ಮುಂಬೈ: ಸುಕೇಶ್ ಚಂದ್ರಶೇಖರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಂದು ಜಾರಿ ನಿರ್ದೇಶನಾಲಾಯದ ಮುಂದೆ ವಿಚಾರಣೆಗೆ ಹಾಜರಾಗಿದ್ದರು.
Advertisement
200 ಕೋಟಿ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜಾಕ್ವೆಲಿನ್ ವಿರುದ್ಧ ಇಡಿ ಸಮನ್ಸ್ ನೀಡಿತ್ತು. ಹೀಗಾಗಿ ಜಾಕ್ವೆಲಿನ್ ಬುಧವಾರ ತನಿಖಾ ಸಂಸ್ಥೆಯ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಇದನ್ನೂ ಓದಿ: 200 ಕೋಟಿ ರೂ. ವಂಚನೆ ಪ್ರಕರಣ – ದೇಶ ತೊರೆಯದಂತೆ ಜಾಕ್ವೆಲಿನ್ ಗೆ ತಡೆ
Advertisement
Advertisement
ಸುಕೇಶ್ ಚಂದ್ರಶೇಖರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಾಯದಿಂದ ಸಮನ್ಸ್ ಪಡೆದಿದ್ದ ಜಾಕ್ವೆಲಿನ್ ಫನಾರ್ಂಡಿಸ್ ಕಾರ್ಯಕ್ರಮವೊಂದಕ್ಕೆ ದುಬೈಗೆ ತೆರಳುತ್ತಿದ್ದ ವೇಳೆ ಅವರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ತಡೆದು ಅಧಿಕಾರಿಗಳು ಬಂಧಿಸಿ, ಸಂಪೂರ್ಣ ವಿಚಾರಣೆ ನಡೆಸಿ ಬಳಿಕ ಬಿಟ್ಟಿದ್ದರು. ಅಲ್ಲದೇ ಮತ್ತೆ ಕರೆದಾಗ ವಿಚಾರಣೆಗೆ ಹಾಜರಾಗುವಂತೆ ದೆಹಲಿ ತನಿಖಾ ಸಂಸ್ಥೆ ತಿಳಿಸಿತ್ತು.
Advertisement
ಸುಕೇಶ್ ಚಂದ್ರಶೇಖರ್, ಉದ್ಯಮಿಗಳು, ರಾಜಕಾರಣಿಗಳು ಮತ್ತು ಸೆಲೆಬ್ರಿಟಿಗಳಿಗೆ ಬೆದರಿಕೆ ಹಾಕಿ ನೂರಾರು ಕೋಟಿ ಹಣ ಸುಲಿಗೆ ಮಾಡುತ್ತಿದ್ದ. ಅಲ್ಲದೇ ತಿಹಾರ್ ಜೈಲಿನಲ್ಲಿಯೇ ಇದ್ದುಕೊಂಡು ಉದ್ಯಮಿಯೊಬ್ಬರ ಪತ್ನಿಯಿಂದ 200 ಕೋಟಿ ಸುಲಿಗೆ ಹಣ ಸುಲಿಗೆ ಮಾಡಿರುವ ಆರೋಪ ಕೂಡ ಈತನ ಮೇಲಿದೆ. ಇನ್ನೂ ಸುಕೇಶ್ ಚಂದ್ರಶೇಖರ್ ಜೊತೆ ಜಾಕ್ವೆಲಿನ್ ಫನಾರ್ಂಡಿಸ್ ಹಣಕಾಸಿನ ವಹಿವಾಟುಗಳನ್ನು ನಡೆಸಿರುವ ಪುರಾವೆಗಳನ್ನು ತನಿಖಾ ಸಂಸ್ಥೆ ಬಹಿರಂಗಪಡಿಸಿತ್ತು. ಇದನ್ನೂ ಓದಿ: ಜಾಕ್ವೆಲಿನ್‌ಗೆ ಕಿಸ್ ಮಾಡುತ್ತಿರುವ ಸುಕೇಶ್ ಚಂದ್ರಶೇಖರ್ – ರೋಮ್ಯಾಂಟಿಕ್ ಫೋಟೋ ವೈರಲ್
ಸುಕೇಶ್ ಜೈಲಿನಿಂದಲೇ ಜಾಕ್ವೆಲಿನ್‍ಗೆ 10 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಉಡುಗೊರೆಗಳನ್ನು ಕಳುಹಿಸಿದ್ದ ಎನ್ನಲಾಗುತ್ತದೆ. 200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಆರೋಪಿ ಸುಕೇಶ್ ಚಂದ್ರಶೇಖರ್ ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯಕ್ಕೆ ತನಿಖಾ ಸಂಸ್ಥೆ ಚಾರ್ಜ್ ಶೀಟ್ ಸಲ್ಲಿಸಿದೆ.