ಕಾರವಾರ: ಇಲ್ಲಿನ ಲೈಟ್ ಹೌಸ್ ಬಳಿ ಸಮುದ್ರದಲ್ಲಿ ಮೀನು ಹಿಡಿಯಲು ತೆರಳಿದ್ದ ಉಡುಪಿ ಮೂಲದ ವರದಾ ಹೆಸರಿನ ಬೋಟೊಂದು ಬೆಂಕಿ ಅವಘಡಕ್ಕೆ ಒಳಗಾಗಿ ದೋಣಿಯಲ್ಲಿದ್ದ ಏಳು ಮಂದಿ ಮೀನುಗಾರರನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ.
Advertisement
ಘಟನೆ ಆಗಿದ್ದು ಹೇಗೆ?
ಉಡುಪಿ ಜಿಲ್ಲೆಯ ಮಲ್ಪೆಯ ವರದಾ ಹೆಸರಿನ (ನೋಂದಣಿ ಸಂಖ್ಯೆ IND KA 02 MM 4495) ದೋಣಿಯು ಲೈಟ್ ಹೌಸ್ ನಡುಗಡ್ಡೆಯಿಂದ 10 ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸುತಿತ್ತು. ಈ ವೇಳೆ ಇಂಜಿನ್‌ನಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡು ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಹೊತ್ತಿಕೊಂಡಿತ್ತು. ಅವಘಡದ ಬಗ್ಗೆ ಮಾಹಿತಿ ಪಡೆದ ನವ ಮಂಗಳೂರಿನ ಕೋಸ್ಟ್ ಗಾರ್ಡ್ ಅಧಿಕಾರಿಗಳು, ತಕ್ಷಣ ಕಾರವಾರದ ‘ಸಿ 155’ ಗಸ್ತು ನೌಕೆಯಲ್ಲಿ ರಕ್ಷಣಾ ಸಿಬ್ಬಂದಿಯನ್ನು ಕಾರವಾರಕ್ಕೆ ಕಳುಹಿಸಿಕೊಟ್ಟರು. ಇದನ್ನೂ ಓದಿ: ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟ – 7 ಮಂದಿಗೆ ಗಾಯ
Advertisement
Advertisement
ಇನ್ನು ಧಗಿಸುತಿದ್ದ ದೋಣಿಯಲ್ಲಿ ಮೀನುಗಾರರು ಸಹ ಇದ್ದಿದ್ದರಿಂದ ದೋಣಿಯಲ್ಲಿದ್ದ ಮೀನುಗಾರರನ್ನು ಸಮೀಪದಲ್ಲಿದ್ದ ಮತ್ತೊಂದು ಮೀನುಗಾರಿಕಾ ದೋಣಿ ವಜ್ರಕ್ಕೆ ಸ್ಥಳೀಯ ಮೀನುಗಾರರು ರಕ್ಷಿಸಿ ರವಾನಿಸಿದರು. ಬಳಿಕ ಬೆಂಕಿಯನ್ನು ನಂದಿಸಲಾಯಿತು. ರಕ್ಷಿಸಲಾದ ಎಲ್ಲ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಹಳೇ ವೈಷಮ್ಯಕ್ಕೆ ಗ್ರಾ.ಪಂ ಉಪಾಧ್ಯಕ್ಷನ ಕೊಲೆ
Advertisement
ಬೆಂಕಿ ಹೊತ್ತಿಕೊಂಡ ದೋಣಿಯನ್ನು ಕಾರವಾರದ ಬೈತಖೋಲ್ ಮೀನುಗಾರಿಕಾ ಬಂದರಿಗೆ ಎಳೆದು ತರಲಾಗಿದೆ. ಕರಾವಳಿ ಭದ್ರತಾ ಪಡೆಯ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.