ಬಾಲಿವುಡ್ ನಟ ಮಂಗಲ್ ಧಿಲ್ಲೋನ್ ನಿಧನ

Public TV
1 Min Read
Mangal Dhillon 1

ಣಭೂಮಿ, ದಿಲ್ ತೇರಾ ಆಶಿಕ್ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಬಾಲಿವುಡ್ (Bollywood) ನಟ ಮಂಗಲ್ ಧಿಲ್ಲೋನ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ (Death). ಹಲವು ವರ್ಷಗಳಿಂದ ಅವರು ಕ್ಯಾನ್ಸರ್ (Cancer) ನಿಂದ ಬಳಲುತ್ತಿದ್ದರು. ಹಲವು ದಿನಗಳಿಂದ ಆಸ್ಪತ್ರೆಯ ಬೆಡ್ ಮೇಲೆ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದರು. ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟಿದ್ದಾರೆ.

Mangal Dhillon 3

ಕಿರುತೆರೆ ಮತ್ತು ಸಿನಿಮಾ ಎರಡೂ ಕ್ಷೇತ್ರಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಮಂಗಲ್ (Mangal Dhillon), ಪ್ಯಾರ್ ಕಾ ದೇವತಾ, ವಿಶ್ವಾತ್ಮ,  ಟ್ರೈನ್ ಟು ಪಾಕಿಸ್ತಾನ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. 1988ರಲ್ಲಿ ತೆರೆಕಂಡ ಖೋನ್ ಭಾರಿ ಮಾಂಗ್ ಸಿನಿಮಾದಲ್ಲಿ ಮಾಡಿದ್ದ ವಕೀಲ ಪಾತ್ರ ಅವರಿಗೆ ಸಾಕಷ್ಟು ಜನಪ್ರಿಯತೆಯನ್ನು ತಂದುಕೊಟ್ಟಿತ್ತು. ಇದನ್ನೂ ಓದಿ:ಶರ್ವಾನಂದ್ ರಿಸೆಪ್ಷನ್ ಸಂಭ್ರಮದಲ್ಲಿ ಸಿನಿ ತಾರೆಯರ ದಂಡು

Mangal Dhillon 2

ನಟನೆ ಮಾತ್ರವಲ್ಲದೇ, ಬರಹಗಾರನಾಗಿ, ನಿರ್ದೇಶಕನಾಗಿ ಹಾಗೂ ಪಂಜಾಬಿ ಸಿನಿಮಾಗಳ ನಿರ್ಮಾಪಕನಾಗಿಯೂ ಮಂಗಲ್ ಗುರುತಿಸಿಕೊಂಡಿದ್ದರು. ಮಂಗಲ್ ಧಿಲ್ಲೋನ್ ನಿಧನಕ್ಕೆ ಹಲವರು ಸಂತಾಪ ವ್ಯಕ್ತ ಪಡಿಸಿದ್ದಾರೆ. ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್, ನಟ ಯಶ್ ಪಾಲ್ ಶರ್ಮಾ  ಸೋಷಿಯಲ್ ಮೀಡಿಯಾದಲ್ಲಿ ಸಂತಾಪ ಸೂಚಿಸಿದ್ದಾರೆ.

Share This Article