ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ ಕೆಆರ್‌ಎಸ್ ಡ್ಯಾಂಗೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಡ್ಯಾಂನಿಂದ 11,633 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದ್ದು, ಇದರಿಂದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದ ನಡುಗಡ್ಡೆಗಳು ಮುಳುಗಡೆಯ ಅಂಚಿಗೆ ಬಂದಿವೆ.
Advertisement
ನಡುಗಡ್ಡೆಗಳು ಮುಳುಗಡೆಯ ಅಂಚಿಗೆ ಬಂದಿರುವ ಕಾರಣ ರಂಗನತಿಟ್ಟು ಪಕ್ಷಿಧಾಮದಲ್ಲಿ ಭಾನುವಾರದಿಂದ ಪ್ರವಾಸಿಗರಿಗೆ ಬೋಟಿಂಗ್ ಅನ್ನು ರದ್ದು ಮಾಡಲಾಗಿದೆ. ಇದೇ ರೀತಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಮುಂದುವರಿದ ಸಂದರ್ಭದಲ್ಲಿ ಕೆಆರ್‌ಎಸ್ ಡ್ಯಾಂನಿಂದ ಮತ್ತಷ್ಟು ನೀರನ್ನು ನದಿಗೆ ಬಿಡಲಾಗುತ್ತದೆ. ಇದರಿಂದ ರಂಗನತಿಟ್ಟು ಪಕ್ಷಿಧಾಮ ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಹಾವೇರಿಯಲ್ಲಿ ಚೆಂಡು ಹೂ, ಕಬ್ಬು, ತೊಗರಿ ನೀರುಪಾಲು- ಕಳಸದಲ್ಲಿ ಕೊಚ್ಚಿ ಹೋದ ತಡೆಗೋಡೆ
Advertisement
Advertisement
ಕಳೆದ 2 ವರ್ಷಗಳ ಹಿಂದೆ ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರನ್ನು ಹರಿಬಿಟ್ಟಿದ್ದ ಪರಿಣಾಮ ರಂಗನತಿಟ್ಟು ಪಕ್ಷಿಧಾಮದ ಬಹುತೇಕ ನಡುಗಡ್ಡೆಗಳು ನಾಶವಾಗಿದ್ದವು. ಇದರಿಂದ ಅಲ್ಲಿದ್ದ ಪಕ್ಷಿ ಸಂಕುಲ ಸಾಕಷ್ಟು ಸಮಸ್ಯೆಗಳನ್ನು ಎದುರಿಸಿದ್ದವು. ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದರೆ, ಕೆಆರ್‌ಎಸ್ ಡ್ಯಾಂನಿಂದ ಅಪಾರ ಪ್ರಮಾಣದಲ್ಲಿ ನದಿಗೆ ನೀರು ಬಿಡುಗಡೆ ಮಾಡಲಾಗುತ್ತದೆ. ಇದರಿಂದ ರಂಗನತಿಟ್ಟು ಮುಳುಗಡೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: 2 ವಾರಗಳ ಮಳೆಗೆ ದಕ್ಷಿಣ ಕನ್ನಡ ತತ್ತರ – ಫಲ್ಗುಣಿ ಅಬ್ಬರಕ್ಕೆ ಇಡೀ ಗ್ರಾಮವೇ ಆಪೋಷನ