ಬಾಲಿವುಡ್ ನ ಹೆಸರಾಂತ ಹಿರಿಯ ನಟ ರಾಜ್ ಬಬ್ಬರ್ ಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ರಾಜಕಾರಣಿಯೂ ಆಗಿರುವ ರಾಜ್ ಬಬ್ಬರ್, 1996ರಲ್ಲಿ ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿ ಮೇಲೆ ಹಲ್ಲೆ ಮಾಡಿದ್ದರು. ಈ ಕೃತ್ಯಕ್ಕಾಗಿ ಲಕ್ನೋ ನ್ಯಾಯಾಲಯವು ಎರಡು ವರ್ಷ ಜೈಲು ಶಿಕ್ಷೆಯ ಜೊತೆಗೆ 8500 ರೂಪಾಯಿಗಳ ದಂಡ ವಿಧಿಸಿ ಆದೇಶ ಹೊರಡಿಸಿದೆ.
Advertisement
1996ರ ಮೇನಲ್ಲಿ ನಡೆದ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ರಾಜ್ ಬಬ್ಬರ್ ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಅವರು ಸೋತಿದ್ದರು. ಹೀಗಾಗಿ ಅವರ ಮೇಲೆ ಮೂರು ಆರೋಪಗಳನ್ನು ಮಾಡಲಾಗಿತ್ತು. ಸಾರ್ವಜನಿಕ ಸೇವೆಯಲ್ಲಿ ಇರುವ ಅಧಿಕಾರಿಯ ಕೆಲಸಕ್ಕೆ ತಡೆಯೊಡ್ಡುವುದು ಸೇರಿದಂತೆ ಹಲವು ಪ್ರಕರಣಗಳು ಇವರ ಮೇಲೆ ದಾಖಲಾಗಿದ್ದವು. ವಜೀರ್ ಗಂಜ್ ಪೊಲೀಸ್ ಠಾಣೆಯಲ್ಲಿ ಅಧಿಕಾರಿ ದೂರು ದಾಖಲಿಸಿದ್ದರು. ಇದನ್ನೂ ಓದಿ:ಇಸ್ಮಾರ್ಟ್ ಜೋಡಿಗೆ ಜೊತೆಯಾಗಲಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್
Advertisement
Advertisement
ತೀರ್ಪು ಪ್ರಕಟಗೊಳ್ಳುವ ಸಂದರ್ಭದಲ್ಲಿ ರಾಜ್ ಬಬ್ಬರ್ ಸ್ವತಃ ನ್ಯಾಯಾಲಯದಲ್ಲಿ ಹಾಜರಿದ್ದರು. ತೀರ್ಪು ಪ್ರಕಟಗೊಳ್ಳುತ್ತಿದ್ದಂತೆಯೇ ಭಾವುಕರಾದರು. ನಟ ಮತ್ತು ರಾಜಕಾರಣಿಯಾಗಿರುವ ರಾಜ್ 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ವೆಬ್ ಸೀರಿಸ್ ನಲ್ಲೂ ಕಾಣಿಸಿಕೊಂಡಿದ್ದಾರೆ. ಮೂರು ಬಾರಿ ಸಂಸದರಾಗಿ ಸೇವೆ ಸಲ್ಲಿಸಿರುವ ಅವರು, ಇದೀಗ ಕಾಂಗ್ರೆಸ್ ಪಕ್ಷದ ಜೊತೆ ಗುರುತಿಸಿಕೊಂಡಿದ್ದಾರೆ. 2008ರಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.