ಬೆಂಗಳೂರು: ಸಿಲಿಕಾನ್ ಸಿಟಿಗೆ ಶನಿವಾರ ರಾತ್ರಿ ಬಾಂಬ್ ಬೆದರಿಕೆ ಕರೆ ಬಂದಿದೆ. ಈ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
- Advertisement -
ಕರೆ ಮಾಡಿದ ವ್ಯಕ್ತಿ `ಬೆಂಗಳೂರು ಮೆಟ್ರೋ ಬಾಂಬ್’ ಎಂದು ಅರೆಬಿಕ್ ಭಾಷೆಯಲ್ಲಿ ಹೇಳಿದ್ದು, ಈ ಬಗ್ಗೆ ರಾಷ್ಟ್ರೀಯ ತನಿಖಾ ದಳದವರು ಬೆಂಗಳೂರು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ.
- Advertisement -
- Advertisement -
ಕರೆ ಬಂದಿರುವ ಹಿನ್ನೆಲೆಯಲ್ಲಿ ಶನಿವಾರ ಇಡೀ ದಿನ ಮೆಟ್ರೋ ಸ್ಟೇಷನ್‍ನಲ್ಲಿ ತಪಾಸಣೆ ನಡೆಸಲಾಗಿತ್ತು. ಮಾತ್ರವಲ್ಲದೇ ಇಂದು ಕೂಡ ಬೆಂಗಳೂರು ಪೊಲೀಸರು ತಪಾಸಣೆ ಮುಂದುವರೆಸಿದ್ದಾರೆ.
- Advertisement -
ಮೆಟ್ರೋ ಸ್ಟೇಷನ್ ಹಾಗೂ ಅನುಮಾನಾಸ್ಪದ ವ್ಯಕ್ತಿಗಳನ್ನು ಪೊಲೀಸರು ತಪಾಸಣೆ ಮಾಡುತ್ತಿದ್ದಾರೆ. ಕಬ್ಬನ್ ಪಾರ್ಕ್, ಎಂಜಿ ರಸ್ತೆ ಸೇರಿದಂತೆ ಪ್ರಮುಖ ಮೆಟ್ರೋ ಸ್ಟೇಷನ್‍ಗಳಲ್ಲಿ ಬಿಗಿಭದ್ರತೆ ಏರ್ಪಡಿಸಲಾಗಿದೆ.