ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಬೋಟ್ ಸಮುದ್ರ ಮಧ್ಯೆ ಸುಟ್ಟು ಬೂದಿಯಾದ ಘಟನೆ ಮಂಗಳೂರು ಬಳಿಯ ಅರಬ್ಬಿ ಸಮುದ್ರದಲ್ಲಿ ನಡೆದಿದೆ.
Advertisement
ಮಂಗಳೂರಿನ ಮೀನುಗಾರಿಕಾ ಧಕ್ಕೆಯಿಂದ ಐದು ಕಿಮೀ ದೂರದಲ್ಲಿ ಈ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ನಡೆದಿದ್ದು ಬೋಟಿನಲ್ಲಿದ್ದ ಸಿಬ್ಬಂದಿಯನ್ನು ಬೇರೆ ಬೋಟ್ ಮೂಲಕ ರಕ್ಷಣೆ ಮಾಡಲಾಗಿದೆ. ಬಳಿಕ ಸುಟ್ಟು ಹೋದ ಬೋಟನ್ನು ಧಕ್ಕೆಗೆ ಎಳೆದು ತರಲಾಗಿದೆ.
Advertisement
Advertisement
ಬೋಟ್‍ಗೆ ಬೆಂಕಿ ಹೊತ್ತಿಕೊಂಡು ಉರಿಯುತ್ತಿರುವ ದೃಶ್ಯ ಮೊಬೈಲಿನಲ್ಲಿ ಸೆರೆಯಾಗಿದೆ. ಘಟನೆಯಿಂದಾಗಿ ಸುಮಾರು 50 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.