವ್ಯತ್ಯಯ ಉಂಟಾಗಬಹುದೆಂಬ ಆತಂಕದಲ್ಲಿ ಸಾರ್ವಜನಿಕರಿದ್ದರು. ಬಿಎಂಟಿಸಿ ಸಿಬ್ಬಂದಿ ಉಪವಾಸ ಸತ್ಯಾಗ್ರಹದಿಂದ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ, ಸಾರ್ವಜನಿಕರಿಗೆ ತೊಂದರೆ ಆಗದೇ ರೀತಿಯಲ್ಲಿ ಪ್ರತಿಭಟನೆ ಮಾಡಲು ಬಿಎಂಟಿಸಿ ಸಿಬ್ಬಂದಿ ಪ್ಲಾನ್ ಮಾಡಿಕೊಂಡಿದ್ದಾರೆ.
Advertisement
Advertisement
ಫ್ರೀಡಂ ಪಾರ್ಕ್ ನಲ್ಲಿ ಬೆಳಗ್ಗೆ 7.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಕುಟುಂಬ ಸದಸ್ಯರೊಂದಿಗೆ ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ. ಉಪವಾಸ ಸತ್ಯಾಗ್ರಹದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದ ತನಕ ಸೆಕೆಂಡ್ ಶಿಫ್ಟ್ ನಲ್ಲಿರುವವರು ಭಾಗವಹಿಸುತ್ತಾರೆ. ಮಾರ್ನಿಂಗ್ ಶಿಫ್ಟ್ ನಲ್ಲಿ ಕೆಲಸ ಮಾಡಿರುವವರು ಮಧ್ಯಾಹ್ನದ ನಂತರ ಹೋಗಿ ಉಪವಾಸ ಸತ್ಯಾಗ್ರಹದಲ್ಲಿ ಭಾಗಿಯಾಗಲಿದ್ದಾರೆಂದು ಬಿಎಂಟಿಸಿ ಮೂಲಗಳಿಂದ ತಿಳಿದು ಬಂದಿದೆ.
Advertisement
ಬಿಎಂಟಿಸಿ ನೌಕರರು ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶವನ್ನ ನೀಡಲಿದ್ದಾರೆ. ಕಳೆದ ಬಾರಿ ಸಮ್ಮಿಶ್ರ ಸರ್ಕಾರ ಇದ್ದ ಸಂದರ್ಭದಲ್ಲಿ ಪತ್ರ ಚಳುವಳಿ ಮಾಡಿ ನಮ್ಮನ್ನ ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂದು ಒತ್ತಾಯಿಸಿದ್ದದರು. ಕಳೆದ ಸಮ್ಮಿಶ್ರ ಸರ್ಕಾರ ಬಿಎಂಟಿಸಿ ನೌಕಕರರ ಒತ್ತಾಯಕ್ಕೆ ಮಣಿಯದೇ ಇದ್ದ ಕಾರಣ ಮತ್ತೆ ಬಿಎಂಟಿಸಿ ನೌಕರರು ಉಪವಾಸ ಸತ್ಯಾಗ್ರಹ ಮಾಡುವುದರ ಮೂಲಕ ಸರ್ಕಾರದ ಮೇಲೆ ಒತ್ತಡ ಏರಲು ತೀರ್ಮಾನಿಸಿದ್ದಾರೆ.