ಮಂಡ್ಯ: ಕೆಆರ್‌ಎಸ್ ಅಣೆಕಟ್ಟೆಯಿಂದ ಹೊರ ಹರಿವು 26 ಸಾವಿರ ಕ್ಯೂಸೆಕ್‍ಗೆ ಏರಿಕೆಯಾದ ಹಿನ್ನೆಲೆಯಲ್ಲಿ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ.
ಕಳೆದ ಹಲವು ದಿನಗಳ ಹಿಂದೆ ಕಾವೇರಿ ನದಿಯಲ್ಲಿ ಪ್ರವಾಹದ ಭೀತಿ ಉಂಟಾಗಿದ್ದರಿಂದ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿ, ಬೋಟಿಂಗ್ ಸ್ಥಗಿತಗೊಳಿಸಲಾಗಿತ್ತು. ಆದರೆ ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದರಿಂದ ಎರಡು ದಿನಗಳ ಹಿಂದಷ್ಟೆ ಬೋಟಿಂಗ್ ಪುನರಾರಂಭ ಮಾಡಲಾಗಿತ್ತು.
ಇದೀಗ ಕಾವೇರಿ ನದಿಯಲ್ಲಿ ಮತ್ತೆ ಹೊರಹರಿವು 26 ಸಾವಿರ ಕ್ಯೂಸೆಕ್‍ಗೆ ಹೆಚ್ಚಳವಾಗಿರುವುದರಿಂದ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್‍ಗೆ ಮಾತ್ರ ನಿಷೇಧ ಹೇರಲಾಗಿದೆ. ಹೀಗಾಗಿ ಮುಂಜಾಗ್ರತವಾಗಿ ಈ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಆದರೆ ಎಂದಿನಂತೆ ಪಕ್ಷಿಧಾಮ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv