– ಉಗ್ರರ ಶವಗಳಿಗೆ ಪಾಕ್ ಧ್ವಜ ಹೊದಿಸಿ ಗೌರವ
ಇಸ್ಲಮಾಬಾದ್: ಭಾರತ (India) ಸೇನೆಯ ಆಪರೇಷನ್ ಸಿಂಧೂರಕ್ಕೆ (Operation Sindoor) ತತ್ತರಿಸಿರುವ (Pakistan) ಪಾಕ್, ಉಗ್ರರ ಶವಗಳಿಗೆ ಧ್ವಜ ಹೊದಿಸಿ ಟ್ರ್ಯಾಕ್ಟರ್‌ನಲ್ಲಿ (Tractors) ಸಾಗಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವೀಡಿಯೋ ಕ್ಲಿಪ್‌ನಲ್ಲಿ, ಭಯೋತ್ಪಾದಕರ ಶವಗಳಿಗೆ ಪಾಕ್ ಧ್ವಜ ಹೊದಿಸಿ ಗೌರವ ಸೂಚಿಸಲಾಗಿದೆ. ಈ ಶವಗಳನ್ನು ಬಹಾವಲ್ಪುರದ ಅಂತ್ಯಕ್ರಿಯೆಗೆ ಕೊಂಡೊಯ್ಯಲಾಗುತ್ತಿತ್ತು. ಉಗ್ರರ ಶವಗಳ ಅಂತ್ಯಕ್ರಿಯೆಯಲ್ಲಿ ಪಾಕ್ ಸೇನೆಯ ಅಧಿಕಾರಿಗಳು ಭಾಗವಹಿಸಿ ಅಂತಿಮ ನಮನ ಸಲ್ಲಿಸಿದ್ದಾರೆ. ಇದನ್ನೂ ಓದಿ: ಏರ್‌ಸ್ಟ್ರೈಕ್‌ಗೆ ಪಾಕ್ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ – ವ್ಯವಹಾರವೇ ಸ್ಥಗಿತ
ಭಾರತೀಯ ಸೇನೆ ರಾತ್ರೋ ರಾತ್ರಿ ಪಾಕಿಸ್ತಾನ ಮತ್ತು ಪಾಕ್ ಅಕ್ರಮಿತ ಕಾಶ್ಮೀರದಲ್ಲಿರುವ 9 ಅಡಗುತಾಣಗಳ ಮೇಲೆ ದಾಳಿ ನಡೆಸಿತ್ತು. ಈ ಪ್ರತೀಕಾರದ ದಾಳಿಯಲ್ಲಿ (Pahalgam Terrorist Attack) ನಿಷೇಧಿತ ಮೂರು ಉಗ್ರ ಸಂಘಟನೆಗಳಾದ ಜೈಶ್ ಎ ಮೊಹಮ್ಮದ್, ಲಷ್ಕರ್ ಎ ತೈಬಾ (LET) ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರ ಪ್ರಧಾನ ಕಚೇರಿಗಳು ಧ್ವಂಸವಾಗಿವೆ.
ಕಾರ್ಯಾಚರಣೆಯಲ್ಲಿ ನಿಷೇಧಿತ ಜೈಶ್ -ಎ-ಮೊಹಮ್ಮದ್ ಭಯೋತ್ಪಾದಕ ಗುಂಪುಗಳ ನೆಲೆಯಿರುವ ಬಹವಾಲ್‍ಪುರದಲ್ಲಿ ಮರ್ಕಜ್ ಸುಭಾನ್ ಅಲ್ಲಾ ಮಸೀದಿ, ತೆಹ್ರಾ ಕಲಾನ್‍ನಲ್ಲಿನ ಸರ್ಜಾಲ್, ಕೋಟಿಯ ಮರ್ಕಜ್ ಅಬ್ಬಾಸ್ ಮತ್ತು ಮುಜಫರಾಬಾದ್‍ನ ಸೈಯನ್ನಾ ಬಿಲಾಲ್ ಕ್ಯಾಂಪ್‍ಗಳ ಮೇಲೆ ಭಾರತ ದಾಳಿ ನಡೆಸಿದೆ. ಲಷ್ಕರ್ ಎ ತೈಬಾ ಉಗ್ರ ಸಂಘಟನೆಯ ಶಿಬಿರಗಳಿರುವ ಮುರ್ಡಿಕೆಯ ಮರ್ಕಝ್ ತೈಬಾ, ಬರ್ನಾಲಾದಲ್ಲಿ ಮರ್ಕಝ್ ಅತ್ತೆ ಹದಿತ್ ಮತ್ತು ಮುಜಫರಾಬಾದ್‍ನ ಶ್ವವಾಯಿ ನಲ್ಲಾ ಮೇಲೆ ದಾಳಿ ನಡೆದಿದೆ.
ಮಕಾಜ್ ರಹೀಲ್ ಶಾಹಿದ್ ಮತ್ತು ಸಿಯಾಲ್‍ಕೋಟ್‍ನ ಮೆಹಮೂನಾ ಜೋಯಾ ಪ್ರದೇಶಗಳಲ್ಲಿ ನಿಷೇಧಿತ ಹಿಜ್ಜುಲ್ ಮುಜಾಹಿದ್ದೀನ್‍ನ ಶಿಬಿರಗಳು ಮತ್ತು ತರಬೇತಿ ಕೇಂದ್ರಗಳಿದ್ದು, ಅವುಗಳನ್ನು ಧ್ವಂಸಗೊಳಿಸಲಾಗಿದೆ. ದಾಳಿಯಲ್ಲಿ ನೂರಕ್ಕೂ ಹೆಚ್ಚು ಉಗ್ರರು ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಆಪರೇಷನ್ ಸಿಂಧೂರ | ಇದು ಭಾರತೀಯ ಸೇನೆಯ ನಿಜವಾದ ಮುಖ: ಶಿವಕಾರ್ತಿಕೇಯನ್