ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಸಮುದ್ರದಲ್ಲಿ ಮುಳುಗಡೆಯಾದ ಘಟನೆ ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕಾದ ಅಳಿವೆ ಪ್ರದೇಶದಲ್ಲಿ ನಡೆದಿದೆ.
Advertisement
ಇಂದು ಹೊನ್ನಾವರದ ಬಂದರಿನಿಂದ ಶ್ರೀಕೃಷ್ಣ ಭಂಡಾರಿ ಹೆಸರಿನ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಬಳಿಕ ಮೀನು ಹಿಡಿದುಕೊಂಡು ವಾಪಸ್ ಬರುವಾಗ ಜಲ ಮಾರ್ಗದ ಮಧ್ಯದ ಅಳಿವೆ ಪ್ರದೇಶದಲ್ಲಿ ಹೂಳು ತುಂಬಿದ್ದರಿಂದ ಇಂಜಿನ್‍ನಲ್ಲಿ ಸಮಸ್ಯೆ ಕಂಡು ಬಂದು ಮುಳುಗಡೆ ಆಗಿದೆ. ಇದರಿಂದಾಗಿ ಬೋಟ್‍ನಲ್ಲಿದ್ದ ಮೀನುಗಾರರು ಅಪಾಯಕ್ಕೆ ಸಿಲುಕಿದ್ದಾರೆ. ಇದನ್ನೂ ಓದಿ: ಇಂಧನ ಬೆಲೆ ಫ್ಲೆಕ್ಸಿಬಲ್ ಇರುತ್ತೆ, ಏನೂ ಸಮಸ್ಯೆ ಆಗಲ್ಲ: ನಾರಾಯಣಗೌಡ ಉಡಾಫೆ
Advertisement
Advertisement
ಬೋಟ್‍ನಲ್ಲಿದ್ದ 6 ಮಂದಿ ಮೀನುಗಾರರನ್ನು ಕರಾವಳಿ ಕಾವಲು ಪಡೆ ಪೊಲೀಸರು ಹಾಗೂ ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಶ್ರೀಕೃಷ್ಣ ಭಂಡಾರಿ ಹೆಸರಿನ ಶಿವರಾಮ ಶ್ರೀಯಾನ್ ಮಾಲೀಕತ್ವದ ಬೋಟ್ ಇದಾಗಿದ್ದು, ಬೋಟ್ ಮುಳುಗಡೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಷ್ಟವಾಗಿದೆ. ಇದನ್ನೂ ಓದಿ: ಅವೈಜ್ಞಾನಿಕ ಮೀನುಗಾರಿಕೆ – ಕಡಲ ಜೀವಿಗಳಿಗೆ ತಂದ ಆತಂಕ
Advertisement