ಬೆಳಗಾವಿ: ಸಕ್ಕರೆ ಕಾರ್ಖಾನೆಯಲ್ಲಿ (Sugar Factory) ಬಾಯ್ಲರ್ ಸ್ಫೋಟಗೊಂಡ (Boiler Blast) ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 6 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿ ನಡೆದಿದೆ.
ಗ್ರಾಮದ ಹೊರವಲಯದಲ್ಲಿರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದೆ. ಗಂಭೀರ ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಘಟನೆಯಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿರುವ ಆರು ಜನರನ್ನು ಝೀರೋ ಟ್ರಾಫಿಕ್‌ನಲ್ಲಿಯೇ ಬೈಲಹೊಂಗಲದಿಂದ ಬೆಳಗಾವಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವಿಕ್ರಮ ಇನಾಮದಾರ್‌ಗೆ ಸೇರಿದ ಸಕ್ಕರೆ ಕಾರ್ಖಾನೆಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ರೆಕಾರ್ಡ್ ಮಾಡಿ ಸಿದ್ದರಾಮಯ್ಯ ನಾಟೌಟ್ – ವಾಟ್ ನೆಕ್ಸ್ಟ್?
ಘಟನೆ ಸಂಬಂಧ ಬೆಳಗಾವಿಯಲ್ಲಿ ಎಸ್ಪಿ ಕೆ ರಾಮರಾಜನ್ ಪ್ರತಿಕ್ರಿಯಿಸಿದ್ದು, ಮಧ್ಯಾಹ್ನ 2 ಗಂಟೆಯ ಸಮಯದಲ್ಲಿ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಘಟನೆ ಸಂಭವಿಸಿದೆ. 8 ಜನರಿಗೆ ಬಿಸಿ ಪದಾರ್ಥ (ಮಳ್ಳಿ) ಮೈ ಮೇಲೆ ಬಿದ್ದು ಗಾಯವಾಗಿದೆ. ಒಬ್ಬರನ್ನು ಬೈಲಹೊಂಗಲ ಆಸ್ಪತ್ರೆಗೆ ರವಾನಿಸಿದ್ದು, ಇನ್ನುಳಿದವರನ್ನು ಬೆಳಗಾವಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಝೀರೋ ಟ್ರಾಫಿಕ್‌ನಲ್ಲಿ ಗಾಯಾಳುಗಳನ್ನು ಶಿಫ್ಟ್ ಮಾಡಲಾಗಿದೆ. ದೂರು ಆಧರಿಸಿ ತನಿಖೆ ಮಾಡುತ್ತೇವೆ ಎಂದರು. ಇದನ್ನೂ ಓದಿ: ಮಹಿಳೆಯನ್ನು ಅರೆಸ್ಟ್ ಮಾಡಿದ ಮೇಲೆ ಆಕೆಯೇ ಬಟ್ಟೆ ಬಿಚ್ಚಿಕೊಂಡಿದ್ದಾಳೆ: ನಾಗಲಕ್ಷ್ಮಿ ಚೌಧರಿ

