ಬೆಂಗಳೂರು: 2,000 ರೂ. ಮುಖಬೆಲೆಯ ನೋಟುಗಳನ್ನು ಆರ್‌ಬಿಐ (RBI) ಹಿಂಪಡೆದ ನಂತರ ಪೆಟ್ರೋಲ್ ಬಂಕ್‌ಗಳಲ್ಲಿ (Petrol Bunk) ಪಿಂಕ್ ನೋಟಿನ ಹಾವಳಿ ಜಾಸ್ತಿಯಾಗಿದೆ. ಜನರು 200 ರೂ.ಗಳ ಪೆಟ್ರೋಲ್ ಹಾಕಿಸಿಕೊಂಡರೂ 2,000 ರೂ. ನೀಡುತ್ತಿದ್ದಾರೆ. ಇದರಿಂದ ಪೆಟ್ರೋಲ್ ಬಂಕ್ ಮಾಲೀಕರು ಸಂಕಷ್ಟದಲ್ಲಿ ಸಿಲುಕಿದ್ದಾರೆ.
2,000 ರೂ. ನೋಟ್ ಬ್ಯಾನ್ (Note Ban) ಬೆನ್ನಲ್ಲೇ ಜನರು ತಮ್ಮಲ್ಲಿರುವ 2,000 ರೂ. ನೋಟುಗಳನ್ನು ಬ್ಯಾಂಕ್, ಆಸ್ಪತ್ರೆ ಹಾಗೂ ಪೆಟ್ರೋಲ್ ಬಂಕ್‌ನಲ್ಲಿ ಕೊಟ್ಟು ಬಚಾವ್ ಆಗುತ್ತಿದ್ದಾರೆ. ಆದರೆ ಇದರಿಂದ ಪೆಟ್ರೋಲ್ ಬಂಕ್ ಮಾಲೀಕರು ಕಂಗೆಟ್ಟಿದ್ದಾರೆ. ಜನರು 100-200 ರೂ. ಪೆಟ್ರೋಲ್ ಹಾಕಿಸಿದರೂ 2,000 ರೂ. ಪಿಂಕ್ ನೋಟನ್ನು ಕೊಡುತ್ತಿದ್ದಾರೆ. ಇದರಿಂದ ಬಂಕ್ ಮಾಲೀಕರಿಗೆ ಚೇಂಜ್ ಸಮಸ್ಯೆ ಆಗುತ್ತಿದೆ. ಇದನ್ನೂ ಓದಿ: ಇಂದಿನಿಂದ 2,000 ಮುಖಬೆಲೆ ನೋಟು ವಿನಿಮಯ ಪ್ರಕ್ರಿಯೆ ಆರಂಭ
ಇದರಿಂದ ಹೈರಾಣಾದ ಗೊರಗುಂಟೆಪಾಳ್ಯ (Goraguntepalya) ಪೆಟ್ರೋಲ್ ಬಂಕ್ ಮಾಲೀಕರು ಹೊಸದೊಂದು ಬೋರ್ಡ್ ಅನ್ನು ತಮ್ಮ ಪೆಟ್ರೋಲ್ ಬಂಕ್‌ನಲ್ಲಿ ಅಳವಡಿಸಿದ್ದಾರೆ. ಆ ಬೋರ್ಡ್‌ನಲ್ಲಿ 1,500 ರೂ.ಗಳ ಪೆಟ್ರೋಲ್ ಹಾಕಿಸಿದರೆ ಮಾತ್ರ 2,000 ರೂ. ನೋಟನ್ನು ನೀಡಿ ಸಹಕರಿಸಿ ಎಂದು ಬರೆಯುವ ಮೂಲಕ ಜನರಲ್ಲಿ ಚೇಂಜ್ ನೀಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸರ್ಕಾರದ ಬಳಿ ಅಂಕಿ ಅಂಶಗಳೇ ಇಲ್ಲ – ಶೀಘ್ರವೇ ಗ್ಯಾರಂಟಿ ಯೋಜನೆ ಜಾರಿ ಅನುಮಾನ