– ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ
ಬಾಗಲಕೋಟೆ: ಮಾಜಿ ಸಚಿವ ಮುರುಗೇಶ್ ನಿರಾಣಿ ಅವರ ಮಾಲೀಕತ್ವದ ಸಕ್ಕರೆ ಕಾರ್ಖಾನೆಯ ಡಿಸ್ಟಿಲರಿ ಸಂಸ್ಕರಣ ಘಟಕದಲ್ಲಿ ಸ್ಫೋಟ ಸಂಭವಿಸಿ 4 ಮಂದಿ ಕಾರ್ಮಿಕರು ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದ ಕಾರ್ಖಾನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ಕಾರ್ಖಾನೆಯ ಬಾಯ್ಲರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಕಟ್ಟಡವೇ ಕುಸಿದಿದೆ. ಈ ವೇಳೆ ಎಷ್ಟು ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು ಎಂಬ ಬಗ್ಗೆ ಖಚಿತ ಮಾಹಿತಿ ಇಲ್ಲ.
Advertisement
Advertisement
ಕಾರ್ಖಾನೆಯು ಮೂರು ಅಂತಸ್ತಿನ ಕಟ್ಟಡವಾಗಿದ್ದು, ಸ್ಥಳಕ್ಕೆ ಆಗ್ನಿಶಾಮಕ ಸಿಬ್ಬಂದಿ, ಪೊಲೀಸರು ಆಗಮಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಈ ವೇಳೆ ಗಾಯಗೊಂಡ ಐವರು ಕಾರ್ಮಿಕರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
Advertisement
ಘಟನೆಯಲ್ಲಿ ಮೃತಪಟ್ಟವರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಮುಧೋಳ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಕಾರ್ಖಾನೆಯು ನಗರದ ಹೊರಭಾಗದಲ್ಲಿ ಇದ್ದ ಕಾರಣ ಹೆಚ್ಚಿನ ಹಾನಿ ತಪ್ಪಿದೆ. ಆದರೆ ಕಾರ್ಖಾನೆಯಲ್ಲಿ ಎಷ್ಟು ಜನ ಇದ್ದರು ಎಂಬ ಬಗ್ಗೆ ಇದುವರೆಗೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಸ್ಥಳೀಯರು ಕೂಡ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv