– ಒಪ್ಪಂದದ ಮೇಲೆ ಪಡೆಯುವ ಬಸ್‌ಗಳ ದರ ಏರಿಸಿದ ಸಾರಿಗೆ ಇಲಾಖೆ
ಬೆಂಗಳೂರು: ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಪ್ರಯಾಣ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಬಿಎಂಟಿಸಿ (BMTC) ಪಾಸ್‌ಗಳ ದರದಲ್ಲಿ ಏರಿಕೆಯಾಗಿದೆ.
Advertisement
ನಾಳೆಯಿಂದಲೇ ಬಿಎಂಟಿಸಿ ಪಾಸ್‌ಗಳ ದರ ಏರಿಕೆ ಆಗಲಿದೆ. ಹಳೆಯ ಪಾಸ್ ದರವನ್ನು ಪರಿಷ್ಕರಿಸಿ ಹೊಸ ದರ ಕುರಿತು ಪ್ರಕಟಣೆ ಹೊರಡಿಸಲಾಗಿದೆ. ಇದನ್ನೂ ಓದಿ: ಹೊಸ ವರ್ಷಕ್ಕೆ ಶಾಕ್ – ಜ.5 ರಿಂದ ಬಸ್ ಪ್ರಯಾಣ ದರ ಏರಿಕೆ
Advertisement
Advertisement
ಬಿಎಂಟಿಸಿ ಡೈಲಿ ಪಾಸ್ – 70 ರೂ. (ಹಳೆಯ ದರ), 80 ರೂ. (ಹೊಸ ದರ)
ಬಿಎಂಟಿಸಿ ವಾರದ ಪಾಸ್ – 300 ರೂ. (ಹಳೆಯ ದರ), 350 ರೂ. (ಹೊಸ ದರ)
ಹಿರಿಯ ನಾಗರಿಕರ ಮಾಸಿಕ ಪಾಸ್ – 945 ರೂ. (ಹಳೆಯ ದರ), 1,080 ರೂ. (ಹೊಸ ದರ)
ಸಾಮಾನ್ಯ ಮಾಸಿಕ ಪಾಸ್ – 1,050 ರೂ. (ಹಳೆಯ ದರ), 1,200 ರೂ. (ಹೊಸ ದರ)
ನೈಸ್ ರೋಡ್ ಮಾಸಿಕ ಪಾಸ್ – 2,200 ರೂ. (ಹಳೆಯ ದರ), 2,350 ರೂ. (ಹೊಸ ದರ)
Advertisement
ಇತ್ತ, ಒಪ್ಪಂದದ ಮೇಲೆ ಪಡೆಯುವ ಬಸ್‌ಗಳ ದರವನ್ನು ಸಾರಿಗೆ ಇಲಾಖೆ ಏರಿಕೆ ಮಾಡಿದೆ. ಸಾಂದರ್ಭಿಕ ಒಪ್ಪಂದದ ಮೇಲೆ ಒದಗಿಸುವ ಬಸ್‌ಗಳ ಬಾಡಿಗೆ ಪರಿಷ್ಕರಣೆ ಮಾಡಲಾಗಿದೆ. ಈ ದರವನ್ನು ಕೆಎಸ್‌ಆರ್‌ಟಿಸಿ ಶೇ. 15ರಷ್ಟು ಹೆಚ್ಚಳ ಮಾಡಿದೆ. ಇದನ್ನೂ ಓದಿ: ಇದು ಮೋಸದ ಸರ್ಕಾರ: ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸಾರ್ವಜನಿಕರು ಆಕ್ರೋಶ
ಪ್ರತಿ ಕಿಮೀ ದರದ ಮೇಲೆ ಬಾಡಿಗೆ ದರ ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಸಾರಿಗೆ, ಅಶ್ವಮೇಧ, ಮಿಡಿ ಬಸ್, ಪಲಕ್ಕಿ ಸೇರಿದಂತೆ 16 ಬಗೆಯ ಬಸ್‌ಗಳ ಬಾಡಿಗೆ ದರ ಏರಿಕೆಯಾಗಿದೆ. ಐರಾವತ, ಅಂಬಾರಿ ಸೇರಿದಂತೆ ಮತ್ತಿತರ ಎಸಿ ಬಸ್‌ಗಳಿಗೆ ಜಿಎಸ್‌ಟಿ ಸೇರಿದಂತೆ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಲಾಗಿದೆ. ನೂತನ ದರವು ಇಂದಿನಿಂದ ಅನ್ವಯವಾಗಲಿದೆ.
ಈಗಾಗಲೇ ಬುಕ್ಕಿಂಗ್ ಮಾಡಲಾಗಿರುವ ಒಪ್ಪಂದದ ವಾಹನಗಳಿಗೆ ಹಳೆಯ ದರವನ್ನೇ ವಿಧಿಸುವಂತೆ ಕೆಎಸ್‌ಆರ್‌ಟಿಸಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಯಾವುದೇ ಮಂತ್ರಿ, ಶಾಸಕರ ಮಕ್ಕಳು ಬಸ್‌ನಲ್ಲಿ ಓಡಾಡಲ್ಲ: ಟಿಕೆಟ್ ದರ ಏರಿಕೆಗೆ ಹೆಚ್‌ಡಿಕೆ ಕಿಡಿ