ಬಾಲಿವುಡ್ ನಟ ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಅನೇಕ ಅಚ್ಚರಿ ಸಂಗತಿಗಳೊಂದಿಗೆ ಈ ಟ್ರೈಲರ್ ಗಮನ ಸೆಳೆಯುತ್ತಿದೆ. ಅಲ್ಲದೇ, ಕೆಲವು ಪಾತ್ರಗಳ ಹಿನ್ನೆಲೆಯನ್ನೂ ಅದು ರಿವಿಲ್ ಮಾಡಿದೆ. ಈ ಸಿನಿಮಾದಲ್ಲಿ ಖ್ಯಾತ ಬಾಲಿವುಡ್ ನಟ ಜಾನ್ ಅಬ್ರಾಹಂ ಉಗ್ರ ಸಂಘಟನೆಯ ಮುಖ್ಯಸ್ಥನಾಗಿ ಕಾಣಸಿಕೊಂಡಿದ್ದರೆ, ಶಾರುಖ್ ರಾ ಏಜೆಂಟ್ ಪಾತ್ರವನ್ನು ಮಾಡಿದ್ದಾರೆ.
ಔಟ್ ಫುಟ್ ಎಕ್ಸ್ ಎನ್ನುವ ಉಗ್ರ ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವ ಜಾನ್ ಅಬ್ರಾಹಂ, ಈ ಸಂಘಟನೆಯ ಮೂಲಕ ಭಾರತದ ಮೇಲೆ ದಾಳಿ ಮಾಡಲು ಸಂಚು ರೂಪಿಸುತ್ತಾರೆ. ಈ ದಾಳಿಯನ್ನು ಭಾರತ ರಾ ಏಜೆಂಟ್ ಆಗಿರುವ ಶಾರುಖ್ ಖಾನ್ ಹೇಗೆ ತಡೆಯುತ್ತಾರೆ ಎನ್ನುವುದೇ ಪಠಾಣ್ ಸಿನಿಮಾದ ಕಥಾ ಹಂದರ. ಟ್ರೈಲರ್ ನಲ್ಲಿ ಶಾರುಖ್ ಸಖತ್ತಾಗಿ ಕಾಣಿಸಿಕೊಂಡಿದ್ದಾರೆ. ಅನೇಕ ಸಾಹಸಮಯ ದೃಶ್ಯಗಳಲ್ಲಿ ಅವರು ವಯಸ್ಸಿಗೂ ಮೀರಿದ ಆ್ಯಕ್ಷನ್ ಮಾಡಿದ್ದಾರೆ. ಇಡೀ ಟ್ರೈಲರ್ ಆ್ಯಕ್ಷನ್ ದೃಶ್ಯಗಳಿಂದಲೇ ತುಂಬಿದೆ. ಇದನ್ನೂ ಓದಿ:ಎಷ್ಟೇ ಕಷ್ಟ ಬಂದರೂ ಸಿನಿಮಾ ಮೇಲಿನ ಪ್ರೀತಿ ಕಳೆದುಕೊಂಡಿಲ್ಲ: ಗಳಗಳನೇ ಅತ್ತ ಸಮಂತಾ
ನಾನಾ ಕಾರಣಗಳಿಂದಾಗಿ ವಿವಾದಕ್ಕೆ ಕಾರಣವಾಗಿರುವ ಈ ಸಿನಿಮಾ, ದೇಶಪ್ರೇಮವನ್ನು ಸಾರಲಿದೆ ಎಂದು ಈ ಹಿಂದೆಯೇ ಶಾರುಖ್ ಹೇಳಿದ್ದರು. ಸಿನಿಮಾ ನೋಡಿದ ನಂತರ ಮಾತನಾಡಿ ಎಂದೂ ಅವರು ವಿರೋಧಿಗಳಿಗೆ ಪ್ರತಿಕ್ರಿಯಿಸಿದ್ದರು. ಕಥಾ ಹಂದರ ಮತ್ತು ಶಾರುಖ್ ಮಾಡಿರುವ ಪಾತ್ರವನ್ನು ಗಮನಿಸಿದರೆ, ಉಗ್ರರಿಂದ ಭಾರತವನ್ನು ತಪ್ಪಿಸುವಂತಹ ಕಥಾಹಂದರ ಇರು ಹೊಂದಿದೆ ಎಂದು ಮೇಲ್ನೋಟಕ್ಕೆ ತಿಳಿಯುತ್ತದೆ.
ಪಠಾಣ್ ಸಿನಿಮಾದ ಹಾಡಿನಲ್ಲಿ ಹಿಂದೂಗಳ ಭಾವನೆ ಧಕ್ಕೆ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಈ ಸಿನಿಮಾವನ್ನು ಬಾಯ್ಕಾಟ್ ಮಾಡಿ ಎನ್ನುವ ಅಭಿಯಾನ ಶುರುವಾಗಿದೆ. ಈಗಾಗಲೇ ಹಲವು ಕಡೆಗಳಲ್ಲಿ ಚಿತ್ರವನ್ನು ನಿಷೇಧಿಸಬೇಕು ಎಂದು ಹೋರಾಟಗಳು ನಡೆದಿವೆ. ಈ ಸಂದರ್ಭದಲ್ಲಿ ಟ್ರೈಲರ್ ಬಿಡುಗಡೆ ಆಗಿದ್ದು, ಅದ್ಭುತ ರೆಸ್ಪಾನ್ಸ್ ಸಿಗುತ್ತಿದೆ. ಸಿನಿಮಾದ ಕಥೆಯಿಂದಾಗಿ ಚಿತ್ರವನ್ನು ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರಾ ಕಾದು ನೋಡಬೇಕಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k