– ಹ್ಯಾರಿಸ್, ಸುಬ್ಬಾರೆಡ್ಡಿ, ನನ್ನ ಅಧ್ಯಕ್ಷ ಸ್ಥಾನ ಕ್ಲಿಯರ್- ಸೋಮಶೇಖರ್ ಸ್ಪಷ್ಟನೆ
ಬೆಂಗಳೂರು: ತೀವ್ರ ವಿವಾದಕ್ಕೆ ಕಾರಣವಾಗಿದ್ದ 5 ನಿಗಮ-ಮಂಡಳಿ ಅಧ್ಯಕ್ಷ ನೇಮಕ ತಡೆ ವಿಚಾರದ ಗೊಂದಲ ಸ್ವಲ್ಪ ಮಟ್ಟಿಗೆ ಶಮನವಾದಂತೆ ಕಾಣುತ್ತಿದೆ. 5 ಸ್ಥಾನಗಳ ಪೈಕಿ 3 ಸ್ಥಾನಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಂಕಿತ ಹಾಕಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣದಲ್ಲಿ ಇಂದು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಬಳಿಕ ಮಾತನಾಡಿದ ಶಾಸಕರು, ನನಗೆ, ಶಾಸಕರಾದ ಹ್ಯಾರಿಸ್, ಸುಬ್ಬಾರೆಡ್ಡಿ ಅವರಿಗೆ ನೀಡಲಾಗಿದ್ದ ನಿಗಮ-ಮಂಡಳಿ ಸ್ಥಾನಕ್ಕೆ ಸಹಿ ಹಾಕಿ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಅವರಿಗೆ ಕಳುಹಿಸಿದ್ದೇನೆ ಅಂತ ಸಿಎಂ ಹೇಳಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನು ಓದಿ: ಶಾಸಕ ಸುಧಾಕರ್ ಗೆ ಸಚಿವ ಸ್ಥಾನವೂ ಇಲ್ಲ, ಈಗ ಪರಿಸರ ನಿಯಂತ್ರಣ ಮಂಡಳಿ ಅಧ್ಯಕ್ಷ ಪದವಿಗೂ ಕುತ್ತು
Advertisement
Advertisement
ಮೊದಲ ಪಟ್ಟಿಯಲ್ಲಿ ಯಾಕೆ ಸಹಿ ಹಾಕಿಲ್ಲ ಎನ್ನುವುದು ಗೊತ್ತಿಲ್ಲ. ಈ ಕುರಿತು ಕುಮಾರಸ್ವಾಮಿ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಮೊದಲ ಪಟ್ಟಿಯಲ್ಲಿ ಹೆಸರು ಬಂದರೇನು, ಎರಡನೇ ಪಟ್ಟಿಯಲ್ಲಿ ಬಂದರೆ ಏನು ವ್ಯತ್ಯಾಸ ಆಗುವುದಿಲ್ಲ. ಸಿಎಂ ಸಹಿ ಹಾಕಿರುವುದಾಗಿ ಹೇಳಿದ್ದಾರೆ. ಆದೇಶ ಬಂದ ಕೂಡಲೇ ಅಧಿಕಾರ ಸ್ವೀಕಾರ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನು ಓದಿ: ಮೈತ್ರಿ ಮಾಡೋದ್ರಲ್ಲಿ ಜೆಡಿಎಸ್ ಅವರೇ ಬೆಸ್ಟ್: ಸುಧಾಕರ್ ವ್ಯಂಗ್ಯ
Advertisement
ಉಳಿದ ಎರಡು ಸ್ಥಾನಗಳ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡುತ್ತಿದ್ದಂತೆ ಶಾಸಕರು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಹೀಗಾಗಿ ಎರಡನೇ ಪಟ್ಟಿಯಲ್ಲಿಯೂ ಶಾಸಕ ಡಾ.ಸುಧಾಕರ್ ಮತ್ತು ವೆಂಕಟರಮಣ ಅವರಿಗೆ ನೀಡಿದ್ದ ಸ್ಥಾನಗಳಿಗೆ ಸಿಎಂ ಸಹಿ ಹಾಕದೇ ತಡೆಹಿಡಿದಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv