ಉಡುಪಿ: ಮಲ್ಪೆ ಬಂದರಿನಲ್ಲಿ ಲಂಗರು ಹಾಕಿದ್ದ ಬೋಟ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.
ಹಿಮಾಲಯ ಎಂಬ ಹೆಸರಿನ ಪರ್ಸಿನ್ ಬೋಟು ಬೆಂಕಿಗಾಹುತಿಯಾಗಿದೆ. ಅನ್ವರ್ ಸಾಹೇಬ್ ಎಂಬವರಿಗೆ ಸೇರಿದ ಮೀನುಗಾರಿಕಾ ಬೋಟ್ ಇದಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ.
ಬೋಟ್ ವೆಚ್ಚ ಹಾಗೂ ಒಳಗಿದ್ದ ಸಾಮಾಗ್ರಿಗಳು ಸೇರಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಬೋಟ್‍ನಲ್ಲಿದ್ದ ಮೀನುಗಾರರು ಅಡುಗೆ ಮಾಡುವ ಸಂದರ್ಭದಲ್ಲಿ ಬೆಂಕಿ ಹೊತ್ತಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.