‘ಕೊರಗಜ್ಜ’ ಸಿನಿಮಾಗೆ ಬಾಲಿವುಡ್ ನಟ ಕಬೀರ್ ಬೇಡಿ ಕನ್ನಡದಲ್ಲಿ ಡಬ್ಬಿಂಗ್

Public TV
1 Min Read
kabir bedi

‘ಕಾಂತಾರ’ (Kantara) ಸಿನಿಮಾದ ಸಕ್ಸಸ್ ನಂತರ ಮತ್ತೆ ದೈವದ ಕಥೆಯೊಂದು ತೆರೆಗೆ ಬರಲು ಸಿದ್ಧವಾಗಿದೆ. ಕನ್ನಡದ ಸಿನಿಮಾಗಳು ವಿಶ್ವದೆಲ್ಲೆಡೆ ಸದ್ದು ಮಾಡ್ತಿರೋದನ್ನ ನೋಡಿ, ಪರಭಾಷಿಕರು ಕನ್ನಡದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಾಲಿವುಡ್ ನಟ ಕಬೀರ್ ಬೇಡಿ ಒಂದು ಹೆಜ್ಜೆ ಹೋಗಿ, ಕನ್ನಡದ ‘ಕೊರಗಜ್ಜ’ (Koragajja) ಚಿತ್ರದಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದಾರೆ.

kabir bedi 1

ಸುಧೀರ್ ಅತ್ತಾವರ್ (Sudhir Attavar) ನಿರ್ದೇಶನದ ‘ಕೊರಗಜ್ಜ’ ಸಿನಿಮಾದಲ್ಲಿ ಬರುವ ಉದ್ಯಾವರ ಅರಸರ ಪಾತ್ರವನ್ನು ಕಬೀರ್ ಬೇಡಿ (Kabir Bedi) ನಟಿಸಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಅವರು ಕನ್ನಡ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಿರ್ದೇಶಕರ ಕೆಲಸವನ್ನು ಅವರು ನಟ ಕಬೀರ್ ಮೆಚ್ಚಿಕೊಂಡಿದ್ದಾರೆ. ಅಲ್ಲದೇ ತಮ್ಮ ಪಾತ್ರಕ್ಕೆ ತಾವೇ ಧ್ವನಿ ನೀಡಿದ್ದಾರೆ. ಇದನ್ನೂ ಓದಿ:‘RRR’ ರೈಟರ್ ವಿಜೇಂದ್ರ ಪ್ರಸಾದ್‌ ಜೊತೆ ಕೇದರನಾಥ್‌ಗೆ ಕಂಗನಾ ಭೇಟಿ

kabir

ಕಬೀರ್ ಬೇಡಿ ಅವರು ತಮ್ಮ ಪಾತ್ರಕ್ಕೆ ತಾವೇ ಡಬ್ಬಿಂಗ್ ಮಾಡುತ್ತೇನೆ ಎಂದು ಶೂಟಿಂಗ್ ಸಂದರ್ಭದಲ್ಲಿ ನಿರ್ದೇಶಕರಿಗೆ ಹೇಳಿದ್ದರು. ಆದರೆ ಅವರ ಮಾತನ್ನು ಒಪ್ಪುವುದು ನಿರ್ದೇಶಕ ಸುಧೀರ್ ಅತ್ತಾವರ್ ಅವರಿಗೆ ಅಷ್ಟು ಸುಲಭದಲ್ಲಿ ಸಾಧ್ಯವಿರಲಿಲ್ಲ. ಯಾಕೆಂದರೆ, ಬಾಲಿವುಡ್, ಹಾಲಿವುಡ್, ಯುರೋಪಿಯನ್ ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದ ನಟ ಏಕಾಏಕಿ ದಕ್ಷಿಣ ಭಾರತದ ಅದರಲ್ಲೂ ಕನ್ನಡ, ತುಳು, ಸೊಗಡನ್ನು ಅರಿತು ಕೊರಗಜ್ಜ ಸಿನಿಮಾಗೆ ಡಬ್ಬಿಂಗ್ ಸಿನಿಮಾಗೆ ಸಾಥ್ ನೀಡಿದ್ದಾರೆ. ಮುಂಬೈ ಸ್ಟುಡಿಯೋದಲ್ಲಿ 2-3 ಬಾರಿ ಸಂಭಾಷನೆಯನ್ನು ಒಪ್ಪಿಸುತ್ತಾ ಡಬ್ಬಿಂಗ್ ನಡೆಸುತ್ತಿದ್ದಾರೆ.

ಸುಧೀರ್ ನಿರ್ದೇಶನದ ಸಿನಿಮಾ ನಟಿ ಭವ್ಯ ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಾಲ್ಕೈದು ಕ್ಯಾಮೆರಾಗಳನ್ನ ಇಟ್ಟುಕೊಂಡು ಸಿನಿಮಾವನ್ನು ಶೂಟ್ ಮಾಡಿದ್ದಾರೆ. ಭಿನ್ನ ಕಥೆಯನ್ನ ತೆರೆಗೆ ತರಲು ಚಿತ್ರತಂಡ ಸಜ್ಜಾಗಿದ್ದಾರೆ. ಸದ್ಯದಲ್ಲೇ ಈ ಕುರಿತ ಅಪ್‌ಡೇಟ್ ಸಿಗಲಿದೆ.

Share This Article