ಲಕ್ನೋ: 30ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದ ದೋಣಿ ನದಿಯಲ್ಲಿ ಮುಳುಗಿ, ಅದರಲ್ಲಿದ್ದ 17 ಜನರು ನಾಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಯಮುನಾ ನದಿಯಲ್ಲಿ ನಡೆದಿದೆ. ಗುರುವಾರ ನಡೆದ ಘಟನೆಯಲ್ಲಿ ಇಲ್ಲಿಯವರೆಗೆ ಕೇವಲ ಮೂವರ ಮೃತದೇಹ ಹೊರ ತೆಗೆಯಲಾಗಿದೆ, 13 ಜನರನ್ನು ರಕ್ಷಿಸಲಾಗಿದೆ ಎಂದು ಶುಕ್ರವಾರ ಅಧಿಕಾರಿಗಳು ತಿಳಿಸಿದ್ದಾರೆ.
ಗುರುವಾರ ಫತೇಪುರ್ ಜಿಲ್ಲೆಯ ಮರ್ಕಾದಿಂದ ಜರೌಲಿ ಘಾಟ್‌ಗೆ ತೆರಳುತ್ತಿದ್ದ ದೋಣಿ ನದಿಯಲ್ಲಿ ಮಗುಚಿ ಬಿದ್ದಿದೆ. ಅದರಲ್ಲಿ 30ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇಬ್ಬರು ಮಹಿಳೆಯರು ಹಾಗೂ ಮಗುವಿನ ಶವ ನದಿಯಿಂದ ಹೊರತೆಗೆಯಲಾಗಿದೆ. ಇದನ್ನೂ ಓದಿ: ಪಂಚಾಯತ್ ದಲಿತ ಅಧ್ಯಕ್ಷರು ಕುರ್ಚಿಯಲ್ಲಿ ಕೂರುವಂತಿಲ್ಲ, ಸ್ವಾತಂತ್ರ್ಯ ದಿನ ಧ್ವಜ ಹಾರಿಸುವಂತಿಲ್ಲ: ಸರ್ವೇಯಿಂದ ತಾರತಮ್ಯ ಬೆಳಕಿಗೆ
Advertisement
Advertisement
ಜಿಲ್ಲೆಯ ಮಾರ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಸಂಗರ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಡಿಐಜಿ ಮಿಶ್ರಾ ತಿಳಿಸಿದ್ದಾರೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದು, ಸಹಾಯಕ್ಕಾಗಿ ಪ್ರಯಾಗ್‌ರಾಜ್‌ನಿಂದ ಡೈವರ್‌ಗಳನ್ನೂ ಕರೆಸಲಾಗಿದೆ. ಇದನ್ನೂ ಓದಿ: ಶೀಘ್ರವೇ ಉದ್ಘಾಟನೆಗೊಳ್ಳಲಿದೆ ದೆಹಲಿ-ಕಾಶ್ಮೀರಕ್ಕೆ ಸಂಪರ್ಕ ಕಲ್ಪಿಸುವ ವಿಶ್ವದ ಅತಿ ಎತ್ತರದ ರೈಲ್ವೇ ಸೇತುವೆ
Advertisement
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಚಿವರಾದ ರಾಕೇಶ್ ಸಚನ್ ಮತ್ತು ರಾಮಕೇಶ್ ನಿಶಾದ್ ಅವರನ್ನು ಸ್ಥಳಕ್ಕೆ ತಲುಪುವಂತೆ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ವಿಪತ್ತು ಪರಿಹಾರ ನಿಧಿಯಿಂದ ತಲಾ 4 ಲಕ್ಷ ರೂ. ಆರ್ಥಿಕ ನೆರವು ನೀಡಲು ಸೂಚನೆ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.