ಉಡುಪಿಗೆ ಆಗಮಿಸಿದ ಯೋಧ ಅನೂಪ್ ಪಾರ್ಥಿವ ಶರೀರ – ಅಂತಿಮ ನಮನ ಸಲ್ಲಿಸಿದ ಚೌಟ, ಕೋಟ

Public TV
2 Min Read
Hawaldar Anoop Poojari Udupi Brijesh Chowta Srinivas Poojari 2

ಉಡುಪಿ: ಜಮ್ಮು ಕಾಶ್ಮೀರದ (Jammu Kashmir) ಪೂಂಚ್‌ನಲ್ಲಿ (Poonch) ನಡೆದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಐವರ ಪೈಕಿ ಕರ್ನಾಟಕದ ಕುಂದಾಪುರ (Kundapura) ತಾಲೂಕಿನ ಬೀಜಾಡಿಯವರಾದ ಯೋಧ ಅನೂಪ್ (Hawaldar Anoop Poojari) ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ.

Hawaldar Anoop Poojari Kundapura Jammu Kashmir Poonch

ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ (Captain Brijesh Chowta) ಹಾಗೂ ಉಡುಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ (Kota Srinivas Poojari) ಸೇನಾಧಿಕಾರಿಗಳಿಂದ ಅನೂಪ್ ಪಾರ್ಥಿವ ಶರೀರ ಪಡೆದು ಅಂತಿಮ ನಮನ ಸಲ್ಲಿಸಿದರು. ಕೆಲವೇ ಕ್ಷಣಗಳಲ್ಲಿ ಉಡುಪಿ ನಗರದಿಂದ ಕುಂದಾಪುರಕ್ಕೆ ಮೃತದೇಹ ರವಾನೆಯಾಗಲಿದೆ. ಬೀಜಾಡಿ ಪಡು ಸರ್ಕಾರಿ ಶಾಲಾ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಸಿದ್ಧತೆ ನಡೆದಿದೆ. ಬೀಜಾಡಿ ಕಡಲ ಕಿನಾರೆಯಲ್ಲಿ ಇಂದು ಸಂಜೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದ್ದು, ಸಕಲ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಬೆಂಗಳೂರು| ರೈಲಿಗೆ ಸಿಲುಕಿ ಇಬ್ಬರು ಯುವಕರು ದಾರುಣ ಸಾವು

Hawaldar Anoop Poojari Udupi Brijesh Chowta Srinivas Poojari 1

ಕಳೆದ 13 ವರ್ಷಗಳಿಂದ ಸೈನ್ಯದಲ್ಲಿರುವ ಅನೂಪ್ 33ನೇ ವಯಸ್ಸಿಗೆ ಹವಾಲ್ದಾರ್ ಆಗಿ ಭಡ್ತಿ ಹೊಂದಿದ ವೀರ ಯೋಧ. ಅನೂಪ್ ಸಾವಿನಿಂದ ಇಡೀ ಕುಟುಂಬ ದಿಗ್ಬ್ರಾಂತಗೊಂಡಿದೆ. ಬಡತನದ ನಡುವೆ ಭಾರತಾಂಬೆಯ ಸೇವೆ ಮಾಡಬೇಕೆಂದು ಹಠದಿಂದ ಸೈನ್ಯ ಸೇರಿದ್ದ ಅನೂಪ್ 14 ವರ್ಷ ಸೇವೆ ಸಲ್ಲಿಸಿದ್ದಾರೆ. 2022ರಲ್ಲಿ ಅನೂಪ್‌ಗೆ ವಿವಾಹವಾಗಿತ್ತು. ಎರಡು ವರ್ಷದ ಪುಟ್ಟ ಮಗುವಿದ್ದು, ಇಬ್ಬರು ಸಹೋದರಿಯರು, ಅಪಾರ ಬಂಧು ಮಿತ್ರರು, ಗ್ರಾಮಸ್ಥರು, ಗೆಳೆಯರನ್ನು ಬಿಟ್ಟು ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಮೂರು ವರ್ಷ ಮತ್ತೆ ಸೇನೆಯಲ್ಲಿ ಕೆಲಸ ಮಾಡಿ ನಿವೃತ್ತಿಯಾಗುವ ಆಲೋಚನೆಯನ್ನು ಅನೂಪ್ ಹೊಂದಿದ್ದರು. ಈ ನಡುವೆ ಕಾಶ್ಮೀರದ ಪೂಂಚ್‌ನಲ್ಲಿ ದುರ್ಘಟನೆಯಾಗಿದೆ. 20 ದಿನದ ರಜೆಗೆ ಬಂದಿದ್ದ ಅನೂಪ್, ಶನಿವಾರವಷ್ಟೇ ಕಾಶ್ಮೀರಕ್ಕೆ ವಾಪಸ್ ಆಗಿದ್ದರು. ಘಟನೆಯಿಂದ ಕುಟುಂಬ ಕಣ್ಣೀರಾಗಿದೆ. ಮಗನನ್ನು ಕಳೆದುಕೊಂಡ ತಾಯಿ, ಸೋದರಿಯ ನೋವಿಗೆ ಕಣ್ಣೀರ ಮಾತೇ ಸಾಕ್ಷಿಯಾಗಿದೆ. ಇದನ್ನೂ ಓದಿ: ಕಾರವಾರ| 10 ಸಾವಿರ ಪಿಗ್ಮಿ ಹಣಕ್ಕಾಗಿ ವೃದ್ದೆ ಕತ್ತು ಹಿಸುಕಿ ಹತ್ಯೆ

Hawaldar Anoop Poojari Udupi Brijesh Chowta Srinivas Poojari

ಯೋಧ ಅನೂಪ್ ಪಾರ್ಥಿವ ಶರೀರ ಸ್ವಗ್ರಾಮ ತಲುಪಲಿದ್ದು, ಕುಂದಾಪುರದ ಬೀಜಾಡಿವರೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅನೂಪ್ ಅಂತಿಮ ಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ. 5,000ಕ್ಕೂ ಹೆಚ್ಚು ಮಂದಿ ಭಾಗಿ ಆಗುವ ನಿರೀಕ್ಷೆ ಇದ್ದು, ಅಂತಿಮ ಯಾತ್ರೆ ಬಳಿಕ ಪಾರ್ಥಿವ ಶರೀರವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗುತ್ತದೆ. ಇದನ್ನೂ ಓದಿ: ನನಗೇನಾದ್ರೂ ಆದ್ರೆ ಸಿಎಂ ಹೊಣೆ: ಸ್ನೇಹಮಯಿ ಕೃಷ್ಣ

ಸ್ವಗ್ರಾಮದ ಬೀಜಾಡಿ ಪಡು ಸರಕಾರಿ ಶಾಲೆಯಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು.. ಸಕಲ ಸೇನೆ ಮತ್ತು ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ. ಇದನ್ನೂ ಓದಿ: ನಾನು ಧರ್ಮಸ್ಥಳಕ್ಕೂ ಹೋಗ್ತೀನಿ, ಸವದತ್ತಿ ಯಲ್ಲಮ್ಮನ ಬಳಿಯೂ ಹೋಗ್ತೀನಿ: ಸಿ.ಟಿ ರವಿ

Share This Article