ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ನಿಧನ

Public TV
1 Min Read
rishi

ಮುಂಬೈ: ಬಾಲಿವುಡ್ ಹಿರಿಯ ನಟ ರಿಷಿ ಕಪೂರ್(67) ಇಂದು ಮುಂಬೈನ ಎಚ್‍ಎನ್ ರಿಯಲಯನ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕ್ಯಾನ್ಸರ್ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ರಿಷಿ ಕಪೂರ್ ಅವರು ಮುಂಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಕ್ರಿಯಾಶೀಲವಾಗಿದ್ದ ರಿಷಿ ಕಪೂರ್ ಅನಾರೋಗ್ಯದ ಕಾರಣ ಏಪ್ರಿಲ್ 2ರಿಂದ ಏನನ್ನೂ ಪೋಸ್ಟ್ ಮಾಡಿಲ್ಲ. ಇತ್ತೀಚೆಗಷ್ಟೇ ತಮ್ಮ ಮುಂದಿನ ಪ್ರಾಜೆಕ್ಟ್ ಬಗ್ಗೆಯೂ ತಿಳಿಸಿದ್ದರು ರಿಷಿ ಕಪೂರ್. ದೀಪಿಕಾ ಪಡುಕೋಣೆ ಜೊತೆಗೆ ಹಾಲಿವುದ್ ಸಿನಿಮಾ ‘ದಿ ಇಂಟರ್ನ್’ ನಲ್ಲಿ ನಟಿಸುತ್ತಿರುವುದಾಗಿ ತಿಳಿಸಿದ್ದರು.

ಈ ಬಗ್ಗೆ ಟ್ವೀಟ್ ಮಾಡಿರುವ ನಟ ಅಮಿತಾಬ್ ಬಚ್ಚನ್, ರಿಷಿ ಕಪೂರ್ ಇನ್ನಿಲ್ಲ ಎಂದು ಬರೆದುಕೊಂಡಿದ್ದಾರೆ.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ರಿಷಿ ಕಪೂರ್ ಅವರು ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಅಮೆರಿಕದಲ್ಲಿ ಚಿಕಿತ್ಸೆ ಪಡೆದು ಭಾರತಕ್ಕೆ ವಾಪಸ್ಸಾಗಿದ್ದರು. ಆ ನಂತರ ಇದೇ ವರ್ಷ ಫೆಬ್ರವರಿ ತಿಂಗಳಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು.

1580794701 RishiKapoorS

ನಿನ್ನೆಯಷ್ಟೇ ಬಾಲಿವುಡ್ ನ ಖ್ಯಾತ  ನಟ ಇರ್ಫಾನ್ ಖಾನ್ ವಿಧಿವಶರಾಗಿದ್ದರು. ಕೊಲೊನ್ ಇನ್‍ಫೆಕ್ಷನ್‍ನಿಂದಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇರ್ಫಾನ್ ಖಾನ್ (53) ಚಿಕಿತ್ಸೆ ಫಲಿಸದೆ ಬುಧವಾರ ಮೃತಪಟ್ಟಿದ್ದರು. ಶನಿವಾರವಷ್ಟೇ ಅವರ ತಾಯಿ ತೀರಿಕೊಂಡಿದ್ದರು. ಆದರೆ ಲಾಕ್‍ಡೌನ್ ಹಿನ್ನೆಲೆ ಇರ್ಫಾನ್ ಖಾನ್ ಅವರು ತಾಯಿಯ ಅಂತಿಮ ಸಂಸ್ಕಾರಕ್ಕೆ ಹೋಗಿರಲಿಲ್ಲ. ವಿಡಿಯೋ ಕಾನ್ಫರೆನ್ಸ್ ಮೂಲಕ ಅಂತಿಮ ದರ್ಶನ ಪಡೆದಿದ್ದರು.

Share This Article
Leave a Comment

Leave a Reply

Your email address will not be published. Required fields are marked *