ಆನೇಕಲ್: ಅರೆಬೆಂದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಯುವಕನ ಶವ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಪೊಲೀಸ್ ಠಾಣೆ(Bannerghatta Police Station) ವ್ಯಾಪ್ತಿಯ ಶಿಲೀಂದ್ರ ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಮೃತ ಯುವಕ ಬೆಂಗಳೂರಿನ ಜೆಪಿ ನಗರ(JP Nagara) ನಿವಾಸಿ ಮಧುಸೂದನ್(28) ಎಂದು ತಿಳಿದುಬಂದಿದೆ. ಇದನ್ನೂ ಓದಿ: ಫ್ಯಾನ್ಸ್‌ಗೆ ಗುಡ್ ನ್ಯೂಸ್- ಬರಲಿದೆ ವಿಜಯ್ ಸೇತುಪತಿ ನಟನೆಯ ‘ಮಹಾರಾಜ’ ಸೀಕ್ವೆಲ್
ಮಧುಸೂದನ್ ಕ್ಯಾಬ್ ಡ್ರೈವರ್ ಆಗಿ ಕೆಲಸವನ್ನು ಮಾಡುತ್ತಿದ್ದರು. ಬುಧವಾರ ರಾತ್ರಿ ಸುಮಾರು 9 ಗಂಟೆಗೆ ಬೈಕ್‌ನಲ್ಲಿ ಮನೆಯಿಂದ ಹೊರಗೆ ಹೋಗಿದ್ದ ಮಧುಸೂದನ್ ವಾಪಾಸ್ ಮನೆಗೆ ಬಂದಿರಲಿಲ್ಲ. ಇಡೀ ರಾತ್ರಿ ಮನೆಯವರು ಮಧುಸೂದನ್‌ಗಾಗಿ ಹುಡುಕಾಟ ನಡೆಸಿದ್ದರು. ಇದನ್ನೂ ಓದಿ: ಪಾಕ್ ಮಿಸೈಲ್‌ಗಳಿಂದ ಭಾರತ ರಕ್ಷಿಸಿದ S-400 ‘ಸುದರ್ಶನ ಚಕ್ರ’- ಏನಿದರ ವಿಶೇಷತೆ?
ಆದರೆ ಗುರುವಾರ ಬೆಳಗ್ಗೆ ಬನ್ನೇರುಘಟ್ಟ ಅರಣ್ಯ ವ್ಯಾಪ್ತಿಯ ಶಿಲೀಂದ್ರ ದೊಡ್ಡಿ ಸಮೀಪದ ನಿರ್ಜನ ಪ್ರದೇಶದಲ್ಲಿ ಮಧುಸೂದನ್ ಅವರ ಮೃತದೇಹವು ಅರೆಬರೆಯಾಗಿ ಸುಟ್ಟ ರೀತಿಯಲ್ಲಿ ಪತ್ತೆಯಾಗಿದೆ. ಇನ್ನು ಘಟನಾ ಸ್ಥಳದಲ್ಲಿ ಬೈಕ್ ಪತ್ತೆಯಾಗಿದ್ದು, ಬೈಕ್‌ನ ನಂಬರ್ ಆಧಾರದ ಮೇಲೆ ಮಧುಸೂದನ್ ಅವರ ಗುರುತು ಪತ್ತೆಯಾಗಿದೆ. ಇದನ್ನೂ ಓದಿ: ಆಪರೇಷನ್ ಸಿಂಧೂರ ಇಡೀ ದೇಶವೇ ಮೆಚ್ಚುವ ಕೆಲಸ: ನಿಖಿಲ್ ಕುಮಾರಸ್ವಾಮಿ
ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದು, ಇದು ಕೊಲೆ ಅಥವಾ ಆತ್ಮಹತ್ಯೆಯೋ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.