ಹಾವೇರಿ: ಬೈಕಿಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕಿನಲ್ಲಿದ್ದ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ತಾಲೂಕಿನಲ್ಲಿ ನಡೆದಿದೆ.
ದರ್ಶನ(19) ಮೃತ ವಿದ್ಯಾರ್ಥಿ. ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹಾವೇರಿ ನಗರದ ಖಾಸಗಿ ಕಾಲೇಜಿನಲ್ಲಿ ಐಟಿಐ ಓದುತ್ತಿದ್ದ ವಿದ್ಯಾರ್ಥಿ. ಕಾಲೇಜಿನಿಂದ ಊರಿಗೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: ವಿಧಾನಸಭೆ ಕಲಾಪ – ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸಲು ‘ಕೈ’ ಪ್ಲಾನ್
ಅಪಘಾತದ ನಂತರ ಬೊಲೆರೋ ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಸುವರ್ಣಸೌಧಕ್ಕೆ ಮಾಧ್ಯಮಗಳ ನಿರ್ಬಂಧ ಸಂವಿಧಾನದ ಒಂದು ಕಾಲು ಮುರಿಯುವ ಪ್ರಯತ್ನದಂತೆ: ಎಚ್‍ಡಿಕೆ


